ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಸಿಡಿ ಮಾಡೋದು, ಪೋಸ್ಟರ್ ಅಂಟಿಸೋದು ಬಿಡ್ರಿ ಡಿಕೆಶಿ – ಎಚ್ಡಿಕೆ ಗರಂಆರ್‌ಎಸ್ಎಸ್‌ಗೆ ನೊಂದಣಿ ಮಾಡಿಸುವುದು ಸೂಕ್ತ, ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆರೈಲುಗಳಲ್ಲಿ ಗಬ್ಬು ವಾಸನೆ, ರೈಲ್ವೇಗೆ 30,000 ರೂ. ದಂಡ ವಿಧಿಸಿ – ಚೀಮಾರಿ ಹಾಕಿದ ಗ್ರಾಹಕ ಆಯೋಗಪತ್ರಿಕಾಗೋಷ್ಠಿ ವೇಳೆ ವ್ಯಕ್ತಿಗೆ ಮುತ್ತಿಟ್ಟ ಬಿಜೆಪಿ ಶಾಸಕ – ಮರ್ಯಾದೆ ಇಲ್ಲಾ ಎಂದ ನೆಟ್ಟಿಗರುಶಿಕ್ಷಕರ ವರ್ಗಾವಣೆ ನಿಯಮ ಬದಲಾವಣೆ – ಕರಡು ಅಧಿಸೂಚನೆ ಹೊರಡಿಸಿದ ಸರ್ಕಾರಬೊಗಸೆಗೆ ದಕ್ಕಿದ್ದು-100 : “ಸತ್ಯ ಮುಖ್ಯವಲ್ಲ; ಗೆಲುವು ಮಾತ್ರ!”ಊರ ಬಯಲಿನ ನಡುವೆ – 1 : ಕಾಲ ಓಡುತ್ತಿದೆ ಎನ್ನುತ್ತಿದ್ದೇವೆ! ಆದರೆ….?SC/ST ಮೀಸಲಾತಿ ಹೋರಾಟ, ಸುಪ್ರೀಂ ಕೋರ್ಟ್‌ನಲ್ಲಿ ಗೆಲುವಿನ ವಿಶ್ವಾಸ –  ಡಿ.ಕೆ ಶಿವಕುಮಾರ್ನವೆಂಬರ್ 15ರಂದು KPSC ಪೂರ್ವಭಾವಿ ಪರೀಕ್ಷೆ: ಚುನಾವಣಾ ಮಾದರಿ ಭದ್ರತೆ – CM ಸೂಚನೆSSLC, PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ –  ನೋಂದಣಿ ದಿನಾಂಕ ವಿಸ್ತರಣೆಅಡುಗೆ ಎಣ್ಣೆ ಮರುಬಳಕೆ ಪತ್ತೆಗೆ, ಆರೋಗ್ಯ ಇಲಾಖೆ ಮಾಸ್ಟರ್‌ ಪ್ಲಾನ್‌ – ಯು.ಟಿ. ಖಾದರ್ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಆನೇಕಲ್‌ನಲ್ಲಿ ಮಾಂಸದಂಗಡಿಗಳ ಬಂದ್‌ಗೆ ಆದೇಶ; ಬಿಎನ್‌ಎಸ್‌ಎಸ್‌ ಸೆಕ್ಷನ್‌ 163 ಜಾರಿಮೋದಿ ಸಂಸತ್ತಿನಲ್ಲಿ ನನ್ನೊಂದಿಗೆ ಸಂಸತ್ತಿನಲ್ಲಿ ನೇರ ಚರ್ಚೆ ನಡೆಸಿದರೆ ಮತ್ತೆ ಪ್ರಧಾನಿಯಾಗಿ ಮುಂದುವರೆಯಲಾರರು: ರಾಹುಲ್‌ ಗಾಂಧಿಶಂಕಿತ ಗೂಢಚಾರಿಣಿಯೊಂದಿಗಿನ ಸಂಬಂಧ: ಎನ್‌ವಿಡಿಯಾ ಮಾಜಿ ಸಿಇಒ ಜೆನ್ಸನ್ ಹುವಾಂಗ್‌ಗೆ ಅಮೆರಿಕ ಸಂಸತ್ ಸಮನ್ಸ್‌ಮೈಕ್ರೋಸಾಫ್ಟ್‌ ಸೇವೆಗಳಲ್ಲಿ ಭಾರೀ ವ್ಯತ್ಯಯ: ಸರಿಪಡಿಸುವ ಪ್ರಯತ್ನಗಳು ನಿರೀಕ್ಷಿತ ಫಲಿತಾಂಶ ನೀಡುತ್ತಿಲ್ಲ ಎಂದು ಕೈ ಚೆಲ್ಲಿದ ಕಂಪನಿಇ-ಖಾತಾ ವ್ಯವಸ್ಥೆಯಲ್ಲೇ ಅಕ್ರಮ ಬೆಂಗಳೂರಿನಲ್ಲಿ 98 ಅನರ್ಹ ಆಸ್ತಿಗಳಿಗೆ ಖಾತೆ ಮಂಜೂರು ; 33 ಜನರ ವಿರುದ್ಧ ಪ್ರಕರಣ ದಾಖಲುಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ 9ನೇ ಅನುಸೂಚಿಗೆ ಸೇರಿಸುವಂತೆ ಪ್ರಧಾನಿಗೆ ಪತ್ರ: ಡಿಕೆ ಶಿವಕುಮಾರ್ಕ್ಷೇತ್ರ ಮರು ವಿಂಗಡಣೆ ಮಸೂದೆ ಮತ್ತೆ ಮುನ್ನೆಲೆಗೆ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕೇಂದ್ರದ ಸಿದ್ಧತೆಬೆಂಗಳೂರಿನ ವಕೀಲ ಮಂಜುನಾಥ್ ಕೊಲೆ ಪ್ರಕರಣ: ಬಿಹಾರದಲ್ಲಿ ಆರೋಪಿ ಬಂಧನಓಲಾ ಕಂಪನಿಗೆ ₹10 ಲಕ್ಷ ದಂಡ: ಗ್ರಾಹಕರನ್ನು ಹೆಚ್ಚುವರಿ ಪಾವತಿಗೆ ಪ್ರೇರೇಪಿಸುವ ಫೀಚರ್ ಸ್ಥಗಿತಗೊಳಿಸಲು CCPA ಆದೇಶ

ಆರ್‌ಎಸ್ಎಸ್‌ಗೆ ನೊಂದಣಿ ಮಾಡಿಸುವುದು ಸೂಕ್ತ, ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ

PPeepal Media Desk

Peepal Media Desk ರಾಜಕೀಯ

• 3 ನಿಮಿಷದ ಓದು

ಆರ್‌ಎಸ್ಎಸ್‌ಗೆ ನೊಂದಣಿ ಮಾಡಿಸುವುದು ಸೂಕ್ತ, ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ

ಯಾದಗಿರಿ : ಧರ್ಮ ಮತ್ತು ಜಾತಿಗಳ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಹರಡಿ ಸಂಘರ್ಷಕ್ಕೆ ಕಾರಣವಾಗುವವರೇ ನಿಜವಾದ ದೇಶದ್ರೋಹಿಗಳು. ದೇಶದ ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಆಶಯಗಳ ರಕ್ಷಣೆಗೆ ಯಾವುದೇ ಒತ್ತಡಕ್ಕೂ ಮಣಿಯದೆ ಹೋರಾಟ ಮುಂದುವರಿಸುವುದಾಗಿ ರಾಜ್ಯದ ಗೃಹ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಸುಮಾರು 31 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯನ್ನು ಶುಕ್ರವಾರ ಅನಾವರಣಗೊಳಿಸಿ ಮಾತನಾಡಿದ ಅವರು, ಸಂವಿಧಾನದ ಮಹತ್ವ, ಸಾಮಾಜಿಕ ಸಮಾನತೆ ಮತ್ತು ಕೋಮು ಸೌಹಾರ್ದದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಆರೆಸ್ಸೆಸ್ ಸಂಘಟನೆಯ ನೋಂದಣಿ ವಿಚಾರ ಪ್ರಸ್ತಾಪಿಸಿದ ಸಚಿವರು, ದಲಿತ ಸಂಘಟನೆಗಳಿಗೆ ನೋಂದಣಿ ವ್ಯವಸ್ಥೆ ಇರುವಾಗ ಆರೆಸ್ಸೆಸ್‌ಗೂ ನೋಂದಣಿ ಮಾಡಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್‌ನ ಪಾತ್ರವೇನು ಎಂಬ ಪ್ರಶ್ನೆಯನ್ನೂ ಮುಂದಿಟ್ಟ ಅವರು, ರಾಷ್ಟ್ರಧ್ವಜ ಮತ್ತು ಸಂವಿಧಾನದ ಕುರಿತು ಹಿಂದಿನ ಕಾಲದಲ್ಲಿ ವ್ಯಕ್ತವಾಗಿದ್ದ ವಿರೋಧದ ನಿಲುವುಗಳನ್ನು ಉಲ್ಲೇಖಿಸಿ ಟೀಕಿಸಿದರು.

ಸಂವಿಧಾನವು ಸ್ವತಂತ್ರ ಭಾರತದ ಅತ್ಯಂತ ಬಲಿಷ್ಠ ಅಡಿಪಾಯವಾಗಿದ್ದು, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ಮತದಾನದ ಅವಕಾಶ ಕಲ್ಪಿಸಿದೆ. ಅಂಬೇಡ್ಕರ್ ಅವರ ನೇತೃತ್ವದಲ್ಲಿ ನಡೆದ ಸುದೀರ್ಘ ಅಧ್ಯಯನ ಮತ್ತು ಪರಿಶ್ರಮದ ಫಲವಾಗಿ ಸಂವಿಧಾನ ರೂಪುಗೊಂಡಿದೆ. ಇಂತಹ ಮಹತ್ವದ ಸಂವಿಧಾನದ ಆಶಯಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳನ್ನು ಸಮಾಜ ಗಂಭೀರವಾಗಿ ಪರಿಗಣಿಸಬೇಕು ಎಂದರು.

ಬುದ್ಧ, ಬಸವಣ್ಣ ಮತ್ತು ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಸ್ಥಾಪಿಸುವುದರಿಂದ ಮಾತ್ರ ಅವರ ಆಶಯಗಳು ಸಾಕಾರಗೊಳ್ಳುವುದಿಲ್ಲ. ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾನತೆ ಮತ್ತು ಸ್ವಾಭಿಮಾನದ ಸಮಾಜ ನಿರ್ಮಾಣ ಸಾಧ್ಯ. ಮಹನೀಯರ ಹೆಸರಿನಲ್ಲಿ ವ್ಯಕ್ತಿಪೂಜೆ ನಡೆಸುವ ಬದಲು ಅವರ ವಿಚಾರಧಾರೆಗಳನ್ನು ಅಧ್ಯಯನ ಮಾಡಬೇಕು ಎಂದು ಯುವಜನರಿಗೆ ಕಿವಿಮಾತು ಹೇಳಿದರು.

ತಮಗೆ ಹಾರ, ಶಾಲು ಮತ್ತು ತುರಾಯಿಗಳನ್ನು ನೀಡುವ ಬದಲು ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದ ಅವರು, ಸಂಗ್ರಹವಾಗುವ ಪುಸ್ತಕಗಳನ್ನು ಅರಿವು ಕೇಂದ್ರಗಳಿಗೆ ನೀಡಲಾಗುತ್ತದೆ ಎಂದರು. ಯುವಜನರಲ್ಲಿ ಓದುವ ಹವ್ಯಾಸ, ವೈಜ್ಞಾನಿಕ ಮನೋಭಾವ ಮತ್ತು ಸಾಮಾಜಿಕ ಪ್ರಜ್ಞೆ ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಶಿಕ್ಷಣ ಪ್ರಮುಖ ಅಸ್ತ್ರವಾಗಿದೆ. ಶಿಕ್ಷಣ ಪಡೆದವರು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಅನ್ಯಾಯ ಕಂಡಾಗ ಮೌನವಾಗಿರದೆ ಅದರ ವಿರುದ್ಧ ಧ್ವನಿ ಎತ್ತಬೇಕು. ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುವ ಮಾಹಿತಿಯನ್ನೇ ಇತಿಹಾಸವೆಂದು ನಂಬದೆ, ಪುಸ್ತಕಗಳನ್ನು ಓದಿ ದಾಖಲೆ ಮತ್ತು ಅಂಕಿ-ಅಂಶಗಳ ಆಧಾರದಲ್ಲಿ ಮಾತನಾಡಬೇಕು ಎಂದು ಸಲಹೆ ನೀಡಿದರು.

ಅಂಬೇಡ್ಕರ್ ಅವರು ದೇಶದ ಆರ್ಥಿಕ, ಸಾಮಾಜಿಕ ಮತ್ತು ಕಾರ್ಮಿಕ ಕ್ಷೇತ್ರಗಳಿಗೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿದ ಸಚಿವರು, ರೂಪಾಯಿ ಸಮಸ್ಯೆ ಕುರಿತ ಅವರ ಅಧ್ಯಯನ, ಕಾರ್ಮಿಕರ ಹಕ್ಕುಗಳು, ಕನಿಷ್ಠ ವೇತನ, ಭವಿಷ್ಯ ನಿಧಿ ಹಾಗೂ ಮಹಿಳೆಯರ ಆಸ್ತಿ ಹಕ್ಕಿನ ವಿಚಾರದಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.

ದಲಿತರು ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವುದನ್ನು ಸಹಿಸದ ಮನಸ್ಥಿತಿಗಳು ಇಂದಿಗೂ ಸಮಾಜದಲ್ಲಿವೆ ಎಂದು ಆರೋಪಿಸಿದ ಅವರು, ತಮ್ಮ ಉಡುಗೆ-ತೊಡುಗೆ ಮತ್ತು ರಾಜಕೀಯ ನಿಲುವುಗಳ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದರು. ತಮ್ಮ ಸೂಟು-ಬೂಟಿನ ಬಗ್ಗೆ ಬಿಜೆಪಿಯವರಿಗೆ ಸಮಸ್ಯೆಯಿಲ್ಲ, ತಮ್ಮ ಧ್ವನಿ ಮತ್ತು ಹೋರಾಟವೇ ಅವರಿಗೆ ಸಮಸ್ಯೆಯಾಗಿದೆ ಎಂದು ವ್ಯಂಗ್ಯವಾಡಿದರು.

ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಚುನಾವಣೆಯಲ್ಲಿ ಸೋಲಿಸಿತು ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳ ಆಧಾರದಲ್ಲಿ ಸದನದಲ್ಲಿ ಉತ್ತರ ನೀಡಿರುವುದಾಗಿ ತಿಳಿಸಿದ ಅವರು, ಇತಿಹಾಸದ ವಿಚಾರಗಳನ್ನು ಚರ್ಚಿಸುವಾಗ ಊಹಾಪೋಹಗಳಿಗಿಂತ ಅಧಿಕೃತ ದಾಖಲೆಗಳಿಗೆ ಆದ್ಯತೆ ನೀಡಬೇಕು ಎಂದರು.

ದೇಶದ ವೈವಿಧ್ಯಮಯ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ, ಧರ್ಮ ಮತ್ತು ಭಾಷೆಗಳ ಭಿನ್ನತೆಯನ್ನು ಗೌರವಿಸುವ ಮನೋಭಾವ ಬೆಳೆಯಬೇಕು. ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಯುವಜನರು ಅರ್ಥಮಾಡಿಕೊಂಡು ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಹೊಸ ಪೊಲೀಸ್ ಠಾಣೆಗಳ ಅಗತ್ಯವಿರುವ ಸ್ಥಳಗಳನ್ನು ಪರಿಶೀಲಿಸಿ, ಅಗತ್ಯಕ್ಕೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಪೂರ್ಣಗೊಂಡು ಎರಡು ವರ್ಷಗಳಾಗಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರಿಂದಲೇ ಅನಾವರಣಗೊಳ್ಳಬೇಕು ಎಂಬ ಆಶಯದಿಂದ ಕಾಯಲಾಗಿತ್ತು ಎಂದು ತಿಳಿಸಿದರು.

ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಅಂಬೇಡ್ಕರ್ ಅವರ ಶಿಕ್ಷಣ ಪಡೆಯಿರಿ, ಸಂಘಟಿತರಾಗಿ, ಹೋರಾಡಿ ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಉರಿಲಿಂಗಪೆದ್ದಿ ಕೊಡ್ಲಾ ಮಠದ ಡಾ.ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಕೇವಲ ಪ್ರತಿಮೆಗಳಿಗೆ ಸೀಮಿತಗೊಳಿಸದೆ ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಕಾರ್ಯರೂಪಕ್ಕೆ ತರಬೇಕು ಎಂದು ಹೇಳಿದರು. ಪುಸ್ತಕಗಳಿಗೆ ಆದ್ಯತೆ ನೀಡುವ ಪ್ರಿಯಾಂಕ್ ಖರ್ಗೆ ಅವರ ನಡೆ ಜ್ಞಾನ ಮತ್ತು ವಿಚಾರಗಳಿಗೆ ನೀಡುವ ಗೌರವದ ಸಂಕೇತವಾಗಿದೆ ಎಂದರು.

ಹೋರಾಟಗಾರ ಮಾವಳ್ಳಿ ಶಂಕರ ಮಾತನಾಡಿ, ಗೌರಿ ಲಂಕೇಶ್, ಎಂ.ಎಂ. ಕಲಬುರ್ಗಿ ಹಾಗೂ ಗೋವಿಂದ ಪನ್ಸಾರೆ ಅವರಂತಹ ವಿಚಾರವಾದಿಗಳ ಹತ್ಯೆಗಳ ಹಿಂದಿನ ಮನಸ್ಥಿತಿಯನ್ನು ಸಮಾಜ ಅರ್ಥಮಾಡಿಕೊಳ್ಳಬೇಕು. ಯುವಜನರು ಹೊಸ ಭಾರತ ನಿರ್ಮಾಣಕ್ಕೆ ಜ್ಞಾನ ಮತ್ತು ವೈಚಾರಿಕತೆಯ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಜಾಗ ನೀಡಿದವರು ಸೇರಿದಂತೆ ವಿವಿಧ ರೀತಿಯಲ್ಲಿ ಸಹಕರಿಸಿದ 25 ಮಂದಿಯನ್ನು ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, ಕಾಡಾ ಅಧ್ಯಕ್ಷ ಬಾಬು ಹೊನ್ನಾ ನಾಯಕ, ಜಿಲ್ಲಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಸಹಾಯಕ ಆಯುಕ್ತ ಶ್ರೀಧರ ಗೋಟೂರ, ನಗರಸಭೆ ಅಧ್ಯಕ್ಷ ಬಾಬುರಾವ್ ಕಾಡ್ಲೂರ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಸ್ವಾಗತಿಸಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು