ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಮಕ್ಕಳಾಗದ ನೋವು ದಾಂಪತ್ಯ ಕಲಹಕ್ಕೆ ಕಾರಣ: ಪತಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ!ಏಳು ಷರತ್ತುಗಳಿಗೆ ಒಪ್ಪಿದರಷ್ಟೇ ಮಾತುಕತೆ: ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ; ಸಂಧಾನಕ್ಕೆ ವ್ಯಾನ್ಸ್ ಪ್ರಯತ್ನಶಿಶುನಾಳ ಶರೀಫರ ತತ್ವಪದಗಳ ಭಾಷಾ ವೈಶಿಷ್ಟ್ಯತೆಪದೇಪದೆ ವಿಚಾರಣೆಗೆ ಕರೆದ ಸಿಸಿಬಿ ವಿರುದ್ಧ ಕೃಪಾ ಆಳ್ವ ಅಸಮಾಧಾನಸೋನಿಯಾ ಗಾಂಧಿ ಬಗ್ಗೆ ಬಿಜೆಪಿ, ಆರ್‌ಎಸ್‌ಎಸ್‌ ಜೀವನಪೂರ್ತಿ ಸುಳ್ಳುಗಳನ್ನು ಹರಡಿವೆ: ಪ್ರಿಯಾಂಕಾ ಗಾಂಧಿಉತ್ತರ ಪ್ರದೇಶ ಚುನಾವಣೆ: ಓವೈಸಿ–ಚಂದ್ರಶೇಖರ್ ಆಜಾದ್ ಮೈತ್ರಿ ಘೋಷಣೆ; ‘ಸಾಮಾಜಿಕ ಪರಿವರ್ತನಾ ಮೋರ್ಚಾ’ಗೆ ಕಾಂಗ್ರೆಸ್‌, ಎಸ್‌ಪಿಗೂ ಆಹ್ವಾನಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ ರೈಲು ಟಿಕೆಟ್‌ ಬುಕ್ಕಿಂಗ್‌ ಆರಂಭ: ಮಂಗಳೂರು, ಉಡುಪಿ, ಕುಂದಾಪುರದಿಂದ ಪ್ರಯಾಣ ದರವೆಷ್ಟು?ಹಾಸನದ DC ಕಚೇರಿಯಲ್ಲಿ ಕೋಟ್ಯಂತರ ರೂ. ಅಕ್ರಮ: ತನಿಖೆಗೆ ನಡೆಸುವಂತೆ ಶಾಲಿನಿ ರಜನೀಶ್ ಅವರಿಗೆ ದೂರು ವ್ಯಕ್ತಿ ಅಪಹರಿಸಿ 1.15 ಕೋಟಿ ರೂ. ದರೋಡೆ: ಸಂಚಾರ ಪೊಲೀಸ್ ಸಿಬ್ಬಂದಿ ಜೊತೆ – ಐವರ ಬಂಧನಮೆಟ್ರೋ 3 ನಿಲ್ದಾಣಗಳಲ್ಲಿ ಹೆಸರು ಬದಲಾವಣೆ – ಕೇಂದ್ರ ಅನುಮೋದನೆಕನ್ನಡಿಗರ ನಿಜ ಬದುಕಿನ ಸಮಸ್ಯೆಗಳನ್ನು ಪರಿಹರಿಸದೆ ವಿಶ್ವ ಕನ್ನಡ ಸಮ್ಮೇಳನ ನಡೆಸುವುದರಲ್ಲಿ ಅರ್ಥವಿಲ್ಲ: ಕರವೇ ಅಧ್ಯಕ್ಷ ನಾರಾಯಣ ಗೌಡಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್‌ ಸಿಬ್ಬಂದಿಯ ಮೃತದೇಹ ಪತ್ತೆ; ಸೇವಾ ಶಸ್ತ್ರಾಸ್ತ್ರಗಳು ನಾಪತ್ತೆಹಿಂದಿನ ಕಾಲದ ಪಟಾಕಿಗಳು ಕೀಟಗಳನ್ನು ನಾಶಪಡಿಸಿ ವಾತಾವರಣವನ್ನು ಶುದ್ಧಗೊಳಿಸುತ್ತಿದ್ದವು: ಮೋಹನ್‌ ಭಾಗವತ್‌ಇರಾನ್‌ ಯುದ್ಧದ ವಿಚಾರದಲ್ಲಿ ಟ್ರಂಪ್‌–ನೆತನ್ಯಾಹು ನಡುವೆ ಭಿನ್ನಮತ; ದೂರವಾಣಿ ಮಾತುಕತೆಯಲ್ಲಿ ತೀವ್ರ ವಾಗ್ವಾದಮೋದಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಭಾರತದ ವೀಸಾ ನಿರಾಕರಿಸಲಾಗಿದೆ: ನಾರ್ವೆ ಪತ್ರಕರ್ತೆ ಹೆಲೆ ಲಿಂಗ್‌ಸಿಎಮ್ ಡಿ.ಕೆ. ಶಿವಕುಮಾರ್, ರಾಹುಲ್‌ ಗಾಂಧಿ ಬಳಿ ತನ್ನ ಸ್ಥಾನ ಉಳಿಸಿಕೊಡುವಂತೆ ಗೋಗರೆಯುತ್ತಿದ್ದಾರೆ – ಬಿ ವೈ ವಿಜಯೇಂದ್ರಮೋದಿ ಭೇಟಿ ಹಿನ್ನೆಲೆ: ಆನೇಕಲ್‌ನಲ್ಲಿ ಮದ್ಯದಂಗಡಿ, ಮಾಂಸದಂಗಡಿಗಳಿಗೆ ಎರಡು ದಿನ ನಿರ್ಬಂಧನಕಲಿ ಶೈಕ್ಷಣಿಕ ದಾಖಲೆ ಸಲ್ಲಿಸಿದ ಆರೋಪ: ಇಂಡೋನೇಷ್ಯಾದ ಉಪಾಧ್ಯಕ್ಷ ಗಿಬ್ರಾನ್ ರಾಕಬುಮಿಂಗ್ ರಾಕಾ ದಿಢೀರ್ ರಾಜೀನಾಮೆ!ದೀಪಾವಳಿ ಪಟಾಕಿಯಿಂದ ವಾಯುಮಾಲಿನ್ಯ ಹೆಚ್ಚಾದರೆ ಏನಂತೆ?: ಯೋಗಿ ಆದಿತ್ಯನಾಥ್ ಡಾಫೆಯ ಮಾತುಪ್ರಗತಿ ಕಾಣದ ರಷ್ಯಾ–ಉಕ್ರೇನ್ ಶಾಂತಿ ಮಾತುಕತೆ: ಕೈದಿಗಳ ವಿನಿಮಯಕ್ಕೆ ಒಪ್ಪಿಗೆ

ಮೋದಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಭಾರತದ ವೀಸಾ ನಿರಾಕರಿಸಲಾಗಿದೆ: ನಾರ್ವೆ ಪತ್ರಕರ್ತೆ ಹೆಲೆ ಲಿಂಗ್‌

PPeepal Media

Peepal Media ದೇಶ

• 2 ನಿಮಿಷದ ಓದು

ಮೋದಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಭಾರತದ ವೀಸಾ ನಿರಾಕರಿಸಲಾಗಿದೆ: ನಾರ್ವೆ ಪತ್ರಕರ್ತೆ ಹೆಲೆ ಲಿಂಗ್‌

ಕಾಂಗ್ರೆಸ್‌ ಆಯೋಜಿಸಿರುವ ‘ಭಾರತ್‌ ಸಮಿಟ್‌’ನಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಬೇಕಿದ್ದ ನಾರ್ವೆಯ ಪತ್ರಕರ್ತೆ ಹೆಲೆ ಲಿಂಗ್‌ ಅವರ ವೀಸಾವನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹೊರಡಲು ಸಿದ್ಧರಾಗಿದ್ದಾಗ, ಪ್ರಯಾಣಕ್ಕೆ ಕೇವಲ ಹತ್ತು ನಿಮಿಷ ಬಾಕಿ ಇರುವಾಗ ನಾರ್ವೆಯಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಕರೆ ಬಂದಿದ್ದು, ಭಾರತಕ್ಕೆ ಪ್ರಯಾಣಿಸಲು ಅನುಮತಿ ಇಲ್ಲ ಎಂದು ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ನಡೆಯಲಿರುವ ಭಾರತ್‌ ಸಮಿಟ್‌ನಲ್ಲಿ ಮಾಧ್ಯಮ, ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಕುರಿತು ನಡೆಯುವ ಚರ್ಚೆಯಲ್ಲಿ ಭಾಷಣಕಾರರಾಗಿ ಭಾಗವಹಿಸಲು ಹೆಲೆ ಲಿಂಗ್‌ ಅವರನ್ನು ಆಹ್ವಾನಿಸಲಾಗಿತ್ತು. ಭಾರತಕ್ಕೆ ಬರಲು ವೀಸಾ ದೊರೆತಿತ್ತು ಮತ್ತು ಅಗತ್ಯ ರಾಜಕೀಯ ಅನುಮತಿಯೂ ಲಭಿಸಿತ್ತು. ಆದರೂ ಕೊನೆಯ ಕ್ಷಣದಲ್ಲಿ ಪ್ರಯಾಣಕ್ಕೆ ತಡೆ ನೀಡಲಾಗಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ತಮ್ಮ ಪೋಸ್ಟ್‌ನೊಂದಿಗೆ ಹಂಚಿಕೊಂಡಿರುವ ವಿಡಿಯೊದಲ್ಲಿ ಮಾತನಾಡಿರುವ ಲಿಂಗ್‌, ಭಾರತಕ್ಕೆ ಇದು ತಮ್ಮ ಮೊದಲ ಭೇಟಿಯಾಗಬೇಕಿತ್ತು. ಪ್ರಯಾಣಕ್ಕಾಗಿ ಸಿದ್ಧತೆ ಮಾಡಿಕೊಂಡು, ಸಾಮಾನುಗಳನ್ನು ಪ್ಯಾಕ್‌ ಮಾಡಿದ್ದೆ. ಆದರೆ ವಿಮಾನ ನಿಲ್ದಾಣಕ್ಕೆ ಹೊರಡುವ ಕೆಲವೇ ನಿಮಿಷಗಳ ಮೊದಲು ಭಾರತೀಯ ರಾಯಭಾರ ಕಚೇರಿಯಿಂದ ಕರೆ ಬಂದು, ಇಂದು ಭಾರತಕ್ಕೆ ಹೋಗಲು ಸಾಧ್ಯವಿಲ್ಲ ಎಂದು ತಿಳಿಸಲಾಯಿತು ಎಂದು ಹೇಳಿದ್ದಾರೆ.

ಈ ನಿರ್ಧಾರದ ಹಿಂದೆ ಕೇಂದ್ರ ಗೃಹ ಸಚಿವಾಲಯದ ಆದೇಶವಿದೆ ಎಂದು ಅವರು ಆರೋಪಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ನೇರವಾಗಿ ಉದ್ದೇಶಿಸಿ ಮಾತನಾಡಿರುವ ಲಿಂಗ್‌, ವೀಸಾ ನೀಡಿದ ಬಳಿಕವೂ ಭಾರತ ಪ್ರವೇಶಕ್ಕೆ ಅನುಮತಿ ನಿರಾಕರಿಸಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಈ ಹಿಂದೆ ತಾವು ಮಾಡಿದ ಟೀಕೆಗಳೇ ವೀಸಾ ರದ್ದತಿಗೆ ಕಾರಣವಾಗಿರಬಹುದು ಎಂಬ ಅನುಮಾನವನ್ನೂ ಲಿಂಗ್‌ ವ್ಯಕ್ತಪಡಿಸಿದ್ದಾರೆ. 2026ರ ಮೇ ತಿಂಗಳಲ್ಲಿ ಪ್ರಧಾನಿ ಮೋದಿ ನಾರ್ವೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರನ್ನು ಪ್ರಶ್ನಿಸಿದ್ದೆ. ಪತ್ರಿಕಾ ಸ್ವಾತಂತ್ರ್ಯವನ್ನು ಬಳಸಿಕೊಂಡು ಪ್ರಧಾನಿಯವರ ಆಡಳಿತದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದೆ.

ನಾರ್ವೆಯ ಪತ್ರಿಕೆಯಲ್ಲಿ ಪ್ರಕಟವಾದ ಅಭಿಪ್ರಾಯ ಲೇಖನಗಳಲ್ಲಿಯೂ ಭಾರತ ಸರ್ಕಾರದ ಆಡಳಿತವನ್ನು ಟೀಕಿಸಿದ್ದೆ. ಈ ಕಾರಣದಿಂದಲೇ ರಾಜಕೀಯ ಪ್ರೇರಿತ ನಿರ್ಧಾರ ಕೈಗೊಂಡಿರಬಹುದು ಎಂದು ಅವರು ಶಂಕಿಸಿದ್ದಾರೆ. ಆದರೆ, ಈ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಭಾರತ್‌ ಸಮಿಟ್‌ನಲ್ಲಿ ತಮ್ಮ ಭಾಷಣಕ್ಕೆ ಇನ್ನೂ 48 ಗಂಟೆಗಳ ಕಾಲಾವಕಾಶವಿದೆ ಎಂದು ಹೇಳಿರುವ ಲಿಂಗ್‌, ಪ್ರಯಾಣಕ್ಕೆ ಅವಕಾಶ ನೀಡುವಂತೆ ಅಮಿತ್‌ ಶಾ ಅವರಿಗೆ ಮನವಿ ಮಾಡಿದ್ದಾರೆ. ಪತ್ರಿಕಾ ಸ್ವಾತಂತ್ರ್ಯ, ಮಾಧ್ಯಮ ಮತ್ತು ಪ್ರಜಾಪ್ರಭುತ್ವದ ನಡುವಿನ ಸಂಬಂಧದ ಕುರಿತು ಮಾತನಾಡಲು ತಮಗೆ ಆಹ್ವಾನ ನೀಡಲಾಗಿತ್ತು. ಭಾರತದಲ್ಲಿ ತಮ್ಮ ಆಗಮನಕ್ಕಾಗಿ ಹಲವರು ಕಾಯುತ್ತಿದ್ದಾರೆ. ಹೀಗಾಗಿ, ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ಆಯೋಜಿಸಿರುವ ಎರಡನೇ ಆವೃತ್ತಿಯ ಭಾರತ್‌ ಸಮಿಟ್‌ ನವೆಂಬರ್‌ 13 ಮತ್ತು 14ರಂದು ಹೈದರಾಬಾದ್‌ನ ಹೈಟೆಕ್ಸ್‌ನಲ್ಲಿ ನಡೆಯಲಿದೆ. ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್‌ ರೆಡ್ಡಿ ಮತ್ತು ಕಾಂಗ್ರೆಸ್‌ನ ವಿದೇಶಾಂಗ ಘಟಕದ ಮುಖ್ಯಸ್ಥ ಸಲ್ಮಾನ್‌ ಖುರ್ಷಿದ್‌ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

70ಕ್ಕೂ ಹೆಚ್ಚು ದೇಶಗಳ ಚುನಾಯಿತ ಪ್ರತಿನಿಧಿಗಳು, ನೀತಿ ನಿರೂಪಕರು ಹಾಗೂ ಬೌದ್ಧಿಕ ವಲಯದವರು ಸೇರಿದಂತೆ ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ.

ಹೆಲೆ ಲಿಂಗ್‌ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಥವಾ ಕೇಂದ್ರ ಗೃಹ ಸಚಿವಾಲಯದಿಂದ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ:

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು