ಹಬ್ಬದ ಹೆಸರಲ್ಲಿ ಬೆಂಗಳೂರಿನಲ್ಲಿ ಪೂಲ್ ಪಾರ್ಟಿ, ಗಾಂಜಾ MDMA ವಶ – ಮೂವರ ಬಂಧನ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು: ದೀಪಾವಳಿ ಸಂಭ್ರಮದ ಹೆಸರಿನಲ್ಲಿ ಖಾಸಗಿ ವಿಲ್ಲಾದಲ್ಲಿ ನಡೆಯುತ್ತಿದ್ದ ಅಕ್ರಮ ಹೈಟೆಕ್ ಪೂಲ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕಾರ್ಯಾಚರಣೆ ವೇಳೆ ಎಂಡಿಎಂಎ, ಗಾಂಜಾ, ಮದ್ಯ ಹಾಗೂ ನಿಷೇಧಿತ ಹುಕ್ಕಾ ಬಳಕೆ ಮಾಡಿರುವುದು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ಮಾರತ್ಹಳ್ಳಿಯ ಯಮಲೂರಿನ ಕಾರಿಯಮ್ಮನ ಅಗ್ರಹಾರ ರಸ್ತೆಯಲ್ಲಿರುವ ಖಾಸಗಿ ವಿಲ್ಲಾದಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಅಗತ್ಯ ಅನುಮತಿ ಪಡೆಯದೆ ದೀಪಾವಳಿ ಆಚರಣೆ ಹೆಸರಿನಲ್ಲಿ ಪಾರ್ಟಿ ನಡೆಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕ-ಯುವತಿಯರನ್ನು ಆಕರ್ಷಿಸಲು ಆಯೋಜಕರು ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದರು. ವಾಟ್ಸ್ಆ್ಯಪ್ ಮತ್ತು ಇನ್ಸ್ಟಾಗ್ರಾಂ ಮೂಲಕ ಪಾರ್ಟಿಯ ಪ್ರಚಾರ ಮಾಡಲಾಗಿತ್ತು. ಎಫ್ವಿ ಸೋಷಿಯಲ್ 404 ಮತ್ತು ಹಾಪ್ಝಿಕ್ಸ್ ಸೇರಿದಂತೆ ಆನ್ಲೈನ್ ಆ್ಯಪ್ಗಳನ್ನೂ ಬಳಸಿಕೊಂಡು ಯುವಕರನ್ನು ಆಹ್ವಾನಿಸಲಾಗಿತ್ತು ಎನ್ನಲಾಗಿದೆ.
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ