ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆ

ಅಪಾಯಕಾರಿ  ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಪಾಯಕಾರಿ ಮಟ್ಟ ತಲುಪುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ದೆಹಲಿಯ ಗಾಳಿಯ ಗುಣಮಟ್ಟದ ಪರಿಸ್ಥಿತಿ ಕುರಿತು ವ್ಯಂಗ್ಯಭರಿತವಾಗಿ ಪ್ರತಿಕ್ರಿಯಿಸಿದ ನ್ಯಾಯಾಲಯ, ಮಾಲಿನ್ಯ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ದೆಹಲಿ-ಎನ್‌ಸಿಆರ್ ವಾಯುಮಾಲಿನ್ಯಕ್ಕೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನವೆಂಬರ್ 5ರಂದು ದೆಹಲಿಯ ವಾಯುಮಾಲಿನ್ಯಕ್ಕೆ ಬೆಳೆ ತ್ಯಾಜ್ಯ ಸುಡುವಿಕೆಯಿಂದ ಶೇ.14ರಷ್ಟು ಕೊಡುಗೆ ಬಂದಿದೆ ಎಂಬ ಮಾಹಿತಿ ನ್ಯಾಯಾಲಯದ ಗಮನಕ್ಕೆ ತರಲಾಯಿತು. ಈಗಾಗಲೇ ಹೆಚ್ಚಿರುವ ಮಾಲಿನ್ಯಕ್ಕೆ ಬೆಳೆ ತ್ಯಾಜ್ಯ ಸುಡುವಿಕೆ ಮತ್ತಷ್ಟು ಸಂಕಷ್ಟ ತಂದೊಡ್ಡುತ್ತಿದೆ ಎಂದು ತಿಳಿಸಲಾಯಿತು. ಇದೇ ವೇಳೆ ವಾಹನಗಳ ಹೊಗೆ ಹಾಗೂ ಸಂಚಾರ ದಟ್ಟಣೆ ದೆಹಲಿ-ಎನ್‌ಸಿಆರ್ ಪ್ರದೇಶದ ವಾಯುಮಾಲಿನ್ಯಕ್ಕೆ ಪ್ರಮುಖ ಕಾರಣಗಳಾಗಿವೆ. ಹೀಗಾಗಿ ವಾಹನಗಳ ಸಂಖ್ಯೆ ಮತ್ತು ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಬೆಳೆ ತ್ಯಾಜ್ಯ ಸುಡುವುದನ್ನು ತಡೆಯಲು ರೈತರಿಗೆ ಮುಂಚಿತವಾಗಿಯೇ ಆರ್ಥಿಕ ಪ್ರೋತ್ಸಾಹ ನೀಡಬೇಕು. ಬೆಳೆ ತ್ಯಾಜ್ಯ ಖರೀದಿ ದರವನ್ನು ಮೊದಲೇ ಪ್ರಕಟಿಸಿದರೆ ರೈತರು ಸುಡುವ ಬದಲು ಮಾರಾಟ ಮಾಡಲು ಮುಂದಾಗಬಹುದು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬೆಳೆ ತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆಗೆ ಅಗತ್ಯ ಯಂತ್ರೋಪಕರಣ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ನ್ಯಾಯಾಲಯ ಸಲಹೆ ನೀಡಿತು.

ಇನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿಅಂಶಗಳ ಪ್ರಕಾರ, ನವೆಂಬರ್ 6ರ ಬೆಳಿಗ್ಗೆ 8 ಗಂಟೆಗೆ ದೆಹಲಿಯ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ (AQI) 389 ದಾಖಲಾಗಿತ್ತು. ಬೆಳಿಗ್ಗೆ 9 ಗಂಟೆಗೆ 391ಕ್ಕೆ ಏರಿಕೆಯಾಗಿತ್ತು. ನಗರದ 59 ವಾಯು ಗುಣಮಟ್ಟ ಮಾಪನ ಕೇಂದ್ರಗಳ ಪೈಕಿ 30 ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ತೀವ್ರ ಹಂತ ತಲುಪಿತ್ತು. ರೋಹಿಣಿಯಲ್ಲಿ 475 ಹಾಗೂ ಐಐಟಿ ದೆಹಲಿ ಪ್ರದೇಶದಲ್ಲಿ 472 ಎಕ್ಯೂಐ ದಾಖಲಾಗಿತ್ತು. ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಾಯುಮಾಲಿನ್ಯ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ. ವಾಹನಗಳ ಹೊಗೆ, ಬೆಳೆ ತ್ಯಾಜ್ಯ ಸುಡುವಿಕೆ ಸೇರಿದಂತೆ ಮಾಲಿನ್ಯದ ಎಲ್ಲ ಮೂಲಗಳನ್ನು ನಿಯಂತ್ರಿಸಲು ಸರ್ಕಾರಗಳು ತುರ್ತು ಕ್ರಮ ಕೈಗೊಳ್ಳಬೇಕಿದೆ ಎಂಬುದನ್ನು ನ್ಯಾಯಾಲಯದ ವಿಚಾರಣೆ ಮತ್ತೊಮ್ಮೆ ಎತ್ತಿ ತೋರಿಸಿದೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು