ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಕಲಬುರಗಿ ಸಮೀಪ ಶರಣರ ವಚನ ಪರಂಪರೆಗೆ ಹೊಸ ಸ್ಪರ್ಶ; ವಚನ ಮಂಟಪ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆರಾಜ್ಯ ಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ: 35 ತಹಶೀಲ್ದಾರ್‌ಗಳಿಗೆ ಹೊಸ ಜವಾಬ್ದಾರಿಏಳು ಮಂದಿಯ ಭೀಕರ ಹತ್ಯೆ ಪ್ರಕರಣ ಶಿರಾಡಿಘಾಟ್ ಕಂದಕದಲ್ಲಿ – ಬೆಚ್ಚಿ ಬೀಳಿಸುವ ಸಂಗತಿE20 ಪೆಟ್ರೋಲ್ ವಿವಾದಕ್ಕೆ ಮತ್ತೊಂದು ತಿರುವು: 20% ಎಥನಾಲ್ ಎಂದ BPCL ಪೋಸ್ಟ್‌ನಲ್ಲಿ ಕಂಡಿದ್ದು 33%; ತಕ್ಷಣವೇ ಟ್ವಿಟ್ ಡಿಲೀಟ್ಟರ್ಕಿಯ ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 16 ಕಾರ್ಮಿಕರು ಸಾವು, ಹಲವರಿಗೆ ಗಾಯಐಫೋನ್ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ದುರಂತ; ವಿಷಕಾರಿ ಅನಿಲ ಸೇವಿಸಿ ಮೂವರು ಕಾರ್ಮಿಕರು ಸಾವು!ಹಾಸನ DC ಹುದ್ದೆಯಲ್ಲಿ ಮುಂದುವರಿಯಲು ₹75 ಲಕ್ಷ ಲಂಚ – ತನಿಖೆಗೆ HDK ಒತ್ತಾಯದೀಪಾವಳಿ ಪಟಾಕಿ ಹಾವಳಿ; ದೆಹಲಿ ವಾಯುಮಾಲಿನ್ಯದ ನಂತರ ಬೆಂಗಳೂರಿನ ಗಾಳಿ ಕಲುಷಿತ!ಮಾಲಿನ್ಯದಲ್ಲಿ ಶೇ.25ರಷ್ಟು ಏರಿಕೆLPG ಕೆ.ಜಿಗೆ 11 ರೂ ಹೆಚ್ಚಳ ಆಟೋ ಚಾಲಕರಿಗೆ – ಗಾಯದ ಮೇಲೆ ಬರೆಐದು ದಶಕಗಳ ಭಾರತದ ಇತಿಹಾಸಕ್ಕೆ ಸಾಕ್ಷಿಯಾದ ಸೋನಿಯಾ ಗಾಂಧಿ ಆತ್ಮಕಥೆ ಬಿಡುಗಡೆ; ಪುಸ್ತಕ ಮಳಿಗೆಗಳಲ್ಲಿ ಓದುಗರ ಆಸಕ್ತಿ!ಅಗತ್ಯ ವಸ್ತುಗಳ ದರ ಏರಿಕೆಗೆ ಸರ್ಕಾರದ ವಿರುದ್ದ – ಹೈಕೋರ್ಟ್ ಗರಂಕಲಬುರ್ಗಿ, ಗೌರಿ ಲಂಕೇಶ್ ಹತ್ಯೆಯ ಹಿಂದೆ ಸಂಘ ಪರಿವಾರ ಕೈವಾಡ – ಪ್ರಿಯಾಂಕ್ ಖರ್ಗೆಎಐ ಯುಗದಲ್ಲಿ ನಕಲಿ ಚಾಟ್ ಸೃಷ್ಟಿಸಿ ಮಾನಹಾನಿ ಮಾಡುವುದು ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಕೆ. ಎಂ. ಶಿವಲಿಂಗೇಗೌಡ44,250 ಸಜೀವ ಗುಂಡುಗಳ ವಶ: ಆರ್‌ಎಸ್‌ಎಸ್‌–ಬಿಜೆಪಿಗೆ 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ್ ಖರ್ಗೆಬೆಂಗಳೂರಿನಲ್ಲಿ ಪಟಾಕಿ ಸಿಡಿತಕ್ಕೆ 50ಕ್ಕೂ ಹೆಚ್ಚು ಜನರ ಕಣ್ಣಿಗೆ ಗಾಯ; ಗಾಯಾಳುಗಳಲ್ಲಿ ಮಕ್ಕಳ ಸಂಖ್ಯೆಯೂ ಅಧಿಕಯಾವುದೇ ಭಿನ್ನಾಭಿಪ್ರಾಯವಿಲ್ಲ, ಸಿದ್ದರಾಮಯ್ಯ ನಮ್ಮ ನಾಯಕ: ಊಹಾಪೋಹಗಳಿಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆಟಿಪ್ಪು ಜಯಂತಿಯನ್ನು ಜನರು, ಸಂಘ-ಸಂಸ್ಥೆಗಳು ಸ್ವಯಂ ಆಚರಿಸಬಹುದು; ಸರ್ಕಾರ ಅಗತ್ಯ ಸಹಕಾರ ಕೊಡಲಿದೆ: ಯು.ಟಿ. ಖಾದರ್2013ರ ಪ್ರತಿಭಟನೆ ಪ್ರಕರಣ: ಮಮತಾ ಬ್ಯಾನರ್ಜಿ ಹೇಳಿಕೆ ದಾಖಲಿಸಿಕೊಳ್ಳಲು ದೆಹಲಿ ಪೊಲೀಸರಿಂದ ನೋಟಿಸ್ರಸ್ತೆ ಮಧ್ಯೆ ಪಟಾಕಿ ಸಿಡಿಸುವುದನ್ನು ಪ್ರಶ್ನಿಸಿದ ಪೊಲೀಸ್ ಅಧಿಕಾರಿ ಸಾವು: ಆರು ಮಂದಿ ಬಂಧನದೀಪಾವಳಿ ಪಟಾಕಿ ಅಬ್ಬರ; ದೆಹಲಿಯಲ್ಲಿ ಉಸಿರುಗಟ್ಟುವ ಸ್ಥಿತಿ! ಹಲವು ಪ್ರದೇಶಗಳಲ್ಲಿ AQI 350 ದಾಟಿ ತೀವ್ರ ಮಾಲಿನ್ಯ

ರಾಜ್ಯ ಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ: 35 ತಹಶೀಲ್ದಾರ್‌ಗಳಿಗೆ ಹೊಸ ಜವಾಬ್ದಾರಿ

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ರಾಜ್ಯ ಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ: 35 ತಹಶೀಲ್ದಾರ್‌ಗಳಿಗೆ ಹೊಸ ಜವಾಬ್ದಾರಿ

ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿರುವ ಕರ್ನಾಟಕ ಸರ್ಕಾರ, ತಹಶೀಲ್ದಾರ್ ವೃಂದದ 35 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ತಾಲೂಕುಗಳ ಕಂದಾಯ ಆಡಳಿತದಲ್ಲಿ ಬದಲಾವಣೆ ತರಲಾಗಿದ್ದು, ಹಲವು ಅಧಿಕಾರಿಗಳಿಗೆ ಹೊಸ ಸ್ಥಳಗಳಲ್ಲಿ ಜವಾಬ್ದಾರಿ ವಹಿಸಲಾಗಿದೆ.

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ವರ್ಗಾವಣೆ ಮತ್ತು ಸ್ಥಳನಿಯುಕ್ತಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಸೂಚಿಸಿದೆ. ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನರಸಿಂಹಮೂರ್ತಿ ಜಿ.ಕೆ. ಅವರು ನವೆಂಬರ್ 9ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಯಾವ ಜಿಲ್ಲೆಗಳಲ್ಲಿ ಏನೇನು ಬದಲಾವಣೆ?
ವರ್ಗಾವಣೆ ಪಟ್ಟಿಯ ಪ್ರಕಾರ, ಬೈಂದೂರು ತಹಶೀಲ್ದಾರ್ ರಾಮಚಂದ್ರಪ್ಪ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಹಾಗೂ ರವಿರಾಜ ದೀಕ್ಷಿತ್ ಅವರನ್ನು ಅಂಕೋಲಾಕ್ಕೆ ವರ್ಗಾಯಿಸಲಾಗಿದೆ. ಉಮಾಕಾಂತ ಹಳ್ಳೆ ಅವರಿಗೆ ಕಲಬುರಗಿ ತಾಲೂಕು ತಹಶೀಲ್ದಾರ್ ಗ್ರೇಡ್-1 ಹುದ್ದೆ ವಹಿಸಲಾಗಿದೆ. ಎಂ. ಆಶಾ ಅವರನ್ನು ಗೌರಿಬಿದನೂರಿನಿಂದ ಗುಡಿಬಂಡೆಗೆ ಹಾಗೂ ಶರಣಬಸವ ಆರ್. ಹೊಸಮನಿ ಅವರನ್ನು ಅಫಜಲಪುರದಿಂದ ಹುಮನಾಬಾದ್‌ಗೆ ವರ್ಗಾವಣೆ ಮಾಡಲಾಗಿದೆ.

ಅರುಣ್ ಹೆಚ್. ದೇಸಾಯಿ ಅವರನ್ನು ಸಿಂಧನೂರಿನಿಂದ ಹೊಸಪೇಟೆಗೆ, ಎಸ್.ಬಿ. ಕೂಡಲಿ ಅವರನ್ನು ಪುತ್ತೂರಿನಿಂದ ಕಡಬಕ್ಕೆ, ರುಕಿಯಾಬೇಗಂ ಅವರನ್ನು ಮೈಸೂರು ಜಿಲ್ಲೆಯ ಸಾಲಿಗ್ರಾಮದಿಂದ ಹೆಚ್.ಡಿ. ಕೋಟೆಗೆ ನಿಯೋಜಿಸಲಾಗಿದೆ.

ಧಾರವಾಡ ಜಿಲ್ಲೆಯ ಕುಂದಗೋಳದಿಂದ ರಾಜು ಮಾವರಕರ ಅವರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವಿಗೆ ಹಾಗೂ ಬಾದಾಮಿಯಿಂದ ಎಸ್.ಎಫ್. ಹೊಮ್ಮುನವರ ಅವರನ್ನು ಬಾಗಲಕೋಟೆ ತಾಲೂಕಿಗೆ ವರ್ಗಾಯಿಸಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಿಂದ ಪ್ರಕಾಶ ಎಂ. ಕಲ್ಲೊಳ್ಳಿ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾಕ್ಕೆ ನಿಯೋಜಿಸಲಾಗಿದೆ.

ಇನ್ನು ಹೊಳೆನರಸೀಪುರದಿಂದ ರೇಣುಕುಮಾರ್ ವೈ.ಎಂ. ಅವರನ್ನು ಅರಕಲಗೂಡಿಗೆ, ಯಾದಗಿರಿಯಿಂದ ಸುರೇಶ ರಾಣಪ್ಪ ಅವರನ್ನು ರಾಯಚೂರು ಜಿಲ್ಲೆಯ ದೇವದುರ್ಗಕ್ಕೆ ಹಾಗೂ ಬಬಲೇಶ್ವರದಿಂದ ಆನಂದ ಆರ್. ಕೋಲ್ಲಾರ ಅವರನ್ನು ದೇವರಹಿಪ್ಪರಗಿಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿಯೂ ಬದಲಾವಣೆ ಮಾಡಲಾಗಿದ್ದು, ಕಲಾವತಿ ಎಂ. ಅವರನ್ನು ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿಗಳ ಕಚೇರಿಗೆ ವರ್ಗಾಯಿಸಲಾಗಿದೆ. ಮೋಹನ ಕುಮಾರಿ ಅವರನ್ನು ಮೈಸೂರು ಜಿಲ್ಲೆಯ ಸರಗೂರಿನಿಂದ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಹಾರೋಹಳ್ಳಿಗೆ ನಿಯೋಜಿಸಲಾಗಿದೆ.

ವಿಶೇಷ ಹುದ್ದೆಗಳಿಗೂ ಅಧಿಕಾರಿಗಳ ನೇಮಕ
ತಾಲೂಕು ಮಟ್ಟದ ವರ್ಗಾವಣೆಗಳ ಜತೆಗೆ ವಿಶೇಷ ಭೂಸ್ವಾಧೀನ, ತರಬೇತಿ ಸಂಸ್ಥೆ ಹಾಗೂ ಇತರ ಆಡಳಿತಾತ್ಮಕ ಹುದ್ದೆಗಳಿಗೂ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನಟರಾಜ್ ಟಿ.ಆರ್. ಅವರನ್ನು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಯಿಂದ ದೊಡ್ಡಬಳ್ಳಾಪುರದ ವಿಶೇಷ ತಹಶೀಲ್ದಾರ್ ಹುದ್ದೆಗೆ ವರ್ಗಾಯಿಸಲಾಗಿದೆ.

ಸುರೇಶ ತೊನಾಯಸಳಿಕರ್ ಅವರನ್ನು ಜಿಲ್ಲಾ ತರಬೇತಿ ಸಂಸ್ಥೆಯಿಂದ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ವಿಶೇಷ ತಹಶೀಲ್ದಾರ್ ಹುದ್ದೆಗೆ ನಿಯೋಜಿಸಲಾಗಿದೆ. ಪಲ್ಲವಿ ಬೆಲ್ಕಿರೆ ಅವರನ್ನು ಬಾಲ್ಕಿಯಿಂದ ಜಿಲ್ಲಾ ತರಬೇತಿ ಸಂಸ್ಥೆಯ ಉಪಪ್ರಾಚಾರ್ಯರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಇದಲ್ಲದೆ ವಿಜಯಪುರ, ಕಲಬುರಗಿ, ಬೀದರ್, ಗದಗ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿಯೂ ಅಧಿಕಾರಿಗಳ ವರ್ಗಾವಣೆ ಮತ್ತು ಸ್ಥಳನಿಯುಕ್ತಿ ಮಾಡಲಾಗಿದೆ.

ತಕ್ಷಣ ಕರ್ತವ್ಯಕ್ಕೆ ಹಾಜರಾಗಲು ಆದೇಶ
ವರ್ಗಾವಣೆಗೊಂಡಿರುವ ಎಲ್ಲ ಅಧಿಕಾರಿಗಳು ಹೊಸ ಹುದ್ದೆಗಳಲ್ಲಿ ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು. ಕರ್ತವ್ಯಕ್ಕೆ ಹಾಜರಾದ ಕುರಿತು ಸಿಟಿಸಿ (CTC) ವರದಿಯನ್ನು ಸರ್ಕಾರಕ್ಕೆ ಇ-ಮೇಲ್ ಮೂಲಕ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ವರದಿಯನ್ನು [email protected] ವಿಳಾಸಕ್ಕೆ ಕಳುಹಿಸಬೇಕು.

ಸ್ಥಳನಿಯುಕ್ತಿಗೆ ಒಳಗಾದ ಅಧಿಕಾರಿಗಳು ಮುಂದಿನ ಸ್ಥಳನಿಯುಕ್ತಿಗಾಗಿ ಕಂದಾಯ ಇಲಾಖೆಯ ಸೇವೆಗಳು-3 ಶಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳ ಕಂದಾಯ ಆಡಳಿತದಲ್ಲಿ ನಡೆದಿರುವ ಈ ಬದಲಾವಣೆಗಳು ತಾಲೂಕು ಮಟ್ಟದ ಆಡಳಿತ ವ್ಯವಸ್ಥೆಯ ಕಾರ್ಯನಿರ್ವಹಣೆಯಲ್ಲಿ ಹೊಸ ಜವಾಬ್ದಾರಿಗಳ ಹಂಚಿಕೆಗೆ ಕಾರಣವಾಗಿವೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು