ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಮಕ್ಕಳಾಗದ ನೋವು ದಾಂಪತ್ಯ ಕಲಹಕ್ಕೆ ಕಾರಣ: ಪತಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ!ಏಳು ಷರತ್ತುಗಳಿಗೆ ಒಪ್ಪಿದರಷ್ಟೇ ಮಾತುಕತೆ: ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ; ಸಂಧಾನಕ್ಕೆ ವ್ಯಾನ್ಸ್ ಪ್ರಯತ್ನಶಿಶುನಾಳ ಶರೀಫರ ತತ್ವಪದಗಳ ಭಾಷಾ ವೈಶಿಷ್ಟ್ಯತೆಪದೇಪದೆ ವಿಚಾರಣೆಗೆ ಕರೆದ ಸಿಸಿಬಿ ವಿರುದ್ಧ ಕೃಪಾ ಆಳ್ವ ಅಸಮಾಧಾನಸೋನಿಯಾ ಗಾಂಧಿ ಬಗ್ಗೆ ಬಿಜೆಪಿ, ಆರ್‌ಎಸ್‌ಎಸ್‌ ಜೀವನಪೂರ್ತಿ ಸುಳ್ಳುಗಳನ್ನು ಹರಡಿವೆ: ಪ್ರಿಯಾಂಕಾ ಗಾಂಧಿಉತ್ತರ ಪ್ರದೇಶ ಚುನಾವಣೆ: ಓವೈಸಿ–ಚಂದ್ರಶೇಖರ್ ಆಜಾದ್ ಮೈತ್ರಿ ಘೋಷಣೆ; ‘ಸಾಮಾಜಿಕ ಪರಿವರ್ತನಾ ಮೋರ್ಚಾ’ಗೆ ಕಾಂಗ್ರೆಸ್‌, ಎಸ್‌ಪಿಗೂ ಆಹ್ವಾನಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ ರೈಲು ಟಿಕೆಟ್‌ ಬುಕ್ಕಿಂಗ್‌ ಆರಂಭ: ಮಂಗಳೂರು, ಉಡುಪಿ, ಕುಂದಾಪುರದಿಂದ ಪ್ರಯಾಣ ದರವೆಷ್ಟು?ಹಾಸನದ DC ಕಚೇರಿಯಲ್ಲಿ ಕೋಟ್ಯಂತರ ರೂ. ಅಕ್ರಮ: ತನಿಖೆಗೆ ನಡೆಸುವಂತೆ ಶಾಲಿನಿ ರಜನೀಶ್ ಅವರಿಗೆ ದೂರು ವ್ಯಕ್ತಿ ಅಪಹರಿಸಿ 1.15 ಕೋಟಿ ರೂ. ದರೋಡೆ: ಸಂಚಾರ ಪೊಲೀಸ್ ಸಿಬ್ಬಂದಿ ಜೊತೆ – ಐವರ ಬಂಧನಮೆಟ್ರೋ 3 ನಿಲ್ದಾಣಗಳಲ್ಲಿ ಹೆಸರು ಬದಲಾವಣೆ – ಕೇಂದ್ರ ಅನುಮೋದನೆಕನ್ನಡಿಗರ ನಿಜ ಬದುಕಿನ ಸಮಸ್ಯೆಗಳನ್ನು ಪರಿಹರಿಸದೆ ವಿಶ್ವ ಕನ್ನಡ ಸಮ್ಮೇಳನ ನಡೆಸುವುದರಲ್ಲಿ ಅರ್ಥವಿಲ್ಲ: ಕರವೇ ಅಧ್ಯಕ್ಷ ನಾರಾಯಣ ಗೌಡಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್‌ ಸಿಬ್ಬಂದಿಯ ಮೃತದೇಹ ಪತ್ತೆ; ಸೇವಾ ಶಸ್ತ್ರಾಸ್ತ್ರಗಳು ನಾಪತ್ತೆಹಿಂದಿನ ಕಾಲದ ಪಟಾಕಿಗಳು ಕೀಟಗಳನ್ನು ನಾಶಪಡಿಸಿ ವಾತಾವರಣವನ್ನು ಶುದ್ಧಗೊಳಿಸುತ್ತಿದ್ದವು: ಮೋಹನ್‌ ಭಾಗವತ್‌ಇರಾನ್‌ ಯುದ್ಧದ ವಿಚಾರದಲ್ಲಿ ಟ್ರಂಪ್‌–ನೆತನ್ಯಾಹು ನಡುವೆ ಭಿನ್ನಮತ; ದೂರವಾಣಿ ಮಾತುಕತೆಯಲ್ಲಿ ತೀವ್ರ ವಾಗ್ವಾದಮೋದಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಭಾರತದ ವೀಸಾ ನಿರಾಕರಿಸಲಾಗಿದೆ: ನಾರ್ವೆ ಪತ್ರಕರ್ತೆ ಹೆಲೆ ಲಿಂಗ್‌ಸಿಎಮ್ ಡಿ.ಕೆ. ಶಿವಕುಮಾರ್, ರಾಹುಲ್‌ ಗಾಂಧಿ ಬಳಿ ತನ್ನ ಸ್ಥಾನ ಉಳಿಸಿಕೊಡುವಂತೆ ಗೋಗರೆಯುತ್ತಿದ್ದಾರೆ – ಬಿ ವೈ ವಿಜಯೇಂದ್ರಮೋದಿ ಭೇಟಿ ಹಿನ್ನೆಲೆ: ಆನೇಕಲ್‌ನಲ್ಲಿ ಮದ್ಯದಂಗಡಿ, ಮಾಂಸದಂಗಡಿಗಳಿಗೆ ಎರಡು ದಿನ ನಿರ್ಬಂಧನಕಲಿ ಶೈಕ್ಷಣಿಕ ದಾಖಲೆ ಸಲ್ಲಿಸಿದ ಆರೋಪ: ಇಂಡೋನೇಷ್ಯಾದ ಉಪಾಧ್ಯಕ್ಷ ಗಿಬ್ರಾನ್ ರಾಕಬುಮಿಂಗ್ ರಾಕಾ ದಿಢೀರ್ ರಾಜೀನಾಮೆ!ದೀಪಾವಳಿ ಪಟಾಕಿಯಿಂದ ವಾಯುಮಾಲಿನ್ಯ ಹೆಚ್ಚಾದರೆ ಏನಂತೆ?: ಯೋಗಿ ಆದಿತ್ಯನಾಥ್ ಡಾಫೆಯ ಮಾತುಪ್ರಗತಿ ಕಾಣದ ರಷ್ಯಾ–ಉಕ್ರೇನ್ ಶಾಂತಿ ಮಾತುಕತೆ: ಕೈದಿಗಳ ವಿನಿಮಯಕ್ಕೆ ಒಪ್ಪಿಗೆ

ಹಿಂದಿನ ಕಾಲದ ಪಟಾಕಿಗಳು ಕೀಟಗಳನ್ನು ನಾಶಪಡಿಸಿ ವಾತಾವರಣವನ್ನು ಶುದ್ಧಗೊಳಿಸುತ್ತಿದ್ದವು: ಮೋಹನ್‌ ಭಾಗವತ್‌

ಹಿಂದಿನ ಕಾಲದ ಪಟಾಕಿಗಳ ಹೊಗೆ ಕೀಟಗಳನ್ನು ನಾಶಪಡಿಸಿ ವಾತಾವರಣ ಶುದ್ಧಗೊಳಿಸುತ್ತಿತ್ತು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

PPeepal Media

Peepal Media ದೇಶ

• 1 ನಿಮಿಷದ ಓದು

ಹಿಂದಿನ ಕಾಲದ ಪಟಾಕಿಗಳು ಕೀಟಗಳನ್ನು ನಾಶಪಡಿಸಿ ವಾತಾವರಣವನ್ನು ಶುದ್ಧಗೊಳಿಸುತ್ತಿದ್ದವು: ಮೋಹನ್‌ ಭಾಗವತ್‌

ನಾಗಪುರ: ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಪಟಾಕಿಗಳು ಹಾನಿಕಾರಕ ರಾಸಾಯನಿಕಗಳಿಂದ ತಯಾರಾಗುತ್ತಿರಲಿಲ್ಲ. ಅವುಗಳ ಹೊಗೆಯಿಂದ ಬೆಳೆಗಳಿಗೆ ಹಾನಿ ಮಾಡುವ ಕೀಟಗಳು ನಾಶವಾಗುತ್ತಿದ್ದವು. ಅಲ್ಲದೆ, ವಾತಾವರಣವೂ ಶುದ್ಧವಾಗುತ್ತಿತ್ತು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

ನಾಗಪುರದಲ್ಲಿ ನವೆಂಬರ್‌ 10ರಂದು ನಡೆದ ದೀಪಾವಳಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತೀಯ ಹಬ್ಬಗಳು ಮತ್ತು ಸಂಪ್ರದಾಯಗಳ ಹಿಂದೆ ವೈಜ್ಞಾನಿಕ ಕಾರಣಗಳಿವೆ ಎಂದು ಪ್ರತಿಪಾದಿಸಿದರು. ಹಿಂದಿನ ಕಾಲದಲ್ಲಿ ಪಟಾಕಿಗಳ ಬಳಕೆಯ ಉದ್ದೇಶ ಕೇವಲ ಸಂಭ್ರಮಾಚರಣೆಯಾಗಿರಲಿಲ್ಲ. ಅವುಗಳ ಹೊಗೆಯಿಂದ ಬೆಳೆಗಳಿಗೆ ಹಾನಿ ಮಾಡುವ ಕೀಟಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿತ್ತು ಎಂದು ಅವರು ಹೇಳಿದರು.

ಇಂದಿನ ಪಟಾಕಿಗಳ ತಯಾರಿಕೆಯಲ್ಲಿ ಬಳಸುವ ರಾಸಾಯನಿಕ ಪದಾರ್ಥಗಳು ಹಿಂದಿನ ಕಾಲದ ಪಟಾಕಿಗಳಲ್ಲಿ ಇರಲಿಲ್ಲ. ಅವುಗಳಿಂದ ಹೊರಬರುತ್ತಿದ್ದ ಹೊಗೆ ಪರಿಸರವನ್ನು ಶುದ್ಧಗೊಳಿಸುವ ಕೆಲಸ ಮಾಡುತ್ತಿತ್ತು ಎಂದು ಭಾಗವತ್‌ ಅಭಿಪ್ರಾಯಪಟ್ಟರು.

ದೀಪಾವಳಿಯ ಸಂದರ್ಭದಲ್ಲಿ ತುಪ್ಪ ಮತ್ತು ಎಳ್ಳೆಣ್ಣೆಯಿಂದ ದೀಪಗಳನ್ನು ಬೆಳಗಿಸುವ ಸಂಪ್ರದಾಯದ ಬಗ್ಗೆಯೂ ಅವರು ಮಾತನಾಡಿದರು. ಇಂತಹ ದೀಪಗಳನ್ನು ಬೆಳಗಿಸುವುದರಿಂದ ವಾತಾವರಣದಲ್ಲಿ ನಿರ್ದಿಷ್ಟ ಬದಲಾವಣೆ ಉಂಟಾಗುತ್ತಿತ್ತು. ಈ ಆಚರಣೆಗಳ ಹಿಂದೆಯೂ ವಿಜ್ಞಾನವಿದೆ ಎಂದು ಹೇಳಿದರು.

‘ವಾತಾವರಣ ಶುದ್ಧ, ಜೀವನ ಶುದ್ಧ’ ಎಂಬ ಮಾತನ್ನು ಉಲ್ಲೇಖಿಸಿದ ಅವರು, ಸಂಪ್ರದಾಯಗಳನ್ನು ಕೇವಲ ಆಚರಿಸುವುದಷ್ಟೇ ಅಲ್ಲದೆ, ಅವುಗಳ ಹಿಂದಿರುವ ಉದ್ದೇಶ ಮತ್ತು ಮಹತ್ವವನ್ನೂ ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಧರ್ಮದ ಸಾಮಾಜಿಕ ಮಹತ್ವದ ಬಗ್ಗೆಯೂ ಭಾಗವತ್‌ ಮಾತನಾಡಿದರು. ಧರ್ಮವು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಧರ್ಮದ ಬಗ್ಗೆ ಹೆಚ್ಚಿನ ತಿಳುವಳಿಕೆ ಇರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ, ಸಂಬಂಧಗಳನ್ನು ಕಾಪಾಡುವಲ್ಲಿ ಮತ್ತು ಮುಂದಿನ ಪೀಳಿಗೆಗೆ ಮೌಲ್ಯಗಳನ್ನು ಕಲಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದರು.

ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸುವ ಸಂಪ್ರದಾಯದ ಬಗ್ಗೆಯೂ ಪ್ರಸ್ತಾಪಿಸಿದ ಅವರು, ಈ ಹಬ್ಬವು ಜನರನ್ನು ಒಗ್ಗೂಡಿಸಿ ಸಂತೋಷ ಮತ್ತು ಸೌಹಾರ್ದವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನ ವಿವಿಧ ದೇಶಗಳಲ್ಲಿರುವ ಭಾರತೀಯರೂ ದೀಪಾವಳಿಯನ್ನು ಆಚರಿಸುತ್ತಿದ್ದಾರೆ. ಅಮೆರಿಕ ಮತ್ತು ಬ್ರಿಟನ್‌ನ ಸಂಸತ್ತುಗಳಲ್ಲಿಯೂ ದೀಪಾವಳಿ ಆಚರಣೆ ನಡೆಯುತ್ತಿರುವುದು ಈ ಹಬ್ಬಕ್ಕೆ ಜಾಗತಿಕ ಮಟ್ಟದಲ್ಲಿ ದೊರೆಯುತ್ತಿರುವ ಮನ್ನಣೆಯನ್ನು ತೋರಿಸುತ್ತದೆ ಎಂದರು.

ಹಬ್ಬಗಳು ಸಮಾಜವನ್ನು ಜೀವಂತವಾಗಿಡುತ್ತವೆ. ಕೆಲವರು ವಿರೋಧಿಸಿದರೂ ಹಬ್ಬಗಳ ಆಚರಣೆ ನಿಲ್ಲುವುದಿಲ್ಲ. ಆದರೆ, ಸಂಪ್ರದಾಯಗಳ ಮೂಲ ಆಶಯವನ್ನು ಅರ್ಥಮಾಡಿಕೊಂಡು ಅವುಗಳನ್ನು ಸರಿಯಾದ ರೀತಿಯಲ್ಲಿ ಆಚರಿಸಬೇಕು ಎಂದು ಭಾಗವತ್‌ ಹೇಳಿದರು.

ಇದನ್ನೂ ಓದಿ:

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು