ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಕಬ್ಬಿನ ಬೆಲೆ ನಿಗದಿ ವಿವಾದ: ಬೆಳಗಾವಿಯಲ್ಲಿ ಜೈಲ್ ಭರೋ ಚಳವಳಿ, ರೈತರು ಪೊಲೀಸ್ ವಶಕ್ಕೆಎಸ್‌ಐಆರ್ ವೇಳೆ ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದ ಕುಟುಂಬದ 6 ಸದಸ್ಯರ ಹೆಸರು ಮರುಸೇರ್ಪಡೆಗೆ ಹೈಕೋರ್ಟ್ ಆದೇಶಕಬ್ಬಿಗೆ ಪ್ರತಿ ಟನ್‌ಗೆ 3600 ರೂ ನೀಡಲು ನಿರ್ಧರಿಸಿದ್ದೇವೆ – ಸತೀಶ್‌ ಜಾರಕಿಹೊಳಿ ಘೋಷಣೆಮೂರು ತಿಂಗಳ ಬಳಿಕ ಚುನಾವಣಾ ಆಯೋಗದ ನಿರ್ಧಾರ ಬದಲಾವಣೆ: ಐಟಿ ವಿಭಾಗದ ಮೇಲ್ವಿಚಾರಣೆ ಮತ್ತೆ ಹಿರಿಯ ಅಧಿಕಾರಿಗೆಯುಜಿಸಿ ನಿಯಮಗಳ ಮರುಪರಿಶೀಲನೆಗೆ ಸಮಿತಿ ರಚಿಸುವ ಕುರಿತು ಯೋಚಿಸಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರಹಾಸನದಲ್ಲಿ ಜನನುಡಿ ಪೂರ್ವಭಾವಿ ಸಭೆ – ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಬರ ಪರಿಹಾರ 2,500 ರೂ.ನಿಂದ 5,000 ರೂ.ಗೆ ಹೆಚ್ಚಳ – ಡಿ.ಕೆ. ಶಿವಕುಮಾರ್ರೇಷನ್ ಕಾರ್ಡ್ ಇ-ಕೆವೈಸಿಗೆ ಕೇವಲ 10 ದಿನ ಬಾಕಿ – 41.33 ಲಕ್ಷ ಫಲಾನುಭವಿಗಳು ಬಾಕಿ ಉಳಿಕೆಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ – BK ಹರಿಪ್ರಸಾದ್ಓದೋಣ ಬಾ ಗುರು – 3 : ಗ್ರಾಮ ಭಾರತದ ಬದುಕು ಬವಣೆಬೆಂಗಳೂರು | ಎಸ್‌ಐಆರ್ ರದ್ದು, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟ ಪ್ರತಿಭಟನೆಚರ್ಚೆ ನಡೆಸುವುದು ಬೀದಿಯಲ್ಲಲ್ಲ, ಸಂಸತ್ತಿಗೆ ಬನ್ನಿ: ರಾಹುಲ್‌ ಗಾಂಧಿಗೆ ಅಮಿತ್‌ ಶಾ ತಿರುಗೇಟುಹವಾಮಾನ ಬದಲಾವಣೆ ಎದುರಿಸಲು ಜಗತ್ತು ಸಿದ್ಧವಾಗಿಲ್ಲ! ವಾರ್ಷಿಕ 305 ಬಿಲಿಯನ್ ಡಾಲರ್ ಅಗತ್ಯ: ವಿಶ್ವಸಂಸ್ಥೆ ವರದಿಭವ್ಯ ದೃಶ್ಯ ವೈಭವಕ್ಕೆ ಮೆಚ್ಚುಗೆ, ಕಥೆಯ ಆಳಕ್ಕೆ ಟೀಕೆ: ಜಾಗತಿಕ ಮಟ್ಟದಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದ ‘ರಾಮಾಯಣ’!ಬಸ್‌ ದರ ಏರಿಕೆ | ಮೆಜೆಸ್ಟಿಕ್‌ ಬಸ್‌ ಸ್ಟ್ಯಾಂಡಿನಲ್ಲಿ ಭಿಕ್ಷೆ ಬೇಡಿ ಪ್ರತಿಭಟಿಸಿದ ಬಿಜೆಪಿ; ಅಶೋಕ್‌ ಸೇರಿದಂತೆ ಹಲವರು ವಶಕ್ಕೆಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯಯುತ ಪಾಲು ನೀಡಿ: ಐಟಿ ಕಂಪನಿಗಳಿಗೆ ಡಿ.ಕೆ. ಶಿವಕುಮಾರ್ ಮನವಿಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗವಿಲ್ಲವೇ? ಭಾಷೆ, ಸ್ಥಳೀಯರ ಹಕ್ಕು ಮತ್ತು ಕಾರ್ಪೊರೇಟ್ ಹೊಣೆಗಾರಿಕೆಯ ಸುತ್ತ ಹೊಸ ಸಂಘರ್ಷ!ಬೆಳಗಾವಿಯಲ್ಲಿ ಕಬ್ಬಿನ ದರ ವಿವಾದಕ್ಕೆ ತಾತ್ಕಾಲಿಕ ತೆರೆ; ಟನ್‌ಗೆ ₹3,600 ನಿಗದಿಜನಾಕ್ರೋಶಕ್ಕೆ ಬಗ್ಗಿತಾ ECI!? ; ಫಾರ್ಮ್ 6ರಿಂದ SIR ಘೋಷಣೆ ಪ್ರತ್ಯೇಕಿಸಿ, ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ ತಂದ ಚುನಾವಣಾ ಆಯೋಗವಿಶ್ವದ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತವೇ ಕಿಂಗ್! ದೇಶಗಳ ರ‍್ಯಾಂಕಿಂಗ್‌ನಲ್ಲೂ ಆರನೇ ಸ್ಥಾನ; ಹಳ್ಳ ಹಿಡಿದ ‘ಸ್ವಚ್ಛ ಭಾರತ ಮಿಷನ್’

ಕಬ್ಬಿಗೆ ಪ್ರತಿ ಟನ್‌ಗೆ 3600 ರೂ ನೀಡಲು ನಿರ್ಧರಿಸಿದ್ದೇವೆ – ಸತೀಶ್‌ ಜಾರಕಿಹೊಳಿ ಘೋಷಣೆ

ಕಬ್ಬಿಗೆ ಪ್ರತಿ ಟನ್‌ಗೆ 3600 ರೂ ನೀಡಲು ನಿರ್ಧರಿಸಿದ್ದೇವೆ – ಸತೀಶ್‌ ಜಾರಕಿಹೊಳಿ ಘೋಷಣೆ

ಬೆಳಗಾವಿಯಲ್ಲಿ ರೈತ ಮುಖಂಡರ ಜತೆ ನಡೆಸಿದ ಸಭೆಯ ಬಳಿಕ ಸಚಿವ ಸತೀಶ್‌ ಜಾರಕಿಹೊಳಿ ಕಬ್ಬಿಗೆ ಪ್ರತಿ ಟನ್‌ಗೆ 3,600 ರೂ. ದರ ನಿಗದಿಪಡಿಸಿ ಘೋಷಿಸಿದ್ದಾರೆ. ಇದಕ್ಕೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ಒಪ್ಪಿಗೆ ಸೂಚಿಸಿದ್ದು, ನಾಳೆಯಿಂದಲೇ ಕಾರ್ಖಾನೆಗಳು ಆರಂಭವಾಗಲಿವೆ. ಈ ಹಿನ್ನೆಲೆಯಲ್ಲಿ ರೈತ ಮುಖಂಡರಾದ ಚೂನಪ್ಪ ಪೂಜಾರಿ ಮತ್ತು ಶಶಿಕಾಂತ್ ನೇತೃತ್ವದ ಪ್ರತಿಭಟನೆಯನ್ನು ತಕ್ಷಣ ಕೈಬಿಡುವಂತೆ ಸಚಿವರು ಮನವಿ ಮಾಡಿದ್ದಾರೆ. ಬೆಳಗಾವಿ: ಕಳೆದ ಕೆಲ ದಿನಗಳಿಂದ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ನಡುವೆ ತೀವ್ರಗೊಂಡಿದ್ದ ದರ ನಿಗದಿ ಸಂಘರ್ಷಕ್ಕೆ ಕೊನೆಗೂ ಸೌಹಾರ್ದಯುತ ತೆರೆ ಬಿದ್ದಿದೆ. ಪ್ರಸಕ್ತ ಹಂಗಾಮಿನ ಕಬ್ಬಿಗೆ ಪ್ರತಿ ಟನ್‌ಗೆ 3,600 ರೂ. ದರ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅಧಿಕೃತವಾಗಿ ಘೋಷಿಸಿದ್ದಾರೆ.

ಧವಾರ ಸಂಜೆ ರೈತ ಮುಖಂಡರು ಹಾಗೂ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ನಡೆಸಿದ ಸುದೀರ್ಘ ಮತ್ತು ಮಹತ್ವದ ಸಂಧಾನ ಸಭೆಯ ಬಳಿಕ ಸಚಿವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು.

ಸಕ್ಕರೆ ಕಾರ್ಖಾನೆಗಳ ಮಾಲೀಕರ ಒಪ್ಪಿಗೆ

ಕಬ್ಬಿನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ರೈತರು ಸತತ ಹೋರಾಟ ನಡೆಸುತ್ತಿದ್ದರು. ಸರ್ಕಾರದ ಮಧ್ಯಸ್ಥಿಕೆಯಲ್ಲಿ ನಡೆದ ಸಭೆಯಲ್ಲಿ ಎರಡೂ ಕಡೆಯವರ ವಾದ-ಪ್ರತಿವಾದಗಳನ್ನು ಆಲಿಸಿದ ಸಚಿವರು, ಪ್ರತಿ ಟನ್‌ ಕಬ್ಬಿಗೆ 3,600 ರೂ. ದರ ನೀಡುವಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಹಾಗೂ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ.

ನಾಳೆಯಿಂದಲೇ ಕಬ್ಬು ನುರಿಸುವಿಕೆ ಆರಂಭ

ದರ ನಿಗದಿ ವಿವಾದ ಬಗೆಹರಿದಿರುವ ಹಿನ್ನೆಲೆಯಲ್ಲಿ ನಾಳೆಯಿಂದಲೇ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯ ಆರಂಭಿಸಲಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಕಟಾವಿಗೆ ಬಂದಿದ್ದ ಕಬ್ಬು ಒಣಗಿ ನಷ್ಟವಾಗುವ ಭೀತಿಯಲ್ಲಿದ್ದ ಜಿಲ್ಲೆಯ ಸಾವಿರಾರು ರೈತರಿಗೆ ದೊಡ್ಡ ಮಟ್ಟದ ನಿರಾಳತೆ ಸಿಕ್ಕಂತಾಗಿದೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು