HDK ದೆಹಲಿ ನಿವಾಸದಲ್ಲೇ ಆರೋಪಿ ಮೊಬೈಲ್ ಪತ್ತೆ – ಯತೀಂದ್ರ ಸಿದ್ಧರಾಮಯ್ಯ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು: ಸ್ಟಿಂಗ್ ಪ್ರಕರಣದ ತನಿಖೆಯಲ್ಲಿ ಅವಸರ ಮಾಡುವ ಅಗತ್ಯವಿಲ್ಲ. ಎಲ್ಲರೂ ತಾಳ್ಮೆಯಿಂದ ಕಾಯಬೇಕು. ತನಿಖೆ ಮುಂದುವರಿದಂತೆ ಸತ್ಯಾಂಶಗಳು ಹೊರಬರಲಿವೆ. ತನಿಖೆ ಬಗ್ಗೆ ಸಂಪೂರ್ಣ ವಿಶ್ವಾಸವಿದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಶನಿವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಕಮಿಷನರ್ ಈಗಾಗಲೇ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ಮುಂದುವರಿದಿದ್ದು, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲಿಯೇ ಆರೋಪಿಯ ಮೊಬೈಲ್ ನೆಟ್ವರ್ಕ್ ಪತ್ತೆಯಾಗಿರುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪ್ರಕರಣದಲ್ಲಿ ವಿಡಿಯೋ ಮಾಡಿದ ಹಾಗೂ ಅದನ್ನು ಅಪ್ಲೋಡ್ ಮಾಡಿದ ಎಲ್ಲ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
Read More: https://peepalmedia.com/karnataka/hd-kumaraswamy-power-tv-sting-nice-road-toll-police-harassment/
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಕುರಿತು ಮಾತನಾಡಿದ ಅವರು, ತಾನು ತಂದೆಯೊಂದಿಗೆ ದೆಹಲಿಗೆ ಹೋಗಿದ್ದೆ. ಆದರೆ ಹೈಕಮಾಂಡ್ನೊಂದಿಗೆ ನಡೆದ ಸಭೆಯಲ್ಲಿ ತಾನು ಭಾಗಿಯಾಗಿರಲಿಲ್ಲ. ಸಿದ್ದರಾಮಯ್ಯ ಮಾತ್ರ ಹೈಕಮಾಂಡ್ ನಾಯಕರೊಂದಿಗೆ ಮಾತನಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ವಿದ್ಯಮಾನಗಳ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆದಿರಬಹುದು. ಆ ವಿಚಾರಗಳಲ್ಲಿ ಸ್ಟಿಂಗ್ ಪ್ರಕರಣವೂ ಇರಬಹುದು. ಆದರೆ ಆ ಸಭೆಯಲ್ಲಿ ನಡೆದ ಸಂಪೂರ್ಣ ಚರ್ಚೆಯ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ