ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಹಾರ್ಮುಜ್ ಜಲಸಂಧಿಯಲ್ಲಿ ಭಾರತ, ಚೀನಾ ದೇಶಗಳ ಸರಕು ಹಡಗುಗಳ ಸಂಚಾರಕ್ಕೆ – ಇರಾನ್ ನಿಂದ ಮುಕ್ತ ಅವಕಾಶಕಬ್ಬಿನ ಬೆಲೆ ನಿಗದಿ ವಿವಾದ: ಬೆಳಗಾವಿಯಲ್ಲಿ ಜೈಲ್ ಭರೋ ಚಳವಳಿ, ರೈತರು ಪೊಲೀಸ್ ವಶಕ್ಕೆಎಸ್‌ಐಆರ್ ವೇಳೆ ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದ ಕುಟುಂಬದ 6 ಸದಸ್ಯರ ಹೆಸರು ಮರುಸೇರ್ಪಡೆಗೆ ಹೈಕೋರ್ಟ್ ಆದೇಶಕಬ್ಬಿಗೆ ಪ್ರತಿ ಟನ್‌ಗೆ 3600 ರೂ ನೀಡಲು ನಿರ್ಧರಿಸಿದ್ದೇವೆ – ಸತೀಶ್‌ ಜಾರಕಿಹೊಳಿ ಘೋಷಣೆಮೂರು ತಿಂಗಳ ಬಳಿಕ ಚುನಾವಣಾ ಆಯೋಗದ ನಿರ್ಧಾರ ಬದಲಾವಣೆ: ಐಟಿ ವಿಭಾಗದ ಮೇಲ್ವಿಚಾರಣೆ ಮತ್ತೆ ಹಿರಿಯ ಅಧಿಕಾರಿಗೆಯುಜಿಸಿ ನಿಯಮಗಳ ಮರುಪರಿಶೀಲನೆಗೆ ಸಮಿತಿ ರಚಿಸುವ ಕುರಿತು ಯೋಚಿಸಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರಹಾಸನದಲ್ಲಿ ಜನನುಡಿ ಪೂರ್ವಭಾವಿ ಸಭೆ – ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಬರ ಪರಿಹಾರ 2,500 ರೂ.ನಿಂದ 5,000 ರೂ.ಗೆ ಹೆಚ್ಚಳ – ಡಿ.ಕೆ. ಶಿವಕುಮಾರ್ರೇಷನ್ ಕಾರ್ಡ್ ಇ-ಕೆವೈಸಿಗೆ ಕೇವಲ 10 ದಿನ ಬಾಕಿ – 41.33 ಲಕ್ಷ ಫಲಾನುಭವಿಗಳು ಬಾಕಿ ಉಳಿಕೆಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ – BK ಹರಿಪ್ರಸಾದ್ಓದೋಣ ಬಾ ಗುರು – 3 : ಗ್ರಾಮ ಭಾರತದ ಬದುಕು ಬವಣೆಬೆಂಗಳೂರು | ಎಸ್‌ಐಆರ್ ರದ್ದು, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟ ಪ್ರತಿಭಟನೆಚರ್ಚೆ ನಡೆಸುವುದು ಬೀದಿಯಲ್ಲಲ್ಲ, ಸಂಸತ್ತಿಗೆ ಬನ್ನಿ: ರಾಹುಲ್‌ ಗಾಂಧಿಗೆ ಅಮಿತ್‌ ಶಾ ತಿರುಗೇಟುಹವಾಮಾನ ಬದಲಾವಣೆ ಎದುರಿಸಲು ಜಗತ್ತು ಸಿದ್ಧವಾಗಿಲ್ಲ! ವಾರ್ಷಿಕ 305 ಬಿಲಿಯನ್ ಡಾಲರ್ ಅಗತ್ಯ: ವಿಶ್ವಸಂಸ್ಥೆ ವರದಿಭವ್ಯ ದೃಶ್ಯ ವೈಭವಕ್ಕೆ ಮೆಚ್ಚುಗೆ, ಕಥೆಯ ಆಳಕ್ಕೆ ಟೀಕೆ: ಜಾಗತಿಕ ಮಟ್ಟದಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದ ‘ರಾಮಾಯಣ’!ಬಸ್‌ ದರ ಏರಿಕೆ | ಮೆಜೆಸ್ಟಿಕ್‌ ಬಸ್‌ ಸ್ಟ್ಯಾಂಡಿನಲ್ಲಿ ಭಿಕ್ಷೆ ಬೇಡಿ ಪ್ರತಿಭಟಿಸಿದ ಬಿಜೆಪಿ; ಅಶೋಕ್‌ ಸೇರಿದಂತೆ ಹಲವರು ವಶಕ್ಕೆಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯಯುತ ಪಾಲು ನೀಡಿ: ಐಟಿ ಕಂಪನಿಗಳಿಗೆ ಡಿ.ಕೆ. ಶಿವಕುಮಾರ್ ಮನವಿಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗವಿಲ್ಲವೇ? ಭಾಷೆ, ಸ್ಥಳೀಯರ ಹಕ್ಕು ಮತ್ತು ಕಾರ್ಪೊರೇಟ್ ಹೊಣೆಗಾರಿಕೆಯ ಸುತ್ತ ಹೊಸ ಸಂಘರ್ಷ!ಬೆಳಗಾವಿಯಲ್ಲಿ ಕಬ್ಬಿನ ದರ ವಿವಾದಕ್ಕೆ ತಾತ್ಕಾಲಿಕ ತೆರೆ; ಟನ್‌ಗೆ ₹3,600 ನಿಗದಿಜನಾಕ್ರೋಶಕ್ಕೆ ಬಗ್ಗಿತಾ ECI!? ; ಫಾರ್ಮ್ 6ರಿಂದ SIR ಘೋಷಣೆ ಪ್ರತ್ಯೇಕಿಸಿ, ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ ತಂದ ಚುನಾವಣಾ ಆಯೋಗ

ಎಸ್‌ಐಆರ್ ವೇಳೆ ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದ ಕುಟುಂಬದ 6 ಸದಸ್ಯರ ಹೆಸರು ಮರುಸೇರ್ಪಡೆಗೆ ಹೈಕೋರ್ಟ್ ಆದೇಶ

PPeepal Media

Peepal Media ದೇಶ

• 2 ನಿಮಿಷದ ಓದು

ಎಸ್‌ಐಆರ್ ವೇಳೆ ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದ ಕುಟುಂಬದ 6 ಸದಸ್ಯರ ಹೆಸರು ಮರುಸೇರ್ಪಡೆಗೆ ಹೈಕೋರ್ಟ್ ಆದೇಶ

ಪಣಜಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಕೈಬಿಡಲಾಗಿದ್ದ ಗೋವಾದ ಕುಟುಂಬವೊಂದರ 6 ಸದಸ್ಯರ ಹೆಸರುಗಳನ್ನು 10 ದಿನಗಳೊಳಗೆ ಮತ್ತೆ ಮತದಾರರ ಪಟ್ಟಿಗೆ ಸೇರಿಸುವಂತೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಉತ್ತರ ಗೋವಾದ ಸಾಂತಾಕ್ರೂಜ್ ವಿಧಾನಸಭಾ ಕ್ಷೇತ್ರದ ಈ ಕುಟುಂಬದ ಸದಸ್ಯರು ವಿಳಾಸ ಬದಲಾವಣೆಗಾಗಿ ಸಲ್ಲಿಸಿದ್ದ ನಮೂನೆ 8ರ ಅರ್ಜಿಗಳನ್ನು ತಿರಸ್ಕರಿಸಿದ ಬಳಿಕ ಅವರ ಹೆಸರುಗಳು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಇದನ್ನು ಪ್ರಶ್ನಿಸಿ ಕುಟುಂಬದವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ನ್ಯಾಯಮೂರ್ತಿಗಳಾದ ಅಮಿತ್ ಎಸ್. ಜಮ್ಸಂದೇಕರ್ ಮತ್ತು ವಾಲ್ಮೀಕಿ ಮೆನೆಜೆಸ್ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಕುಟುಂಬದ ವಾಸಸ್ಥಳ ಮತ್ತು ವಿಳಾಸವನ್ನು ಪರಿಶೀಲಿಸಿದ ಬಳಿಕ, ಸಾಂತಾಕ್ರೂಜ್ ಕ್ಷೇತ್ರದ ಮತದಾರರ ಪಟ್ಟಿಯ 25ನೇ ಭಾಗದಲ್ಲಿ ಅವರ ಹೆಸರುಗಳನ್ನು ಸೇರಿಸುವಂತೆ ಚುನಾವಣಾ ನೋಂದಣಾಧಿಕಾರಿಗೆ (ERO) ಸೂಚಿಸಿದೆ.

ಎಂಟು ವರ್ಷಗಳ ಹಿಂದೆ ವಿಳಾಸ ಬದಲಿಸಿದ್ದ ಕುಟುಂಬ

ಪರೇಶ್ ಸಾಲ್ಗಾಂವ್ಕರ್ ಮತ್ತು ಅವರ ಕುಟುಂಬದ ಇತರ ಐವರು ಈ ಪ್ರಕರಣದ ಅರ್ಜಿದಾರರು. ಸುಮಾರು ಎಂಟು ವರ್ಷಗಳ ಹಿಂದೆ ಕುಟುಂಬವು ಸಾಂತಾಕ್ರೂಜ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲೇ ಹೊಸ ಮನೆಗೆ ಸ್ಥಳಾಂತರಗೊಂಡಿತ್ತು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೊಸ ವಿಳಾಸದ ಬೂತ್ ಮಟ್ಟದ ಅಧಿಕಾರಿ (BLO) ವಿಳಾಸ ಬದಲಾವಣೆಗಾಗಿ ನಮೂನೆ 8 ಸಲ್ಲಿಸುವಂತೆ ಕುಟುಂಬಕ್ಕೆ ಸಲಹೆ ನೀಡಿದ್ದರು. ಅದರಂತೆ ಕುಟುಂಬದವರು ಅರ್ಜಿಯನ್ನೂ ಸಲ್ಲಿಸಿದ್ದರು.

ಆದರೆ, ಸಹಾಯಕ ಚುನಾವಣಾ ನೋಂದಣಾಧಿಕಾರಿ ಅವರನ್ನು ಸಂಪರ್ಕಿಸಿ, ಅವರ ಮತದಾರರ ಗುರುತಿನ ಚೀಟಿ (EPIC)ಗೆ ಸಂಬಂಧಿಸಿದ ಹೆಸರುಗಳು ಈಗಾಗಲೇ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದರು. ಹೀಗಾಗಿ ನಮೂನೆ 8ರ ಅರ್ಜಿಗಳ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಲಾಗಿತ್ತು.

ನಮೂನೆ 6 ಸಲ್ಲಿಸುವಂತೆ ಸೂಚಿಸಿದ್ದ ಅಧಿಕಾರಿಗಳು

ಬಳಿಕ ಕುಟುಂಬದವರು ನಮೂನೆ 6 ಸಲ್ಲಿಸಬೇಕೆಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದರು ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಹೊಸ ಮತದಾರರ ಹೆಸರನ್ನು ಪಟ್ಟಿಗೆ ಸೇರಿಸಲು ನಮೂನೆ 6 ಬಳಸಲಾಗುತ್ತದೆ.

ಆದರೆ, ತಾವು ಈಗಾಗಲೇ ನೋಂದಾಯಿತ ಮತದಾರರಾಗಿದ್ದು, ಅದೇ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಳಾಸ ಮಾತ್ರ ಬದಲಾಯಿಸಿಕೊಳ್ಳಲು ಬಯಸಿದ್ದೇವೆ. ಇಂತಹ ಸಂದರ್ಭದಲ್ಲಿ ನಮೂನೆ 8 ಸಲ್ಲಿಸುವುದೇ ಸರಿಯಾದ ಕ್ರಮ ಎಂದು ಕುಟುಂಬದವರು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

ಆಡಳಿತಾತ್ಮಕ ಪ್ರಕ್ರಿಯೆಯ ಕಾರಣದಿಂದ ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವಂತಾಗಬಾರದು ಎಂದೂ ಅರ್ಜಿದಾರರು ಮನವಿ ಮಾಡಿದ್ದರು.

ಚುನಾವಣಾ ಆಯೋಗದ ವಾದ ತಿರಸ್ಕರಿಸಿದ ಹೈಕೋರ್ಟ್

ವಿಚಾರಣೆ ವೇಳೆ ಚುನಾವಣಾ ಆಯೋಗವು ತನ್ನ ವಾದವನ್ನು ಮಂಡಿಸಿತ್ತು. ಎಸ್‌ಐಆರ್‌ನ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿರುವುದನ್ನು, ಈಗಾಗಲೇ ಇರುವ ಪಟ್ಟಿಯಿಂದ ಆ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಪರಿಗಣಿಸಲಾಗದು ಎಂದು ಆಯೋಗದ ಪರ ವಕೀಲರು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಲಾಗುತ್ತಿದೆ. ಕರಡು ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ, ಅದನ್ನು ಹಳೆಯ ಪಟ್ಟಿಯಿಂದ ಹೆಸರು ಅಳಿಸಲಾಗಿದೆ ಎಂದು ಅರ್ಥೈಸಬಾರದು ಎಂಬುದು ಆಯೋಗದ ವಾದವಾಗಿತ್ತು.

ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಬಳಿಕ ಹಕ್ಕು ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಎಂದು ಆಯೋಗ ತಿಳಿಸಿತ್ತು.

ಆದರೆ, ಕುಟುಂಬದ ಸದಸ್ಯರ ಹೆಸರುಗಳನ್ನು 10 ದಿನಗಳೊಳಗೆ ಮರುಸೇರ್ಪಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ. ಈ ಆದೇಶಕ್ಕೆ ಎರಡು ವಾರಗಳ ಕಾಲ ತಡೆ ನೀಡುವಂತೆ ಚುನಾವಣಾ ಆಯೋಗ ಮಾಡಿದ ಮನವಿಯನ್ನೂ ನ್ಯಾಯಾಲಯ ಒಪ್ಪಲಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ನೀಡಬೇಕೆಂಬ ಆಯೋಗದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು