ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಪಿಂಚಣಿ ಯೋಜನೆ ಶೀಘ್ರದಲ್ಲೇ ಜಾರಿ

ಬೆಂಗಳೂರು : ರಾಜ್ಯ ಸರ್ಕಾರಿ (Government) ನೌಕರರ (Employees ) ಬಹುದಿನಗಳ ಕನಸಾಗಿರುವ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಸುಳಿವು ಸಿಕ್ಕಿದ್ದು, ನೌಕರರ ವಲಯದಲ್ಲಿ ಸಂತಸದ ವಾತಾವರಣ ಮೂಡಿದೆ.

ಎನ್‌ಪಿಎಸ್ (NPS) ರದ್ದುಪಡಿಸಿ ಒಪಿಎಸ್ ಜಾರಿಗೆ ತರುವುದು ಸರ್ಕಾರದ ಪ್ರಮುಖ ಭರವಸೆಗಳಲ್ಲಿ ಒಂದಾಗಿದೆ. ಈ ಕುರಿತು ರಚಿಸಲಾಗಿರುವ ಹಿರಿಯ ಐಎಎಸ್ ಅಧಿಕಾರಿ ಅಂಜುಮ್ ಪರ್ವೇಜ್ ဦးತೃತ್ವದ ಅಧ್ಯಯನ ಸಮಿತಿಯ ಅಂತಿಮ ವರದಿ ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.

ವರದಿ ಕೈಸೇರಿದ ತಕ್ಷಣ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಸಾಧಕ-ಬಾಧಕಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರದ ಪ್ರಮುಖ ನಾಯಕರು ಭರವಸೆ ನೀಡಿದ್ದಾರೆ. ಈಗಾಗಲೇ ೨೦೦೬ಕ್ಕಿಂತ ಮೊದಲು ನೇಮಕಾತಿ ಅಧಿಸೂಚನೆ ಹೊರಡಿಸಲಾದ ಸುಮಾರು ೧೩,೦೦೦ ನೌಕರರಿಗೆ ಒಪಿಎಸ್ ವ್ಯಾಪ್ತಿಗೆ ತರಲಾಗಿದೆ.

ಉಳಿದ ಎಲ್ಲಾ ನೌಕರರಿಗೂ ಹಳೆಯ ಪಿಂಚಣಿ ಸೌಲಭ್ಯ ವಿಸ್ತರಿಸುವ ನಿಟ್ಟಿನಲ್ಲಿ ಆರ್ಥಿಕ ಮತ್ತು ಆಡಳಿತಾತ್ಮಕ ಸವಾಲುಗಳನ್ನು ಸರಿದೂಗಿಸಿ, ನೌಕರರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಲಾಗಿದೆ. ಈ ನಿರ್ಧಾರದಿಂದ ಲಕ್ಷಾಂತರ ಸರ್ಕಾರಿ ನೌಕರರಿಗೆ ಭವಿಷ್ಯದ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಸಿಗುವ ನಿರೀಕ್ಷೆಯಿದೆ.

Related Articles

ಇತ್ತೀಚಿನ ಸುದ್ದಿಗಳು