ಬೇಲೂರಿನಲ್ಲಿ ಮತ್ತೊಂದು ಕಾಡಾನೆ ದಾಳಿ – 2 ದಿನಗಳಲ್ಲಿ ಇಬ್ಬರ ದುರ್ಮರಣ
ಲಿಂಕ್ ನಕಲಿಸಲಾಗಿದೆ ✓
ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿರುವ ಘಟನೆ ಬೇಲೂರು ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗೇನಹಳ್ಳಿ ಗ್ರಾಮದ ಐಬಿಸಿ ಎಸ್ಟೇಟ್ನಲ್ಲಿ ಅತ್ಬಾಬು (55) ಮೃತಪಟ್ಟ ವ್ಯಕ್ತಿ. ಇವರು ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದೆ. ಈ ವೇಳೆ ಆನೆ ಕಾಲಿನಿಂದ ತುಳಿದ ಪರಿಣಾಮ ಅತ್ಬಾಬು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯ ಬಳಿಕ ಮೃತದೇಹವನ್ನು ಬೇಲೂರು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿಯಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ರ
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ