ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ನವೆಂಬರ್ 5ರಿಂದ ಸರ್ಕಾರಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳ – ಸಚಿವ ಭೈರತಿ ಸುರೇಶ್CEC ಜ್ಞಾನೇಶ್ ಕುಮಾರ್ ವಿರುದ್ಧ ನ, 5 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ – ಇಂಡಿಯಾ ಬ್ಲಾಕ್ ಘೋಷಣೆ22,400.58 ಕೋಟಿ ಪರಿಹಾರ ಕೋರಿ ಕೇಂದ್ರಕ್ಕೆ ಜಿ. ಪರಮೇಶ್ವರ್ ಪತ್ರ – ರಾಜ್ಯದಲ್ಲಿ ಭೀಕರ ಬರಗಾಲ‘ರಾಮಾಯಣ’ ಚಿತ್ರಕ್ಕೆ ಕಾನೂನು ಕವಚ; ಪೈರಸಿ ವಿರುದ್ಧ ಬಾಂಬೆ ಹೈಕೋರ್ಟ್ ಸಮರ! ಸಿನಿಮಾ ದೃಶ್ಯ, ಹಾಡು ಮತ್ತು ಧ್ವನಿಮುದ್ರಣಗಳ ಅನಧಿಕೃತ ಬಳಕೆಗೆ ನಿರ್ಬಂಧಸೂಪರ್‌ಮಾರ್ಕೆಟ್ ಫ್ರೀಜರ್‌ನ್ನೇ ಹ್ಯಾಕ್ ಮಾಡಿದ ಸೈಬರ್ ಕಳ್ಳರು! ನಿಮ್ಮ ಮನೆಯ ಸ್ಮಾರ್ಟ್ ಟಿವಿ, ಎಸಿ, ಕ್ಯಾಮೆರಾಗಳೂ ಸುರಕ್ಷಿತವೇ?ಗಾಂಧಿ ಕುರಿತ ನಾಟಕದಿಂದ ಬೀದಿಗೆ ಬಂದ ಸಂಘರ್ಷ: ಅಡ್ಡಂಡ ಕಾರ್ಯಪ್ಪ ವಿವಾದಗಳ ಹಿಂದಿನ ಇತಿಹಾಸವೇನು?ಬೆಂಗಳೂರಿಗರೇ, ಕೊಡೆ ಮರೆಯಬೇಡಿ: ಆಂಧ್ರ ಕರಾವಳಿಯತ್ತ ಚಂಡಮಾರುತದ ಅಬ್ಬರ; ಕರ್ನಾಟಕಕ್ಕೂ ಮಳೆ, ಗುಡುಗು, ಸಿಡಿಲಿನ ಎಚ್ಚರಿಕೆ!ರಾಹುಲ್ ಗಾಂಧಿ v/s ಅಮಿತ್ ಶಾ: ‘ವೋಟ್ ಚೋರಿ’ ಆರೋಪಕ್ಕೆ ಸಂಸತ್ತಿನ ವಿಶೇಷ ಅಧಿವೇಶನದ ಸವಾಲು; ರಾಜಕೀಯ ಸಂಘರ್ಷಕ್ಕೆ ಹೊಸ ತಿರುವು!ಎಐ ಈಗ ಸೈಬರ್ ದಾಳಿಕೋರರಿಗೂ ಅಸ್ತ್ರ: ವಿದ್ಯುತ್, ನೀರು, ಆಹಾರ ಪೂರೈಕೆಗೂ ಕಾದಿದೆಯೇ ಡಿಜಿಟಲ್ ಕಂಟಕ?ನನ್ನ ಮೇಲೆ ಇಡಿ, ಐಟಿ ದಾಳಿ ನಡೆಸಲು ಕೇಂದ್ರ ಸಚಿವರಿಂದ ಸಂಚು – ಪ್ರಿಯಾಂಕ್‌ ಖರ್ಗೆತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದರು HD ಸ್ಟಿಂಗ್ ಸ್ವಾಮಿ – ಎಂ. ಲಕ್ಷ್ಮಣ್ಮನುವ್ಯಾದಿ ಅಡ್ಡಂಡ ಕಾರಿಯಪ್ಪನ ಮುಖಕ್ಕೆ ಮಸಿರಾಜಧಾನಿಯಲ್ಲಿ ಅಕ್ರಮ ಪಿಜಿಗಳ ಹಾವಳಿ ನಿಯಂತ್ರಣಕ್ಕೆ – GBA ಹೊಸ ಮಾರ್ಗಸೂಚಿವಾರದ ಹಿಂದೆ ನಾಪತ್ತೆಯಾಗಿದ್ದ ದಲಿತ ನಾಯಕ – ಧರ್ಮಸ್ಥಳದಲ್ಲಿ ಶವವಾಗಿ ಪತ್ತೆಆಂಧ್ರ ಕರಾವಳಿಗೆ ಭಾಗಗಳಿಗೆ ಅಪ್ಪಳಿಸಿದ ಚಂಡಮಾರುತ, ಮೀನುಗಾರಿಕೆ ದೋಣಿಗಳಿಗೆ ಹಾನಿ – ಭಾರಿ ಅನಾಹುತಅಮಿತ್ ಶಾ ಭೇಟಿಯಾದ ಚಿರಂಜೀವಿ, ರಾಮ್ ಚರಣ್; ಭೇಟಿಯ ಉದ್ದೇಶ ಏನು ಗೊತ್ತಾ?ವಿಜಯ ಪ್ರಸಾದ್ ಹೊಸ ಸಿನಿಮಾದಲ್ಲಿ ರಚಿತಾ ರಾಮ್; ಈ ಬಾರಿ ಡಿಫರೆಂಟ್ ಆಗಿ ಪ್ರೇಕ್ಷಕರ ಮುಂದೆ!ಕೆಪಿಎಸ್‌ಸಿ ನೇಮಕಾತಿ ಅಕ್ರಮ ತನಿಖೆಗೆ ಹೊಸ ಸಾರಥಿ: ಎಸ್‌ಐಟಿ ಜವಾಬ್ದಾರಿ ಆರ್. ಹಿತೇಂದ್ರ ಹೆಗಲಿಗೆಕಬ್ಬು ಬೆಲೆ ಬಿಕ್ಕಟ್ಟು: ಇಂದು ಕಾರ್ಖಾನೆ ಮಾಲೀಕರು-ರೈತ ಸಂಘಟನೆಗಳ ಸಭೆ; ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆಗಾಂಧಿ ಹತ್ಯೆಯ ಸತ್ಯ ನಾಟಕ ವಿವಾದ: ಸುಚಿತ್ರಾ ಫಿಲಂ ಸೊಸೈಟಿಗೆ ಬನಶಂಕರಿ ಪೊಲೀಸರ ನೋಟಿಸ್

CEC ಜ್ಞಾನೇಶ್ ಕುಮಾರ್ ವಿರುದ್ಧ ನ, 5 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ – ಇಂಡಿಯಾ ಬ್ಲಾಕ್ ಘೋಷಣೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಮೀಡಿಯಾ, ರಾಜಕೀಯ

• 1 ನಿಮಿಷದ ಓದು

CEC ಜ್ಞಾನೇಶ್ ಕುಮಾರ್ ವಿರುದ್ಧ ನ, 5 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ – ಇಂಡಿಯಾ ಬ್ಲಾಕ್ ಘೋಷಣೆ

ಬೆಂಗಳೂರು: ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಮತ್ತು CEC ಜ್ಞಾನೇಶ್ ಕುಮಾರ್ ವಿರುದ್ಧ ನವೆಂಬರ್ 5 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಇಂಡಿಯಾ ಬ್ಲಾಕ್‌ನ ನಾಯಕರು ಘೋಷಿಸಿದ್ದಾರೆ.

ಕೆಪಿಸಿಸಿ ಕಚೇರಿಯುಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, SIR ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಇಂಡಿಯಾ ಬ್ಲಾಕ್‌ ರಾಷ್ಟ್ರವ್ಯಾಪಿ ನಡೆಸುತ್ತಿರುವ ಪ್ರತಿಭಟನೆ ಭಾಗವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ”ನವೆಂಬರ್ 5 ರಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸಲು ತಾಲ್ಲೂಕು ಮತ್ತು ಬ್ಲಾಕ್ ಮಟ್ಟಕ್ಕೆ ಕೊಂಡೊಯ್ಯಲು ಇಂಡಿಯಾ ಬ್ಲಾಕ್ ನಾಯಕರು ನಿರ್ಧರಿಸಿದ್ದಾರೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಪ್ರತಿಭಟನೆಯೊಂದಿಗೆ ಪ್ರಾರಂಭಿಸಲು ನಾವು ನಿರ್ಧರಿಸಿದ್ದೇವೆ, ನಂತರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದು, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯುತ್ತದೆ. ರಾಜ್ಯ ಮಟ್ಟದ ಪ್ರತಿಭಟನೆಯ ನಂತರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಎಸ್ ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸುವುದು ಮತ್ತು ಜ್ಞಾನೇಶ್ ಕುಮಾರ್ ರಾಜೀನಾಮೆ ಇಂಡಿಯಾ ಬ್ಲಾಕ್ ನ ಪ್ರಮುಖ ಬೇಡಿಕೆಯಾಗಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೆ. ಪ್ರಕಾಶ್ ಹೇಳಿದರು. ಪ್ರಜಾಪ್ರಭುತ್ವ ರಕ್ಷಿಸುವುದು ನಮ್ಮ ಜವಾಬ್ದಾರಿ. ಈ ಹೋರಾಟವನ್ನು ಇನ್ನಷ್ಟು ವ್ಯಾಪಕವಾಗಿ ಮುಂದುವರಿಸಲು ‘ಇಂಡಿಯಾ’ ಒಕ್ಕೂಟ ನಿರ್ಧರಿಸಿದೆ. ಭಾರತವನ್ನು ಸರ್ವಾಧಿಕಾರಿ ರಾಷ್ಟ್ರವನ್ನಾಗಿ ಬದಲಾಯಿಸುವ ಅಥವಾ ಕೋಮುವಾದಿ ಹಿಂದುತ್ವ ರಾಷ್ಟ್ರವನ್ನು ನಿರ್ಮಿಸುವ ಪ್ರಯತ್ನಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಲು ಬಯಸುತ್ತೇವೆ ಎಂದರು.

ವಿಷಯಗಳು: #india #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು