ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಹಾಸನಾಂಬ – 2026, 30 ಲಕ್ಷಕ್ಕೂ ಅಧಿಕ ಭಕ್ತರು; ₹29.55 ಕೋಟಿ ಆದಾಯ ಸಂಗ್ರಹಲಂಚ ಪಡೆಯುತ್ತಿದ್ದಾಗ ರಾಮನಗರ ಉಪ ತಹಶೀಲ್ದಾರ್‌ ಅಂದರ್‌ – ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿ2022ರ ಮತಾಂತರ ನಿಷೇಧ ಕಾಯ್ದೆಯನ್ನೇ ಮರುಜಾರಿಗೆ ಕಾಂಗ್ರೆಸ್ ಬದ್ಧ: ಬಿ.ಕೆ. ಹರಿಪ್ರಸಾದ್ಕುಮಾರಸ್ವಾಮಿ ನಮಗೇನು ದೊಡ್ಡವರಲ್ಲ, ತಪ್ಪು ಮಾಡಿದರೆ ಶಿಕ್ಷೆಯಾಗಲಿ, ತನಿಖೆ ನಡೆಯಬೇಕು- ಡಿಸಿ ಲತಾಕುಮಾರಿE-ಖಾತಾ ಕಾನೂನು ಉಲ್ಲಂಘನೆ, GBA ಆಯುಕ್ತ ಮಾಗಿ ಹಾಗೂ 31 ಜನರ – ವಿರುದ್ಧ FIR ದಾಖಲುಎಥೆನಾಲ್ ವಿವಾದಕ್ಕೆ ಅಶೋಕ್ ತಿರುಗೇಟು; ಮೈಲೇಜ್ ಇಳಿಕೆಗೆ ರಸ್ತೆ ಗುಂಡಿಗಳೇ ಕಾರಣವೆಂದು ವ್ಯಂಗ್ಯಮಕ್ಕಳಾಗದ ನೋವು ದಾಂಪತ್ಯ ಕಲಹಕ್ಕೆ ಕಾರಣ: ಪತಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ!ಏಳು ಷರತ್ತುಗಳಿಗೆ ಒಪ್ಪಿದರಷ್ಟೇ ಮಾತುಕತೆ: ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ; ಸಂಧಾನಕ್ಕೆ ವ್ಯಾನ್ಸ್ ಪ್ರಯತ್ನಶಿಶುನಾಳ ಶರೀಫರ ತತ್ವಪದಗಳ ಭಾಷಾ ವೈಶಿಷ್ಟ್ಯತೆಸಿಸಿಬಿ ವಿರುದ್ಧ ಕೃಪಾ ಆಳ್ವ ಅಸಮಾಧಾನಸೋನಿಯಾ ಗಾಂಧಿ ಬಗ್ಗೆ ಬಿಜೆಪಿ, ಆರ್‌ಎಸ್‌ಎಸ್‌ ಜೀವನಪೂರ್ತಿ ಸುಳ್ಳುಗಳನ್ನು ಹರಡಿವೆ: ಪ್ರಿಯಾಂಕಾ ಗಾಂಧಿಉತ್ತರ ಪ್ರದೇಶ ಚುನಾವಣೆ: ಓವೈಸಿ–ಚಂದ್ರಶೇಖರ್ ಆಜಾದ್ ಮೈತ್ರಿ ಘೋಷಣೆ; ‘ಸಾಮಾಜಿಕ ಪರಿವರ್ತನಾ ಮೋರ್ಚಾ’ಗೆ ಕಾಂಗ್ರೆಸ್‌, ಎಸ್‌ಪಿಗೂ ಆಹ್ವಾನಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ ರೈಲು ಟಿಕೆಟ್‌ ಬುಕ್ಕಿಂಗ್‌ ಆರಂಭ: ಮಂಗಳೂರು, ಉಡುಪಿ, ಕುಂದಾಪುರದಿಂದ ಪ್ರಯಾಣ ದರವೆಷ್ಟು?ಹಾಸನದ DC ಕಚೇರಿಯಲ್ಲಿ ಕೋಟ್ಯಂತರ ರೂ. ಅಕ್ರಮ: ತನಿಖೆಗೆ ನಡೆಸುವಂತೆ ಶಾಲಿನಿ ರಜನೀಶ್ ಅವರಿಗೆ ದೂರು ವ್ಯಕ್ತಿ ಅಪಹರಿಸಿ 1.15 ಕೋಟಿ ರೂ. ದರೋಡೆ: ಸಂಚಾರ ಪೊಲೀಸ್ ಸಿಬ್ಬಂದಿ ಜೊತೆ – ಐವರ ಬಂಧನಮೆಟ್ರೋ 3 ನಿಲ್ದಾಣಗಳಲ್ಲಿ ಹೆಸರು ಬದಲಾವಣೆ – ಕೇಂದ್ರ ಅನುಮೋದನೆಕನ್ನಡಿಗರ ನಿಜ ಬದುಕಿನ ಸಮಸ್ಯೆಗಳನ್ನು ಪರಿಹರಿಸದೆ ವಿಶ್ವ ಕನ್ನಡ ಸಮ್ಮೇಳನ ನಡೆಸುವುದರಲ್ಲಿ ಅರ್ಥವಿಲ್ಲ: ಕರವೇ ಅಧ್ಯಕ್ಷ ನಾರಾಯಣ ಗೌಡಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್‌ ಸಿಬ್ಬಂದಿಯ ಮೃತದೇಹ ಪತ್ತೆ; ಸೇವಾ ಶಸ್ತ್ರಾಸ್ತ್ರಗಳು ನಾಪತ್ತೆಹಿಂದಿನ ಕಾಲದ ಪಟಾಕಿಗಳು ಕೀಟಗಳನ್ನು ನಾಶಪಡಿಸಿ ವಾತಾವರಣವನ್ನು ಶುದ್ಧಗೊಳಿಸುತ್ತಿದ್ದವು: ಮೋಹನ್‌ ಭಾಗವತ್‌ಇರಾನ್‌ ಯುದ್ಧದ ವಿಚಾರದಲ್ಲಿ ಟ್ರಂಪ್‌–ನೆತನ್ಯಾಹು ನಡುವೆ ಭಿನ್ನಮತ; ದೂರವಾಣಿ ಮಾತುಕತೆಯಲ್ಲಿ ತೀವ್ರ ವಾಗ್ವಾದ

ಲಂಚ ಪಡೆಯುತ್ತಿದ್ದಾಗ ರಾಮನಗರ ಉಪ ತಹಶೀಲ್ದಾರ್‌ ಅಂದರ್‌ – ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿ

ಲಂಚ ಪಡೆಯುತ್ತಿದ್ದಾಗ ರಾಮನಗರ ಉಪ ತಹಶೀಲ್ದಾರ್‌ ಅಂದರ್‌ – ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿ

ಬೆಂಗಳೂರು: ಅರ್ಜಿದಾರರೊಬ್ಬರಿಂದ 13 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ರಾಮನಗರ ತಾಲ್ಲೂಕಿನ ಉಪ ತಹಶೀಲ್ದಾರ್‌ನನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.ಬೆಂಗಳೂರಿನ ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಕೂಟಗಲ್ ಹೋಬಳಿಯ ಉಪ ತಹಶೀಲ್ದಾರ್ ಸೋಮೇಶ್, ವಂಶವೃಕ್ಷ ಪ್ರಮಾಣಪತ್ರಕ್ಕೆ ಸಹಿ ಹಾಕಲು ಹೊಂಬೇಗೌಡನದೊಡ್ಡಿ ಗ್ರಾಮದ ರಾಕೇಶ್ ಎಂಬುವರಿಂದ ಹಣ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಪೊಲೀಸರ ಪ್ರಕಾರ, ರಾಕೇಶ್ ಒಂದು ವಾರದ ಹಿಂದೆ ವಂಶ ವೃಕ್ಷ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಗ್ರಾಮ ಲೆಕ್ಕಾಧಿಕಾರಿಯ ಪರಿಶೀಲನೆಯ ಬಳಿಕ ಅಂತಿಮ ಸಹಿಗಾಗಿ ಅರ್ಜಿಯನ್ನು ಸೋಮೇಶ್ ಅವರಿಗೆ ಕಳುಹಿಸಲಾಗಿತ್ತು. ಈ ವೇಳೆ ಪ್ರಮಾಣಪತ್ರಕ್ಕೆ ಸಹಿ ಹಾಕಲು ಉಪ ತಹಶೀಲ್ದಾರ್ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಹಲವು ಬಾರಿ ಮನವಿ ಮಾಡಿದರೂ ಲಂಚ ನೀಡದ ಹೊರತು ಅರ್ಜಿಯನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲ ಎಂದು ತಿಳಿದ್ದಾರೆ. ಬಳಿಕ ಮಾತುಕತೆಯ ನಂತರ ಲಂಚದ ಮೊತ್ತವನ್ನು 13 ಸಾವಿರ ರೂಪಾಯಿಗೆ ಇಳಿಸಲಾಗಿತ್ತು.ಈ ನಡುವೆ ರಾಕೇಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಬಲೆ ಬೀಸಿದ್ದರು.ಬುಧವಾರ ಬೆಳಗ್ಗೆ ಸುಮಾರು 11.50ರ ವೇಳೆಗೆ ರಾಕೇಶ್ ಉಪ ತಹಶೀಲ್ದಾರ್ ಕಚೇರಿಗೆ ತೆರಳಿ ಹಣ ನೀಡುತ್ತಿದ್ದಂತೆ, ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ನೇತೃತ್ವದ ತಂಡ ಸೋಮೇಶ್ ಅವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದೆ. ಈ ವೇಳೆ ಲಂಚದ ಹಣವನ್ನೂ ವಶಪಡಿಸಿಕೊಳ್ಳಲಾಗಿದೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು