ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ವರ್ತೂರು ಅಕ್ರಮ ವಲಸಿಗರ ವದಂತಿ: ವೈರಲ್ ವಿಡಿಯೋದಲ್ಲಿನ ಆರೋಪಗಳನ್ನು ತಳ್ಳಿಹಾಕಿದ ಪೊಲೀಸರುಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರಿ ಇಳಿಕೆ: ಕೆ.ಜಿಗೆ ₹20 ಕಡಿತ, ಗ್ರಾಹಕರಿಗೆ ತುಸು ನಿರಾಳ!ಚಿನ್ನದ ಬೆಲೆ ಇಳಿಕೆಗೆ ತಮ್ಮ ಮನವಿಯೇ ಕಾರಣ ಎಂದ ಪ್ರಧಾನಿ ಮೋದಿಗೆ ಜನಸಾಮಾನ್ಯರ ಕೆಲವು ಪ್ರಶ್ನೆಗಳುಸುಪ್ರೀಂಕೋರ್ಟ್ ನ್ಯಾಯಮೂರ್ತಿಗೆ ನೀಡಬೇಕಿದ್ದ ಗೌರವ ವಂದನೆ ಓವೈಸಿಗೆ ಸಲ್ಲಿಕೆ; ಉತ್ತರ ಪ್ರದೇಶ ಪೊಲೀಸರಿಂದ ತನಿಖೆಗೆ ಆದೇಶಸರ್ಕಾರಕ್ಕೆ ಶಾಕ್: ಮೂವರು ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಎಚ್ಚರಿಕೆ!ಚರಿತ್ರೆಯ ಮೌನ ಸಾಕ್ಷಿಗಳು: ಭಾಷೆಗಳ ಗಡಿ ದಾಟಿದ ರೂಮಿ; ಪರ್ಷಿಯನ್‌ನಿಂದ ವಿಶ್ವದ ಹೃದಯಗಳವರೆಗೆ ಒಂದು ಪ್ರೇಮಯಾನಕಾರ್ಯದರ್ಶಿ ಹುದ್ದೆ | ಸಿಎಂ ಕಚೇರಿಯಿಂದ ಕರೆ ಬಂದ ನಂತರ ನಿರ್ಧರಿಸುವೆ: ತನ್ವೀರ್‌ ಸೇಠ್ದೀಪಾವಳಿ ವೇಳೆ ಪಟಾಕಿ ಸಿಡಿಸಿದ ಪ್ರಕರಣ: ಪೊಲೀಸರ ವಿರುದ್ಧ MIT ವಿದ್ಯಾರ್ಥಿಗಳಿಂದ ಸಿಎಂಗೆ ದೂರುರವಿ ಹಂಜ್ ಬಂಧನ ಸ್ವಾಗತಾರ್ಹ; ಆತನ ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಎ. ನಾರಾಯಣ ಗೌಡ ಆಗ್ರಹಡಾರ್ಕ್ ವೆಬ್‌ನಲ್ಲಿ ಅಗ್ನಿವೀರ್ ದತ್ತಾಂಶ ಮಾರಾಟಕ್ಕೆ ಯತ್ನ: 14 ವರ್ಷದ ಬಾಲಕನನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರುಬಸವ ಮಂಟಪ ಕೃತಿ ವಿವಾದ: ಲೇಖಕ ರವಿ ಹಂಜ್ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆಲಕ್ಷ ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಆರ್‌ಎಫ್ ಅಧಿಕಾರಿ –  ಅರಣ್ಯಾಧಿಕಾರಿ ವಿಶ್ವನಾಥ್ ಲೋಕಾ ಬಲೆಗೆಕಿವೀಸ್‌ ವಿರುದ್ಧ ಕನ್ನಡಿಗ ಕೆ.ಎಲ್‌ ರಾಹುಲ್‌ ಅಬ್ಬರ, ಅಮೋಘ ಶತಕ – ಐತಿಹಾಸಿಕ ದಾಖಲೆಇ-ಕೆವೈಸಿ ಯಶಸ್ವಿಯಾದರೂ ‘ನಿಧನ’ ಎಂದು ತೋರಿಸಿದ ತಂತ್ರಾಂಶ – ಗೃಹಲಕ್ಷ್ಮಿ ಯೋಜನೆಯ ಮಹಾಲೋಪಡಿ.1ರೊಳಗೆ ರೈತರ ಖಾತೆಗೆ 5,000 ರೂ. ಬರ ಪರಿಹಾರ – ಡಾ. ಜಿ. ಪರಮೇಶ್ವರ್ಹೈದರಾಬಾದ್‌ ಕಾಂಗ್ರೆಸ್ ಖಾತೆ ನಿರ್ಬಂಧ ಮೆಟಾ ಕಚೇರಿ – ಧ್ವಂಸಗೊಳಿಸಿದ ಕಾರ್ಯಕರ್ತರುಹೊಸ ಪಾಸ್‌ಪೋರ್ಟ್‌ಗಾಗಿ ಶೇಖ್‌ ಹಸೀನಾ ಮತ್ತೊಮ್ಮೆ ಮನವಿ; ಬಾಂಗ್ಲಾದೇಶ ಸರ್ಕಾರಕ್ಕೆ ತುರ್ತು ಪತ್ರಐದನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: 15 ಸಾವಿರ ರೂ. ಗೌರವಧನಕ್ಕೆ ಲಿಖಿತ ಆದೇಶಕ್ಕೆ ಪಟ್ಟುಬಿಜೆಪಿ ಶಾಸಕರ ನಡೆಗೆ ವಿಜಯೇಂದ್ರ ಗರಂ: ಸಿಎಂ ಔತಣಕೂಟದಲ್ಲಿ ಭಾಗವಹಿಸಿದ್ದಕ್ಕೆ ಆಕ್ಷೇಪಕ್ಷೇತ್ರ ಪುನರ್ವಿಂಗಡಣೆಗೆ ಕಾಂಗ್ರೆಸ್ ನಾಲ್ಕು ಅಂಶಗಳ ಸೂತ್ರ; 543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿ, 25 ವರ್ಷ ಬದಲಾವಣೆಗೆ ವಿರಾಮ!

ಕ್ಯಾನ್ಸರ್ ರೋಗಿಗಳಿಗೆ ಒಳ್ಳೆಯ ಸುದ್ದಿ: ಔಷಧಗಳ ಬೆಲೆ ಶೇ. 70ರಷ್ಟು ಇಳಿಕೆ ಸಾಧ್ಯತೆ!

PPeepal Media

Peepal Media ದೇಶ

• 1 ನಿಮಿಷದ ಓದು

ಕ್ಯಾನ್ಸರ್ ರೋಗಿಗಳಿಗೆ ಒಳ್ಳೆಯ ಸುದ್ದಿ: ಔಷಧಗಳ ಬೆಲೆ ಶೇ. 70ರಷ್ಟು ಇಳಿಕೆ ಸಾಧ್ಯತೆ!

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸುವ ಜೀವರಕ್ಷಕ ಔಷಧಗಳ ದರ ಬರೋಬ್ಬರಿ ಶೇಕಡಾ 70 ರಷ್ಟು ಇಳಿಕೆಯಾಗುವ ನಿರೀಕ್ಷೆಯಿದೆ. ಒಟ್ಟು ಚಿಕಿತ್ಸಾ ವೆಚ್ಚದಲ್ಲಿ ಔಷಧಗಳ ಬೆಲೆಯೇ ಸಿಂಹಪಾಲು ಹೊಂದಿರುವುದರಿಂದ, ಕ್ಯಾನ್ಸರ್ ರೋಗಿಗಳು ಮತ್ತು ಅವರ ಕುಟುಂಬಗಳು ಎದುರಿಸುತ್ತಿದ್ದ ತೀವ್ರ ಆರ್ಥಿಕ ಹೊರೆಗೆ ಇದು ದೊಡ್ಡ ಮಟ್ಟದ ನೆಮ್ಮದಿ ತರಲಿದೆ.

ಕೆಲವು ಕ್ಯಾನ್ಸರ್ ಔಷಧಗಳ ಚಿಲ್ಲರೆ ದರ (ಪಿಟಿಆರ್ – Price to Retailer) ಮತ್ತು ಗರಿಷ್ಠ ಮಾರಾಟ ದರದ (ಎಂಆರ್‌ಪಿ – MRP) ನಡುವಿನ ಅಸಹಜ ವ್ಯತ್ಯಾಸದ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿತ್ತು. ವಿಚಾರಣೆಯ ಸಂದರ್ಭದಲ್ಲಿ, ಮೆಡಿಕಲ್ ಶಾಪ್ ಅಥವಾ ರಿಟೇಲರ್‌ಗಳಿಗೆ ಸುಮಾರು 2,700 ರೂಪಾಯಿಗೆ ಸಿಗುವ ಕ್ಯಾನ್ಸರ್ ಔಷಧಿಯ ಮೇಲೆ ಬರೋಬ್ಬರಿ 27,000 ರೂಪಾಯಿ ಎಂಆರ್‌ಪಿ ನಿಗದಿಪಡಿಸಿ ಮಾರಾಟ ಮಾಡುತ್ತಿರುವುದನ್ನು ಉಲ್ಲೇಖಿಸಿದ್ದ ನ್ಯಾಯಾಲಯ, ಇದು “ಹಾಡುಹಗಲೇ ನಡೆಯುತ್ತಿರುವ ದರೋಡೆ” ಎಂದು ಕಿಡಿಕಾರಿತ್ತು.

ಸುಪ್ರೀಂ ಕೋರ್ಟ್‌ನ ಈ ಕಟು ಎಚ್ಚರಿಕೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರವು ಕ್ಯಾನ್ಸರ್ ಔಷಧಗಳನ್ನು ಕೈಗೆಟುಕುವ ದರದಲ್ಲಿ ಒದಗಿಸಲು ಕಠಿಣ ಕ್ರಮಕ್ಕೆ ಮುಂದಾಗಿದೆ. ನಿಯಂತ್ರಣ ಪಟ್ಟಿಯಲ್ಲಿಲ್ಲದ (ನಾನ್-ಷೆಡ್ಯೂಲ್ಡ್) ಎಲ್ಲಾ ಕ್ಯಾನ್ಸರ್ ನಿರೋಧಕ ಔಷಧಗಳ ಟ್ರೇಡ್ ಮಾರ್ಜಿನ್ (ಲಾಭಾಂಶದ ಮಿತಿ) ಅನ್ನು ಎಂಆರ್‌ಪಿ ಮೇಲೆ ಗರಿಷ್ಠ ಶೇಕಡಾ 30 ಕ್ಕೆ ಮಿತಿಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ಕೆಲವು ಪ್ರಮುಖ ಕ್ಯಾನ್ಸರ್ ಔಷಧಗಳ ಎಂಆರ್‌ಪಿ ಶೇ. 70 ರಷ್ಟು ತಗ್ಗಲಿದ್ದು, ದೇಶದ ರೋಗಿಗಳಿಗೆ ವಾರ್ಷಿಕವಾಗಿ ಅಂದಾಜು 2,500 ಕೋಟಿ ರೂಪಾಯಿ ಉಳಿತಾಯವಾಗಲಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು