ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಮಕ್ಕಳಾಗದ ನೋವು ದಾಂಪತ್ಯ ಕಲಹಕ್ಕೆ ಕಾರಣ: ಪತಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ!ಏಳು ಷರತ್ತುಗಳಿಗೆ ಒಪ್ಪಿದರಷ್ಟೇ ಮಾತುಕತೆ: ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ; ಸಂಧಾನಕ್ಕೆ ವ್ಯಾನ್ಸ್ ಪ್ರಯತ್ನಶಿಶುನಾಳ ಶರೀಫರ ತತ್ವಪದಗಳ ಭಾಷಾ ವೈಶಿಷ್ಟ್ಯತೆಪದೇಪದೆ ವಿಚಾರಣೆಗೆ ಕರೆದ ಸಿಸಿಬಿ ವಿರುದ್ಧ ಕೃಪಾ ಆಳ್ವ ಅಸಮಾಧಾನಸೋನಿಯಾ ಗಾಂಧಿ ಬಗ್ಗೆ ಬಿಜೆಪಿ, ಆರ್‌ಎಸ್‌ಎಸ್‌ ಜೀವನಪೂರ್ತಿ ಸುಳ್ಳುಗಳನ್ನು ಹರಡಿವೆ: ಪ್ರಿಯಾಂಕಾ ಗಾಂಧಿಉತ್ತರ ಪ್ರದೇಶ ಚುನಾವಣೆ: ಓವೈಸಿ–ಚಂದ್ರಶೇಖರ್ ಆಜಾದ್ ಮೈತ್ರಿ ಘೋಷಣೆ; ‘ಸಾಮಾಜಿಕ ಪರಿವರ್ತನಾ ಮೋರ್ಚಾ’ಗೆ ಕಾಂಗ್ರೆಸ್‌, ಎಸ್‌ಪಿಗೂ ಆಹ್ವಾನಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ ರೈಲು ಟಿಕೆಟ್‌ ಬುಕ್ಕಿಂಗ್‌ ಆರಂಭ: ಮಂಗಳೂರು, ಉಡುಪಿ, ಕುಂದಾಪುರದಿಂದ ಪ್ರಯಾಣ ದರವೆಷ್ಟು?ಹಾಸನದ DC ಕಚೇರಿಯಲ್ಲಿ ಕೋಟ್ಯಂತರ ರೂ. ಅಕ್ರಮ: ತನಿಖೆಗೆ ನಡೆಸುವಂತೆ ಶಾಲಿನಿ ರಜನೀಶ್ ಅವರಿಗೆ ದೂರು ವ್ಯಕ್ತಿ ಅಪಹರಿಸಿ 1.15 ಕೋಟಿ ರೂ. ದರೋಡೆ: ಸಂಚಾರ ಪೊಲೀಸ್ ಸಿಬ್ಬಂದಿ ಜೊತೆ – ಐವರ ಬಂಧನಮೆಟ್ರೋ 3 ನಿಲ್ದಾಣಗಳಲ್ಲಿ ಹೆಸರು ಬದಲಾವಣೆ – ಕೇಂದ್ರ ಅನುಮೋದನೆಕನ್ನಡಿಗರ ನಿಜ ಬದುಕಿನ ಸಮಸ್ಯೆಗಳನ್ನು ಪರಿಹರಿಸದೆ ವಿಶ್ವ ಕನ್ನಡ ಸಮ್ಮೇಳನ ನಡೆಸುವುದರಲ್ಲಿ ಅರ್ಥವಿಲ್ಲ: ಕರವೇ ಅಧ್ಯಕ್ಷ ನಾರಾಯಣ ಗೌಡಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್‌ ಸಿಬ್ಬಂದಿಯ ಮೃತದೇಹ ಪತ್ತೆ; ಸೇವಾ ಶಸ್ತ್ರಾಸ್ತ್ರಗಳು ನಾಪತ್ತೆಹಿಂದಿನ ಕಾಲದ ಪಟಾಕಿಗಳು ಕೀಟಗಳನ್ನು ನಾಶಪಡಿಸಿ ವಾತಾವರಣವನ್ನು ಶುದ್ಧಗೊಳಿಸುತ್ತಿದ್ದವು: ಮೋಹನ್‌ ಭಾಗವತ್‌ಇರಾನ್‌ ಯುದ್ಧದ ವಿಚಾರದಲ್ಲಿ ಟ್ರಂಪ್‌–ನೆತನ್ಯಾಹು ನಡುವೆ ಭಿನ್ನಮತ; ದೂರವಾಣಿ ಮಾತುಕತೆಯಲ್ಲಿ ತೀವ್ರ ವಾಗ್ವಾದಮೋದಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಭಾರತದ ವೀಸಾ ನಿರಾಕರಿಸಲಾಗಿದೆ: ನಾರ್ವೆ ಪತ್ರಕರ್ತೆ ಹೆಲೆ ಲಿಂಗ್‌ಸಿಎಮ್ ಡಿ.ಕೆ. ಶಿವಕುಮಾರ್, ರಾಹುಲ್‌ ಗಾಂಧಿ ಬಳಿ ತನ್ನ ಸ್ಥಾನ ಉಳಿಸಿಕೊಡುವಂತೆ ಗೋಗರೆಯುತ್ತಿದ್ದಾರೆ – ಬಿ ವೈ ವಿಜಯೇಂದ್ರಮೋದಿ ಭೇಟಿ ಹಿನ್ನೆಲೆ: ಆನೇಕಲ್‌ನಲ್ಲಿ ಮದ್ಯದಂಗಡಿ, ಮಾಂಸದಂಗಡಿಗಳಿಗೆ ಎರಡು ದಿನ ನಿರ್ಬಂಧನಕಲಿ ಶೈಕ್ಷಣಿಕ ದಾಖಲೆ ಸಲ್ಲಿಸಿದ ಆರೋಪ: ಇಂಡೋನೇಷ್ಯಾದ ಉಪಾಧ್ಯಕ್ಷ ಗಿಬ್ರಾನ್ ರಾಕಬುಮಿಂಗ್ ರಾಕಾ ದಿಢೀರ್ ರಾಜೀನಾಮೆ!ದೀಪಾವಳಿ ಪಟಾಕಿಯಿಂದ ವಾಯುಮಾಲಿನ್ಯ ಹೆಚ್ಚಾದರೆ ಏನಂತೆ?: ಯೋಗಿ ಆದಿತ್ಯನಾಥ್ ಡಾಫೆಯ ಮಾತುಪ್ರಗತಿ ಕಾಣದ ರಷ್ಯಾ–ಉಕ್ರೇನ್ ಶಾಂತಿ ಮಾತುಕತೆ: ಕೈದಿಗಳ ವಿನಿಮಯಕ್ಕೆ ಒಪ್ಪಿಗೆ

ಮಕ್ಕಳಾಗದ ನೋವು ದಾಂಪತ್ಯ ಕಲಹಕ್ಕೆ ಕಾರಣ: ಪತಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ!

PPeepal Media Desk

Peepal Media Desk ಕ್ರೈಂ

• 1 ನಿಮಿಷದ ಓದು

ಮಕ್ಕಳಾಗದ ನೋವು ದಾಂಪತ್ಯ ಕಲಹಕ್ಕೆ ಕಾರಣ: ಪತಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ!

ಬೆಂಗಳೂರು: ಮಕ್ಕಳಾಗಲಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ನಡುವೆ ದೀರ್ಘಕಾಲದಿಂದ ನಡೆಯುತ್ತಿದ್ದ ಮನಸ್ತಾಪ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ಬುಧವಾರ ರಾತ್ರಿ ನಡೆದಿದೆ. ಬ್ಯಾಂಕ್ ಉದ್ಯೋಗಿಯಾಗಿದ್ದ 44 ವರ್ಷದ ರಾಜಶೇಖರ್ ಕೊಲೆಯಾದ ವ್ಯಕ್ತಿ. ಹತ್ಯೆ ಆರೋಪದಡಿ ಅವರ ಪತ್ನಿ ಮಾಲಾಶ್ರೀ (35) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದಿರುವುದು ದಂಪತಿಯ ನಡುವಿನ ವೈಮನಸ್ಸಿಗೆ ಪ್ರಮುಖ ಕಾರಣವಾಗಿತ್ತು ಎನ್ನಲಾಗಿದೆ. ರಾಜಶೇಖರ್ ಹಗಲಿನ ವೇಳೆಯಲ್ಲಿ ಪತ್ನಿಯೊಂದಿಗೆ ಸಹಜವಾಗಿದ್ದರೂ, ರಾತ್ರಿ ಮದ್ಯ ಸೇವಿಸಿ ಮನೆಗೆ ಮರಳಿದ ಬಳಿಕ ಜಗಳವಾಡಿ ನಿಂದನೆ ಹಾಗೂ ಹಲ್ಲೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಬುಧವಾರ ರಾತ್ರಿ ಕೂಡ ಇದೇ ವಿಚಾರವಾಗಿ ದಂಪತಿ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಮಾಲಾಶ್ರೀ ಚಾಕುವಿನಿಂದ ಪತಿಗೆ ಇರಿದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ರಾಜಶೇಖರ್ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೆಂಪೇಗೌಡ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಾಲಾಶ್ರೀ ಅವರನ್ನು ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ, ಹತ್ಯೆಗೆ ಕಾರಣವಾದ ನಿಖರ ಸನ್ನಿವೇಶ ಹಾಗೂ ಇತರೆ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

PPeepal Media Desk

Peepal Media Desk

Peepal Media · ಕ್ರೈಂ ವಿಭಾಗ

ಸಂಬಂಧಿತ ಸುದ್ದಿಗಳು