ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪೆಟ್ರೋಲ್‌ ಜೊತೆ ಇಥನಾಲ್ ಮಿಶ್ರಣ ಪ್ರಮಾಣ ಇನ್ನಷ್ಟು ಹೆಚ್ಚಿಸಲು ಕೇಂದ್ರ ಚಿಂತನೆ: ಫ್ಲೆಕ್ಸ್-ಫ್ಯುಯೆಲ್ ವಾಹನಗಳತ್ತ ಒಲವು

PPeepal Media

Peepal Media • ದೇಶ

• 1 ನಿಮಿಷದ ಓದು

ಪೆಟ್ರೋಲ್‌ ಜೊತೆ ಇಥನಾಲ್ ಮಿಶ್ರಣ ಪ್ರಮಾಣ ಇನ್ನಷ್ಟು ಹೆಚ್ಚಿಸಲು ಕೇಂದ್ರ ಚಿಂತನೆ: ಫ್ಲೆಕ್ಸ್-ಫ್ಯುಯೆಲ್ ವಾಹನಗಳತ್ತ ಒಲವು

ದೆಹಲಿ: ಪ್ರಸ್ತುತ ಚಾಲ್ತಿಯಲ್ಲಿರುವ ಶೇಕಡಾ 20ರ (ಇ20) ಮಟ್ಟಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪೆಟ್ರೋಲ್‌ ಜೊತೆ ಇಥನಾಲ್ ಬೆರೆಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಮಂತ್ರಿಗಳ ಸಲಹೆಗಾರ ತರುಣ್ ಕಪೂರ್ ತಿಳಿಸಿದ್ದಾರೆ. ಇದಕ್ಕಾಗಿ ದೇಶದಲ್ಲಿ ಫ್ಲೆಕ್ಸ್-ಫ್ಯುಯೆಲ್ (ಹೊಂದಾಣಿಕೆಯ ಇಂಧನ) ವಾಹನಗಳನ್ನು ವ್ಯಾಪಕವಾಗಿ ಮಾರುಕಟ್ಟೆಗೆ ತರುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

‘ದಿ ಇಂಡಿಯಾ ಶುಗರ್ ಅಂಡ್ ಬಯೋ ಎನರ್ಜಿ ಕಾನ್ಫರೆನ್ಸ್ – 2026’ ಸಮಾವೇಶವನ್ನುದ್ದೇಶಿಸಿ ವರ್ಚುವಲ್ ಆಗಿ ಮಾತನಾಡಿದ ತರುಣ್ ಕಪೂರ್, ದೇಶದಲ್ಲಿ ಇದುವರೆಗೆ ಇ20 ಕಾರ್ಯಕ್ರಮವು ಯಶಸ್ವಿಯಾಗಿ ಮುನ್ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಹಲವು ಪ್ರಮುಖ ವಾಹನ ತಯಾರಿಕಾ ಕಂಪನಿಗಳು ತಮ್ಮ ಯೋಜನೆಗಳನ್ನು ಪ್ರಕಟಿಸಿವೆ. ಸದ್ಯ ದೇಶದ ಗಮನವನ್ನು ಫ್ಲೆಕ್ಸ್-ಫ್ಯುಯೆಲ್ ವಾಹನಗಳ ಬಳಕೆಯತ್ತ ಮುನ್ನಡೆಸುವುದು ಹಾಗೂ ಪೆಟ್ರೋಲ್‌ನಲ್ಲಿ ಶೇಕಡಾ 20ಕ್ಕಿಂತ ಹೆಚ್ಚಿನ ಪ್ರಮಾಣದ ಇಥನಾಲ್ ಮಿಶ್ರಣಕ್ಕೆ ಹಸಿರು ನಿಶಾನೆ ತೋರುವುದರ ಮೇಲೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕಪೂರ್ ಮಾಹಿತಿ ನೀಡಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು