ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
81 ಲಕ್ಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು!ಡಿಸಿ ಪಿಎ ಚಾಟ್ ಪ್ರಕರಣದಲ್ಲಿ ಸತ್ಯಾ ಹೊರಬರಲಿ – ಎಚ್.ಡಿ. ಕುಮಾರಸ್ವಾಮಿನಿಖಿಲ್‌ಗೆ ದೇವಾಲಯ ಪ್ರವೇಶ ವಿಚಾರ – ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಜನ – ಎಚ್.ಡಿ. ಕುಮಾರಸ್ವಾಮಿಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮಧ್ಯಪ್ರವೇಶ ಮಾಡಲಿ – ಜಿ. ಪರಮೇಶ್ವರ್ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ: ನವೆಂಬರ್ 16ರ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆಅಮೆರಿಕದಲ್ಲಿ ಒಂದೇ ದಿನ ಸರಣಿ ಅವಘಡಗಳು: ವಿಮಾನ ಹಾರಾಟ ಸ್ಥಗಿತ, ಹಡಗು ಅಪಘಾತ, SpaceX ಬೂಸ್ಟರ್ ಸ್ಫೋಟ!ತಮಿಳುನಾಡಿನ ವಿರೋಧಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ, ಮೇಕೆದಾಟಿಗೆ ಅಣೆಕಟ್ಟು ಕಟ್ಟುವುದು ನಮ್ಮ ಹಕ್ಕು ಸಿ ಎಮ್‌ ಡಿ ಕೆ ಶಿವಕುಮಾರ್ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ಚುರುಕು: ಐವರು ಪ್ರಮುಖ ಸಾಕ್ಷಿಗಳ ವಿಚಾರಣೆಮಹದೇವ್ ಬೆಟ್ಟಿಂಗ್ ಆಯಪ್ ಜಾಲಕ್ಕೆ ಸಿಬಿಐ ಶಾಕ್; 6 ರಾಜ್ಯಗಳ 33 ಕಡೆ ದಾಳಿಆರ್‌ಎಸ್‌ಎಸ್‌ ನಂಟಿನ ಆರೋಪ: ನಿಗಮ ಮಂಡಳಿ ಹುದ್ದೆಗಳಿಗೆ ರಾಜೀನಾಮೆ ನೀಡಲು ಸೂಚನೆKPS ಶಾಲೆಗಳ ಬಲವರ್ಧನೆ – ಕರಡು ಪ್ರಕಟಿಸಿದ ರಾಜ್ಯ ಸರ್ಕಾರಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ವಿವಾದಾತ್ಮಕ ನಟಿ ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್ ದಾಖಲುಮಕ್ಕಳಿಗೆ ಹೆಚ್ಚಿದ ಓದಿನ ಒತ್ತಡ – 1 ರಿಂದ 9ನೇ ತರಗತಿವರೆಗೆ ಟ್ಯೂಷನ್‌ಗೆ ಬ್ರೇಕ್ಮೇಕೆದಾಟು ಯೋಜನೆಗೆ ವಿರೋಧ ರಾಜಕೀಯ ಪ್ರೇರಿತ: ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಪ್ರಧಾನಿ ಒಪ್ಪಿಗೆಪ್ರಧಾನಿ ಮೋದಿ ಭೇಟಿ ವೇಳೆ ಮಾಂಸದಂಗಡಿ ಬಂದ್ ಮಾಡುವ ಅವಶ್ಯಕತೆ ಏನಿತ್ತು – ನಿ. ನ್ಯಾ. ನಾಗಮೋಹನ್‌ನಾಳೆಯಿಂದ ತುಂಗಭದ್ರಾ ಕಾಲುವೆ ನಾಳೆಯಿಂದ ಬಂದ್ – ರೈತರಿಂದ ತೀವ್ರ ಆಕ್ರೋಶಇಡಿಯಿಂದ 580 ಪುಟಗಳ ಚಾರ್ಜ್‌ಶೀಟ್, ಕೆಪಿಎಸ್‌ಸಿ ಹಗರಣದಲ್ಲಿ 4 ಜನರ ಪಟ್ಟಿ ಬಿಡುಗಡೆಮಧುಮೇಹ ಪತ್ತೆಯಲ್ಲಿನ ವಿಳಂಬ ಆತಂಕಕಾರಿ; ಆರಂಭಿಕ ತಪಾಸಣೆಗೆ WHO ಕರೆವಿಶ್ವ ಬಾಕ್ಸ್ ಆಫೀಸ್‌ನಲ್ಲಿ ₹1,110 ಕೋಟಿ ಗಳಿಸಿದ ‘ರಾಮಾಯಣ’; ಯಶ್‌ಗೆ ಮತ್ತೊಂದು 1,000 ಕೋಟಿ ದಾಖಲೆ!ಋತುಬಂಧದ ಮಹಿಳೆಯರ ಆರೋಗ್ಯ ರಕ್ಷಣೆಗೆ ‘ಋತುತಾರೆ’ ಯೋಜನೆ ಜಾರಿ; ನಟಿ, ಮಾಜಿ ಸಂಸದೆ ರಮ್ಯಾ ರಾಯಭಾರಿ

ಇಡಿಯಿಂದ 580 ಪುಟಗಳ ಚಾರ್ಜ್‌ಶೀಟ್, ಕೆಪಿಎಸ್‌ಸಿ ಹಗರಣದಲ್ಲಿ 4 ಜನರ ಪಟ್ಟಿ ಬಿಡುಗಡೆ

ಇಡಿಯಿಂದ 580 ಪುಟಗಳ ಚಾರ್ಜ್‌ಶೀಟ್, ಕೆಪಿಎಸ್‌ಸಿ ಹಗರಣದಲ್ಲಿ 4 ಜನರ ಪಟ್ಟಿ ಬಿಡುಗಡೆ

ಇಡಿಯಿಂದ 580 ಪುಟಗಳ ಚಾರ್ಜ್‌ಶೀಟ್, ಕೆಪಿಎಸ್‌ಸಿ ಹಗರಣದಲ್ಲಿ 4 ಜನರ ಪಟ್ಟಿ ಬಿಡುಗಡೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿಯಲ್ಲಿ ಜಾರಿ ನಿರ್ದೇಶನಾಲಯವು (ED) ತನಿಖೆಯನ್ನು ತೀವ್ರಗೊಳಿಸಿದೆ. ಇದರ ಭಾಗವಾಗಿ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಸೇರಿದಂತೆ ಒಟ್ಟು ನಾಲ್ವರು ಪ್ರಮುಖ ಆರೋಪಿಗಳ ವಿರುದ್ಧ ಇ.ಡಿ ವಿಶೇಷ ನ್ಯಾಯಾಲಯಕ್ಕೆ 580ಕ್ಕೂ ಅಧಿಕ ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ.

ಈ ಪ್ರಕರಣದಲ್ಲಿ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಮಾಜಿ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ , ಕೆಪಿಎಸ್‌ಸಿ ಸದಸ್ಯೆ ಬಿ.ವಿ.ಗೀತಾ ಹಾಗೂ ಮಧ್ಯವರ್ತಿ ಬಸವರಾಜ ಕನ್ನಾಳೆ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ದೋಷಾರೋಪ ಪಟ್ಟಿಯಲ್ಲಿನ ಪ್ರಮುಖಾಂಶಗಳ ವಿವರ:
* ಈ ಚಾರ್ಜ್‌ಶೀಟ್‌ನಲ್ಲಿ 50ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳು ಹಾಗೂ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ.
* ಮಧ್ಯವರ್ತಿ ಬಸವರಾಜ ಕನ್ನಾಳೆ ಹಾಗೂ ಆತನ ಸಹಚರರು ಪರೀಕ್ಷೆ ಹಿಂದಿನ ದಿನವೇ ಅಭ್ಯರ್ಥಿಗಳಿಗೆ ಉತ್ತರ ಸಹಿತ ಪ್ರಶ್ನೆಪತ್ರಿಕೆ ನೀಡಿ, ಉತ್ತರಗಳನ್ನು ಕಂಠಪಾಠ ಮಾಡಿಸಿದ್ದರು. ದೇವನಹಳ್ಳಿ ಸಮೀಪದ ರಿಸಾರ್ಟ್‌ನ ಸಿಬ್ಬಂದಿ ಈ ಕುರಿತು ಹೇಳಿಕೆ ನೀಡಿದ್ದಾರೆ.
* ಅಭ್ಯರ್ಥಿಗಳಿಂದ ಲಂಚದ ಹಣದ ವರ್ಗಾವಣೆ ಮಾಡಿಸಿಕೊಂಡಿದ್ದ ಬೀದರ್‌ನ ಸಹಕಾರಿ ಬ್ಯಾಂಕಿನ ಸಿಬ್ಬಂದಿ ಹೇಳಿಕೆಗಳು ಹಾಗೂ ಆರೋಪಿಗಳಿಗೆ ಲಂಚದ ಹಣ ನೀಡಿದ್ದ ಅಭ್ಯರ್ಥಿಗಳು ಮತ್ತು ಅವರ ಪೋಷಕರ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.
* ಲಂಚದ ಹಣವನ್ನು ಬಳಸಿ ಆರೋಪಿ ಜ್ಞಾನೇಂದ್ರ ಕುಮಾರ್ , ಅವರು ತಮ್ಮ ಸ್ನೇಹಿತೆಗಾಗಿ ಸುಮಾರು 52 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ಸಿಬ್ಬಂದಿ ಹಾಗೂ ಆಭರಣ ಮಳಿಗೆಯ ಸಿಬ್ಬಂದಿ ಹೇಳಿಕೆಗಳನ್ನು ಸೇರಿಸಲಾಗಿದೆ.
*  ತಮ್ಮ ಸ್ನೇಹಿತೆಯೊಂದಿಗೆ ಚಿನ್ನಾಭರಣ ಅಂಗಡಿಗೆ ತೆರಳಿದ್ದ ಸಿಸಿಟಿವಿ ದಶ್ಯಾವಳಿಗಳು ಮತ್ತು ಫೋಟೋಗಳನ್ನು ಲಭ್ಯಪಡಿಸಲಾಗಿದೆ.
* ನಾಲ್ವರು ಆರೋಪಿಗಳ ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರ ಹಾಗೂ ಚರಾಸ್ತಿಗಳ ವಿವರಗಳನ್ನು ದೋಷಾರೋಪ ಪಟ್ಟಿಯಲ್ಲಿ ಅಧಿಕೃತವಾಗಿ ಅಡಕಗೊಳಿಸಲಾಗಿದೆ ಎಂದು ಇ.ಡಿ ಮೂಲಗಳು ತಿಳಿಸಿವೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು