ಬಿಡದಿ ಟೌನ್‌ಶಿಪ್ ವಿಚಾರ ತೀವ್ರಗೊಂಡ – ರೈತರ ಹೋರಾಟ

ರಾಮನಗರ: ವಿವಾದಿತ (Ramanagara) ಬಿಡದಿ ಟೌನ್‌ಶಿಪ್ (Bidadi Township) ಯೋಜನೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು (Farmers Protest) ತೀವ್ರಗೊಂಡಿದೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಒತ್ತಾಯಿಸಿ ರೈತರು ಸೋಮವಾರದಿಂದ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ರಸ್ತೆ ತಡೆದು ಆಕ್ರೋಶ
ಬಿಡದಿ-ಹಾರೋಹಳ್ಳಿ ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆಗಿಳಿದ ಅನ್ನದಾತರು, ರಸ್ತೆಯ ಮಧ್ಯೆ ಎತ್ತಿನ ಗಾಡಿ ಹಾಗೂ ಟ್ರಾಕ್ಟರ್‌ಗಳನ್ನು ನಿಲ್ಲಿಸಿ ಸರ್ಕಾರದ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅತ್ತ ಮಹಿಳೆಯರು ಪೊರಕೆ ಹಿಡಿದು ಕುಳಿತು ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದರು.

ಸರ್ಕಾರದ ವಿರುದ್ಧ ಗಂಭೀರ ಆರೋಪ
ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ ರೈತರು, ಈ ಹಿಂದೆ ಸರ್ಕಾರ ರಚನೆ ಮಾಡಿರುವ ಸಮಿತಿಯು ಯಾವುದೇ ಕಾರ್ಯಾರಂಭ ಮಾಡುತ್ತಿಲ್ಲ ಎಂದು ದೂರಿದರು. ಸರ್ಕಾರದ ಈ ಮೌನ ಹಾಗೂ ವಿಳಂಬ ಧೋರಣೆಯ ಹಿಂದೆ ದುರ್ಬುದ್ಧಿಯಿದೆ ಎಂದು ಆಕ್ರೋಶ ಹೊರಹಾಕಿದರು.

ಬಿಗಿ ಪೊಲೀಸ್ ಬಂದೋಬಸ್ತ್
ರೈತರ ಆಕ್ರೋಶ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪೊಲೀಸರ ಕಣ್ಗಾವಲು ಹಾಗೂ ತಡೆ ನಡುವೆಯೂ ಪಟ್ಟುಬಿಡದ ರೈತರು ರಸ್ತೆ ಮಧ್ಯೆಯೇ ಕುರ್ಚಿಗಳನ್ನು ಹಾಕಿ ತಮ್ಮ ಧರಣಿ ಹಾಗೂ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು