ದೇಶದ ಯುವ ಜನತೆಯ ಆಕ್ರೋಶ ತಡೆಯಲು ಯಾರಿಂದಲೂ ಸಾಧ್ಯವಿಲ್ಲ – ಪ್ರಕಾಶ್ ರಾಜ್

ನವದೆಹಲಿ: ಸಿಜೆಪಿ (CJP) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಬಂಧನ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ವಿಧಿಸಿರುವ ನಿರ್ಬಂಧಗಳುನ್ನು ನಟ ಪ್ರಕಾಶ್ ರಾಜ್ ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಭಟನೆ ನಡೆಸುವ ಸ್ಥಳವನ್ನು ಬದಲಾಯಿಸಬಹುದು, ಪ್ರತಿಭಟನೆಯನ್ನು ತಡೆಯಬಹುದು. ಆದರೆ, ದೇಶದ ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ತೆಗೆದುಹಾಕಿರುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ದೇಶದ ಜನರು ತಮ್ಮ ಪ್ರಶ್ನೆಗಳನ್ನು ಕೇಳುವುದನ್ನು ಯಾವುದೇ ನಿರ್ಬಂಧಗಳಿಂದ ತಡೆಯಲು ಸಾಧ್ಯವಿಲ್ಲ ಎಂದು ಪ್ರಕಾಶ್ ರಾಜ್ ತಮ್ಮ X ಖಾತೆಯಲ್ಲಿ ಪ್ರಶ್ನಿಸಿದ್ದಾರೆ. ನೀವು ಪ್ರತಿಭಟನೆಯ ಸ್ಥಳವನ್ನು ಬದಲಾಯಿಸಬಹುದು. ಪ್ರತಿಭಟನೆಯನ್ನು ತಡೆಯಬಹುದು. ಆದರೆ, ಈ ದೇಶದ ಧ್ವನಿಯನ್ನು ತಡೆಯಲು ಸಾಧ್ಯವಿಲ್ಲ. ಇಡೀ ದೇಶವೇ ಜಂತರ್ ಮಂತರ್ ಆಗಲಿದೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಜನರು ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಮತ್ತು ಮತದಾರರ ಹಕ್ಕುಗಳ ಉಲ್ಲಂಘನೆ ಆರೋಪ ಸಂಬಂಧ CEC ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ, ಇಂಡಿಯಾ ಮೈತ್ರಿಕೂಟ ದೆಹಲಿ ಸೇರಿದಂತೆ ವಿವಿಧ ನಗರಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ.

Related Articles

ಇತ್ತೀಚಿನ ಸುದ್ದಿಗಳು