ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ರಾಹುಲ್ ಗಾಂಧಿ v/s ಅಮಿತ್ ಶಾ: ‘ವೋಟ್ ಚೋರಿ’ ಆರೋಪಕ್ಕೆ ಸಂಸತ್ತಿನ ವಿಶೇಷ ಅಧಿವೇಶನದ ಸವಾಲು; ರಾಜಕೀಯ ಸಂಘರ್ಷಕ್ಕೆ ಹೊಸ ತಿರುವು!ಎಐ ಈಗ ಸೈಬರ್ ದಾಳಿಕೋರರಿಗೂ ಅಸ್ತ್ರ: ವಿದ್ಯುತ್, ನೀರು, ಆಹಾರ ಪೂರೈಕೆಗೂ ಕಾದಿದೆಯೇ ಡಿಜಿಟಲ್ ಕಂಟಕ?ನನ್ನ ಮೇಲೆ ಇಡಿ, ಐಟಿ ದಾಳಿ ನಡೆಸಲು ಕೇಂದ್ರ ಸಚಿವರಿಂದ ಸಂಚು – ಪ್ರಿಯಾಂಕ್‌ ಖರ್ಗೆತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದರು HD ಸ್ಟಿಂಗ್ ಸ್ವಾಮಿ – ಎಂ. ಲಕ್ಷ್ಮಣ್ಮನುವ್ಯಾದಿ ಅಡ್ಡಂಡ ಕಾರಿಯಪ್ಪನ ಮುಖಕ್ಕೆ ಮಸಿರಾಜಧಾನಿಯಲ್ಲಿ ಅಕ್ರಮ ಪಿಜಿಗಳ ಹಾವಳಿ ನಿಯಂತ್ರಣಕ್ಕೆ – GBA ಹೊಸ ಮಾರ್ಗಸೂಚಿವಾರದ ಹಿಂದೆ ನಾಪತ್ತೆಯಾಗಿದ್ದ ದಲಿತ ನಾಯಕ – ಧರ್ಮಸ್ಥಳದಲ್ಲಿ ಶವವಾಗಿ ಪತ್ತೆಆಂಧ್ರ ಕರಾವಳಿಗೆ ಭಾಗಗಳಿಗೆ ಅಪ್ಪಳಿಸಿದ ಚಂಡಮಾರುತ, ಮೀನುಗಾರಿಕೆ ದೋಣಿಗಳಿಗೆ ಹಾನಿ – ಭಾರಿ ಅನಾಹುತಅಮಿತ್ ಶಾ ಭೇಟಿಯಾದ ಚಿರಂಜೀವಿ, ರಾಮ್ ಚರಣ್; ಭೇಟಿಯ ಉದ್ದೇಶ ಏನು ಗೊತ್ತಾ?ವಿಜಯ ಪ್ರಸಾದ್ ಹೊಸ ಸಿನಿಮಾದಲ್ಲಿ ರಚಿತಾ ರಾಮ್; ಈ ಬಾರಿ ಡಿಫರೆಂಟ್ ಆಗಿ ಪ್ರೇಕ್ಷಕರ ಮುಂದೆ!ಕೆಪಿಎಸ್‌ಸಿ ನೇಮಕಾತಿ ಅಕ್ರಮ ತನಿಖೆಗೆ ಹೊಸ ಸಾರಥಿ: ಎಸ್‌ಐಟಿ ಜವಾಬ್ದಾರಿ ಆರ್. ಹಿತೇಂದ್ರ ಹೆಗಲಿಗೆಕಬ್ಬು ಬೆಲೆ ಬಿಕ್ಕಟ್ಟು: ಇಂದು ಕಾರ್ಖಾನೆ ಮಾಲೀಕರು-ರೈತ ಸಂಘಟನೆಗಳ ಸಭೆ; ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆಗಾಂಧಿ ಹತ್ಯೆಯ ಸತ್ಯ ನಾಟಕ ವಿವಾದ: ಸುಚಿತ್ರಾ ಫಿಲಂ ಸೊಸೈಟಿಗೆ ಬನಶಂಕರಿ ಪೊಲೀಸರ ನೋಟಿಸ್ಮೋದಿ ಅವರಿಗೆ ಬಹಿರಂಗ ಚರ್ಚೆಗೆ ರಾಹುಲ್ ಗಾಂಧಿ ಸವಾಲು; ವಿದೇಶಿ ಬೆಂಬಲದ ಆರೋಪಕ್ಕೆ ತಿರುಗೇಟು16 ವರ್ಷಗಳ ಬಳಿಕ ದೇಶದಲ್ಲಿ ಜನಗಣತಿ ಪ್ರಕ್ರಿಯೆಗೆ ಅಧಿಕೃತ ವೇಳಾಪಟ್ಟಿ ಪ್ರಕಟ; ಜನವರಿ 25ರಿಂದ ಮನೆಮನೆ ಸಮೀಕ್ಷೆ ಆರಂಭಅಸ್ಸಾಂ: ಮುಸ್ಲಿಂ ಬಾಹುಳ್ಯದ ಆಲಂಗಂಜ್‌ ಪ್ರದೇಶದಲ್ಲಿ ತೆರವು ಕಾರ್ಯಾಚರಣೆಯಿಂದ ನಿರ್ವಸತಿಗರಾದ 4,000ಕ್ಕೂ ಹೆಚ್ಚು ನಿವಾಸಿಗಳುಟಿಕೆಟ್ ರೇಟ್‌ ಜಾಸ್ತಿ ಅನ್ಸಿದ್ರೆ ವಿಮಾನದಲ್ಲಿ ಓಡಾಡಬೇಡಿ: ಸುಪ್ರೀಂ ಕೋರ್ಟ್SIR, EVM ವಿಚಾರದಲ್ಲಿ ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರ ಸಿದ್ಧ: ರಾಹುಲ್ ಗಾಂಧಿಗೆ ಅಮಿತ್ ಶಾ ಸವಾಲುಎಸ್‌ಐಆರ್‌ ಪ್ರತಿಭಟನೆ | ಬಾಂಬೆ ಹೈಕೋರ್ಟ್‌ ಎದುರು ಬೇಷರತ್‌ ಕ್ಷಮೆಯಾಚಿಸಿ‌, ಮುಚ್ಚಳಿಕೆ ಬರೆದುಕೊಟ್ಟ ನಟ ಇಮ್ರಾನ್‌ ಖಾನ್ಅಡ್ಡಂಡ ಪ್ರಕರಣ | ಸಂವಿಧಾನದ ಮೇಲೆ ಸವಾರಿ ಮಾಡಲು ಯತ್ನಿಸಿದರೆ ಜನರೇ ಕಾಂಗ್ರೆಸಿಗೆ ಬುದ್ಧಿ ಕಲಿಸುತ್ತಾರೆ: ತೇಜಸ್ವಿ ಸೂರ್ಯ ವಾಗ್ದಾಳಿ

ಆಂಧ್ರ ಕರಾವಳಿಗೆ ಭಾಗಗಳಿಗೆ ಅಪ್ಪಳಿಸಿದ ಚಂಡಮಾರುತ, ಮೀನುಗಾರಿಕೆ ದೋಣಿಗಳಿಗೆ ಹಾನಿ – ಭಾರಿ ಅನಾಹುತ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ದೇಶ, ಮೀಡಿಯಾ

• 1 ನಿಮಿಷದ ಓದು

ಆಂಧ್ರ ಕರಾವಳಿಗೆ ಭಾಗಗಳಿಗೆ ಅಪ್ಪಳಿಸಿದ ಚಂಡಮಾರುತ, ಮೀನುಗಾರಿಕೆ ದೋಣಿಗಳಿಗೆ ಹಾನಿ – ಭಾರಿ ಅನಾಹುತ

ಅಮರಾವತಿ: ಇಂದು ಮಂಗಳವಾರ ನಸುಕಿನ ಜಾವ ಆಂಧ್ರಪ್ರದೇಶದ ದಕ್ಷಿಣ ಕರಾವಳಿಗೆ ಅಪ್ಪಳಿಸಿದ ತೀವ್ರ ಚಂಡಮಾರುತ ‘ಮುರಸು’ ಭಾರಿ ಅನಾಹುತ ಸೃಷ್ಟಿಸಿದೆ. ಚಂಡಮಾರುತದ ಅಬ್ಬರಕ್ಕೆ ಸಾವಿರಾರು ಮರಗಳು ಧರೆಗುರುಳಿದ್ದು, ನೂರಾರು ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ. ಮೀನುಗಾರಿಕಾ ದೋಣಿಗಳು ನಾಶವಾಗಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಪ್ರಕಾಶಂ ಜಿಲ್ಲೆಯ ಒಂಗೋಲ್ ಸಮೀಪ ನೆಲ್ಲೂರು ಮತ್ತು ನರಸಾಪುರ ನಡುವಿನ ಕರಾವಳಿಗೆ ಇಂದು ನಸುಕಿನ ಜಾವ 3.30ರಿಂದ 5.30ರ ಅವಧಿಯಲ್ಲಿ ಚಂಡಮಾರುತ ಅಪ್ಪಳಿಸಿದೆ. ಈ ವೇಳೆ ಗಂಟೆಗೆ 100ರಿಂದ 110 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಿದ್ದು, ಗಾಳಿಯ ವೇಗ ಕೆಲವೊಮ್ಮೆ ಗಂಟೆಗೆ 120 ಕಿ.ಮೀ.ವರೆಗೂ ತಲುಪಿದೆ.

ಪ್ರಕಾಶಂ, ಬಾಪಟ್ಲ, ಪಲ್ನಾಡು ಮತ್ತು ಗುಂಟೂರು ಜಿಲ್ಲೆಗಳು ಚಂಡಮಾರುತದ ತೀವ್ರ ಹೊಡೆತಕ್ಕೆ ಸಿಲುಕಿವೆ. ಭಾರಿ ಮಳೆಯಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ಸಂಪರ್ಕ ವ್ಯವಸ್ಥೆಯಲ್ಲಿಯೂ ವ್ಯತ್ಯಯ ಉಂಟಾಗಿದೆ. ಜಮೀನುಗಳಲ್ಲಿ ಬೆಳೆದು ನಿಂತಿದ್ದ ಬೆಳೆಗಳು ಹಾನಿಗೀಡಾಗಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ನಿನ್ನೆ ಸೋಮವಾರ ಬೆಳಗ್ಗೆ 8.30ರಿಂದ ಇಂದು ನಸುಕಿನ ಜಾವ 5 ಗಂಟೆಯವರೆಗೆ ಪ್ರಕಾಶಂ ಜಿಲ್ಲೆಯ ಕೋತಪಟ್ಟಣಂನಲ್ಲಿ 16.4 ಸೆಂ.ಮೀ ಮಳೆಯಾಗಿದ್ದು, ಈ ಅವಧಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲಾದ ಪ್ರದೇಶ ಎನಿಸಿದೆ. ಇದೇ ಜಿಲ್ಲೆಯ ನಾಗುಲುಪ್ಪಲಪಾಡುವಿನಲ್ಲಿ 11.4 ಸೆಂ.ಮೀ ಹಾಗೂ ಬಾಪಟ್ಲ ಜಿಲ್ಲೆಯ ಚಿರಾಲದಲ್ಲಿ 10 ಸೆಂ.ಮೀ ಮಳೆಯಾಗಿದೆ.

ಚಂಡಮಾರುತದ ಅಬ್ಬರದಿಂದ ಮನೆಗಳು, ಮೀನುಗಾರಿಕಾ ದೋಣಿಗಳು ಹಾಗೂ ಇತರ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, ಕರಾವಳಿ ಗ್ರಾಮಗಳ ನಿವಾಸಿಗಳು ತಮ್ಮ ಸಂಕಷ್ಟದ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಕಳೆದ 14 ವರ್ಷಗಳಲ್ಲಿ ನಾವು ಕಂಡ ಅತ್ಯಂತ ಭೀಕರ ಚಂಡಮಾರುತ ಇದಾಗಿದೆ. ಸರ್ಕಾರ ನಮಗೆ ಸಾಕಷ್ಟು ನೆರವು ನೀಡಿದೆ. ನಮ್ಮ ಗ್ರಾಮದಿಂದ ಸುಮಾರು 400 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳೂ ಸುರಕ್ಷಿತ ಸ್ಥಳಗಳಿಗೆ ತೆರಳಲು ನೆರವಾಗಿವೆ ಎಂದು ಪ್ರಕಾಶಂ ಜಿಲ್ಲೆಯ ಕೋತಪಟ್ಟಣಂನ ಮೀನುಗಾರ್ತಿ ಕೃಷ್ಣಮ್ಮ ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಮೀನುಗಾರಿಕಾ ದೋಣಿಗಳಿಗೆ ಉಂಟಾಗಿರುವ ಹಾನಿಯ ಪ್ರಮಾಣವನ್ನು ಇನ್ನೂ ಪರಿಶೀಲಿಸಿಲ್ಲ ಎಂದು ಹೇಳಿದ್ದಾರೆ.

ಚಂಡಮಾರುತದಿಂದ ರಸ್ತೆ ಸಾರಿಗೆ ವ್ಯವಸ್ಥೆಯೂ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಗೋಚರತೆ ಕಡಿಮೆಯಾಗಿ ವಾಹನ ಚಾಲನೆ ಕಷ್ಟಕರವಾಗಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹಲವು ವಾಹನಗಳು ಸಿಲುಕಿಕೊಂಡಿವೆ. ರಸ್ತೆಗಳ ಮೇಲೆ ಮರಗಳು ಉರುಳಿಬಿದ್ದಿರುವುದು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿರುವುದು ಸಂಚಾರಕ್ಕೆ ಮತ್ತಷ್ಟು ಅಡ್ಡಿಯಾಗಿದೆ.

ವಿಷಯಗಳು: #india #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು