ಬಂಗಾಳದಲ್ಲಿ ವಾಯುಭಾರ ಕುಸಿತ ರಾಜ್ಯದಲ್ಲಿ ಭಾರೀ – ಮಳೆಯ ನಿರೀಕ್ಷೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಕೆಲವು ದಿನ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಸೆಪ್ಟೆಂಬರ್ 20ರಿಂದ 24ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತು ಗುಡುಗು-ಮಿಂಚಿನ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.20ರಿಂದ ಸೆ.24ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು IMD ನೀಡಿದೆ.

ಈ ಜಿಲ್ಲೆಗಳಲ್ಲಿ ಎಚ್ಚರಿಕೆ:
ಕರಾವಳಿ ಜಿಲ್ಲೆಗಳ ಜೊತೆಗೆ ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಮಳೆ ಹಾಗೂ ಗುಡುಗು-ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Related Articles

ಇತ್ತೀಚಿನ ಸುದ್ದಿಗಳು