ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಬೇಲೂರಿನಲ್ಲಿ ಮತ್ತೊಂದು ಕಾಡಾನೆ ದಾಳಿ – 2 ದಿನಗಳಲ್ಲಿ ಇಬ್ಬರ ದುರ್ಮರಣಬೇಲೂರು 56 ಕಾಡಾನೆಗಳನ್ನು ತಿಂಗಳೊಳಗೆ ಸ್ಥಳಾಂತರ – ಸಚಿವ ಕೆ. ಎಂ. ಶಿವಲಿಂಗೇಗೌಡ ಭರವಸೆಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್‌ಗೆ ಅವಕಾಶ: ಬಿಜೆಪಿ ನಾಯಕರ ಮನವೊಲಿಕೆಗೆ ಕುಮಾರಸ್ವಾಮಿ ಯತ್ನಬೆಂಗಳೂರಿನಿಂದ ಮಧುರೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ; ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತಲೋಕ ಸುತ್ತಾಟ : ಪ್ರಕೃತಿ ವಿಸ್ಮಯದ ಪ್ರವಾಸಿ ತಾಣ : ವಿಯೆಟ್ನಾಂ ಬಾ ನಾ ಹಿಲ್ಸ್‌“ಇದು ಯಾರಪ್ಪನ ಭಾರತವಲ್ಲ” – ಹಾಡುಗಳಲ್ಲಿ ರಾಹತ್ ಇಂದೂರಿ ಸಾಲುಗಳ ನಿರ್ಬಂಧಕ್ಕೆ ಸ್ಥಳೀಯ ಆಡಳಿತಕ್ಕೆ ದಿಲ್ಜಿತ್ ದೋಸಾಂಜ್ ತಿರುಗೇಟು!ಫುಕೆಟ್‌ನಲ್ಲಿ ಭೀಕರ ಅಗ್ನಿ ದುರಂತ: 11 ಮಂದಿ ಸಾವು, 16 ಜನರಿಗೆ ಗಾಯಕಸ್ತೂರಿರಂಗನ್ ವರದಿ: ಅರಣ್ಯ ಗಡಿ ಗೊಂದಲಕ್ಕೆ ಶಾಶ್ವತ ಪರಿಹಾರ, ಒಂದು ವರ್ಷದೊಳಗೆ ಜಂಟಿ ಭೌತಿಕ ಸಮೀಕ್ಷೆ : ಸಚಿವ ರಾಮಲಿಂಗಾರೆಡ್ಡಿಡಿಸೆಂಬರ್ ಮೊದಲ ವಾರದಲ್ಲಿ ಚಳಿಗಾಲದ ಅಧಿವೇಶನ: ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆಗೆ ಕೇಂದ್ರದ ಸಿದ್ಧತೆಐಸಿಸಿ ಅಧ್ಯಕ್ಷರಾಗಿ ಅಮಿತ್ ಷಾ ಪುತ್ರ ಜಯ್ ಶಾ ಎರಡನೇ ಅವಧಿಗೆ ಅವಿರೋಧ ಆಯ್ಕೆಎನ್‌ವಿಡಿಯಾದಲ್ಲಿ ನಾಯಕತ್ವದ ಪಲ್ಲಟಕ್ಕೆ ಸಿದ್ಧತೆ; ಜೆನ್ಸನ್ ಹುವಾಂಗ್ ಮರುಪ್ರವೇಶಕ್ಕೆ ಮಸ್ಕ್ ಬೆಂಬಲಅಡಿಕೆ, ತೆಂಗಿನ ತೋಟಗಳ ರಕ್ಷಣೆಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆಹಿರಿಯೂರು ಉಪಚುನಾವಣೆ ಕಣಕ್ಕೆ ಪೂರ್ಣಿಮಾ ಶ್ರೀನಿವಾಸ್ ಆಸಕ್ತಿ; ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಕೆನವೆಂಬರ್ 16ರ ಸಹಿಷ್ಣುತೆ ದಿನ ಆಚರಿಸುವ ನೈತಿಕ ಅರ್ಹತೆ ಜಗತ್ತಿಗಿದೆಯೇ?ಬಹ್ರೇನ್‌ನ ಅಮೆರಿಕ ಸೇನಾ ನೆಲೆಗೆ ಇರಾನ್‌ನಿಂದ ಡ್ರೋನ್ ದಾಳಿ ಯತ್ನಬ್ರಿಟನ್ ಪೌರತ್ವ ಪಡೆದ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ; 2010ರಿಂದ ಭಾರತದಿಂದ ಹೊರಗೆ ವಾಸ, ದೇಶ ತೊರೆದವರ ಪಟ್ಟಿಗೆ ಮತ್ತೊಂದು ಸೇರ್ಪಡೆಪಶ್ಚಿಮ ಬಂಗಾಳ: ಪೊಲೀಸರ ಗುಂಡಿನ ದಾಳಿಗೆ ಆರೋಪಿ ಸಾವು; ಆರು ತಿಂಗಳಲ್ಲಿ ಐದನೇ ಎನ್‌ಕೌಂಟರ್ಉತ್ತರ ಪ್ರದೇಶ: ಡಿಜೆ ಸದ್ದಿಗೆ 20 ದಿನದ ಮಗು ಸಾವು; ಕುಟುಂಬದ ದೂರಿನ ಮೇರೆಗೆ ಡಿಜೆ ಉಪಕರಣ ವಶಕ್ಕೆಅಧಿಕಾರ ಸಿಗದ ಸಿಗದ ಹತಾಶೆಯಲ್ಲಿ ಕಾಂಗ್ರೆಸ್‌ ತನ್ನ ಕಾರ್ಯಕ್ರಮಗಳಿಗೆ ವಿದೇಶಿ ಎಡಪಂಥೀಯರನ್ನು ಆಹ್ವಾನಿಸುತ್ತಿದೆ: ಅಮಿತ್‌ ಶಾ ಆರೋಪದೆಹಲಿ ವಾಯುಮಾಲಿನ್ಯ: ಕೇಂದ್ರ ಸಚಿವ ಭೂಪೇಂದ್ರ ಯಾದವ್ ಕಚೇರಿಗೆ ತೆರಳಲು ಎಐಎಸ್ಎ ಅಧ್ಯಕ್ಷೆ ನೇಹಾ ಬೋರಾ ನಿರ್ಧಾರ

ಬೆಂಗಳೂರಿನಿಂದ ಮಧುರೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ; ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಬೆಂಗಳೂರಿನಿಂದ ಮಧುರೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ; ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧುರೈಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಟೇಕ್‌ಆಫ್‌ಗೆ ಕೆಲವೇ ಕ್ಷಣಗಳ ಮೊದಲು ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ತಕ್ಷಣ ಕೈಗೊಂಡ ನಿರ್ಧಾರದಿಂದ ಸಂಭವನೀಯ ಅಪಾಯ ತಪ್ಪಿದೆ. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಸೋಮವಾರ ಬೆಳಿಗ್ಗೆ 7.20ಕ್ಕೆ ಬೆಂಗಳೂರಿನಿಂದ ಮಧುರೈಗೆ ಪ್ರಯಾಣಿಸಬೇಕಿದ್ದ ಇಂಡಿಗೋ ಸಂಸ್ಥೆಯ 6E 6526 ವಿಮಾನವು ಹಾರಾಟಕ್ಕೆ ಅನುಮತಿ ಪಡೆದ ಬಳಿಕ ರನ್‌ವೇಯಲ್ಲಿ ವೇಗ ಪಡೆದುಕೊಳ್ಳುತ್ತಿತ್ತು. ಈ ಸಂದರ್ಭದಲ್ಲಿ ವಿಮಾನದ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ದೋಷ ಕಾಣಿಸಿಕೊಂಡಿರುವ ಎಚ್ಚರಿಕೆ ಕಾಕ್‌ಪಿಟ್‌ನಲ್ಲಿ ಮೂಡಿದೆ. ತಕ್ಷಣ ಪರಿಸ್ಥಿತಿಯನ್ನು ಅರಿತ ಕ್ಯಾಪ್ಟನ್ ಗೌತಮ್ ಹಾಗೂ ಸಹ-ಪೈಲಟ್ ತುರ್ತು ಬ್ರೇಕ್ ಪ್ರಯೋಗಿಸಿ ವಿಮಾನದ ಟೇಕ್‌ಆಫ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದಾರೆ.

ವೇಗವಾಗಿ ಚಲಿಸುತ್ತಿದ್ದ ವಿಮಾನ ಏಕಾಏಕಿ ನಿಂತ ಪರಿಣಾಮ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಕೂಡಲೇ ಕ್ಯಾಬಿನ್ ಸಿಬ್ಬಂದಿ ‘ಹೆಡ್ಸ್ ಡೌನ್’ ಎಂದು ಸೂಚನೆ ನೀಡಿ ಪ್ರಯಾಣಿಕರಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದರು. ಬಳಿಕ ತಾಂತ್ರಿಕ ಸಮಸ್ಯೆಯಿಂದ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂಬ ಮಾಹಿತಿ ನೀಡಿದ ನಂತರ ಪರಿಸ್ಥಿತಿ ತಿಳಿಗೊಂಡಿತು.

ವಿಮಾನವನ್ನು ರನ್‌ವೇಯಲ್ಲಿ ಸುಮಾರು 30 ನಿಮಿಷಗಳ ಕಾಲ ಸುರಕ್ಷತಾ ಪರಿಶೀಲನೆಗೆ ಒಳಪಡಿಸಲಾಯಿತು. ನಂತರ ಪ್ರಯಾಣಿಕರನ್ನು ಕೆಳಗಿಳಿಸಿ ಟರ್ಮಿನಲ್‌ಗೆ ಕರೆದೊಯ್ಯಲಾಯಿತು. ಪ್ರಯಾಣಿಕರ ಅನುಕೂಲಕ್ಕಾಗಿ ಇಂಡಿಗೋ ಸಂಸ್ಥೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿದ್ದು, ಬೆಳಿಗ್ಗೆ 9.20ಕ್ಕೆ ಮಧುರೈಗೆ ಪ್ರಯಾಣ ಮುಂದುವರಿಸಲಾಗಿದೆ ಎಂದು ವರದಿಯಾಗಿದೆ.

ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಉದ್ಯಮಿ ಹಾಗೂ ಭಾರತೀಯ ವಾಯುಸೇನೆಯ ಮಾಜಿ ಪೈಲಟ್ ಎಂ. ಬಾಲಸುಬ್ರಮಣಿಯಂ ಅವರು ಪೈಲಟ್‌ಗಳ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. ಟೇಕ್‌ಆಫ್‌ಗೆ ಕೆಲವೇ ಕ್ಷಣಗಳ ಮೊದಲು ತಾಂತ್ರಿಕ ದೋಷದ ಸೂಚನೆ ದೊರೆತಾಗ ತಕ್ಷಣ ಬ್ರೇಕ್ ಹಾಕುವ ಮೂಲಕ ಕ್ಯಾಪ್ಟನ್ ಸಂಭವನೀಯ ಅನಾಹುತವನ್ನು ತಪ್ಪಿಸಿದ್ದಾರೆ. ಕ್ಯಾಬಿನ್ ಸಿಬ್ಬಂದಿಯೂ ಆತಂಕದ ಪರಿಸ್ಥಿತಿಯನ್ನು ವೃತ್ತಿಪರವಾಗಿ ನಿರ್ವಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆದರೆ, ವಿಮಾನಗಳ ತಾಂತ್ರಿಕ ನಿರ್ವಹಣೆ ಮತ್ತು ಸುರಕ್ಷತಾ ಪರಿಶೀಲನೆಗಳ ಕುರಿತು ಅವರು ಕಳವಳ ವ್ಯಕ್ತಪಡಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಇಂಡಿಗೋ ಆಡಳಿತ ಮಂಡಳಿ ಹಾಗೂ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಸಮಗ್ರ ತನಿಖೆ ನಡೆಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ಇಂಡಿಗೋ ವಿಮಾನಗಳಲ್ಲಿ ಸತತ ತಾಂತ್ರಿಕ ಸಮಸ್ಯೆ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಇದು ಸತತ ಎರಡನೇ ದಿನದ ಘಟನೆಯಾಗಿದೆ. ಭಾನುವಾರ 192 ಪ್ರಯಾಣಿಕರನ್ನು ಹೊತ್ತು ಪುಣೆಯಿಂದ ಅಸ್ಸಾಂನ ಗುವಾಹಟಿಗೆ ತೆರಳುತ್ತಿದ್ದ 6E 0623 ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಪುಣೆಗೆ ವಾಪಸ್ ಕರೆತಂದು ತುರ್ತು ಭೂಸ್ಪರ್ಶ ಮಾಡಲಾಗಿತ್ತು.

ಒಂದೇ ಸಂಸ್ಥೆಯ ವಿಮಾನಗಳಲ್ಲಿ ಎರಡು ದಿನಗಳ ಅಂತರದಲ್ಲಿ ವಿಭಿನ್ನ ತಾಂತ್ರಿಕ ಸಮಸ್ಯೆಗಳು ವರದಿಯಾಗಿರುವುದು ವಿಮಾನಯಾನ ಸುರಕ್ಷತೆಯ ಬಗ್ಗೆ ಚರ್ಚೆಗೆ ಕಾರಣವಾಗಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಇಂತಹ ಘಟನೆಗಳ ಕುರಿತು ಸೂಕ್ತ ಪರಿಶೀಲನೆ ನಡೆಸಿ, ತಾಂತ್ರಿಕ ನಿರ್ವಹಣಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಬೇಕೆಂಬ ಒತ್ತಾಯ ವ್ಯಕ್ತವಾಗಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು