ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಭದ್ರಾ ಅರಣ್ಯಕ್ಕೆ 56 ಕಾಡಾನೆಗಳ ಸ್ಥಳಾಂತರಕ್ಕೆ ವಿರೋಧ: ಪ್ರಸ್ತಾವನೆ ಕೈಬಿಡುವಂತೆ ಅರಣ್ಯ ಸಚಿವರಿಗೆ ಶಾಸಕ ರಾಜೇಗೌಡ ಮನವಿಹಾಸನದ ಬೇಲೂರಿನಲ್ಲಿ ಕಾಡಾನೆ ಸೆರೆ – ಸ್ಥಳಾಂತರ ಕಾರ್ಯಾಚರಣೆಗೆ ಚಾಲನೆಅನುದಿನದ ಅಂತರಂಗ: ತುಳಿದಷ್ಟೂ ಬೆಳೆಯುತ್ತೇನೆ ತಿಳಿದಿರಲಿ ನಿಮಗೆಬೊಗಸೆಗೆ ದಕ್ಕಿದ್ದು-101 : ಮೇಲ್ವರ್ಗದ ರಕ್ಷಣೆ, ಕೆಳವರ್ಗದ ಗುಲಾಮಿಯೇ ಸರ್ವಾಧಿಕಾರದ ಗುರಿ!SIR ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ಸುಪ್ರೀಂ ಕೋರ್ಟ್ ಅಂಗಳಕ್ಕೆ!ಹಾಸನದಲ್ಲಿ ಕಾಡಾನೆ ಕಾರ್ಯಾಚರಣೆಗೆ ಸಿದ್ಧತೆ: 300ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆಕೇಂದ್ರದ ವಿರುದ್ಧ ಸುಪ್ರೀಂ ದೂರು – ರಾಜ್ಯ ಬರಬೇಕಾದ 2186 ಕೋಟಿ ರೂ. ಬಾಕಿಕೋಲಾರ : ಆಟೋಗೆ ಸ್ಕೊಡಾ ಕಾರಿನ ನಡುವೆ ಬೀಕರ ಅಪಘಾತ – ಇಬ್ಬರು ದುರ್ಮರಣಎಂಎಸ್ ಧೋನಿ ಐಪಿಎಲ್ ನಿವೃತ್ತಿ: 2027ರಿಂದ CSK ಮೆಂಟರ್ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ – ಮಧು ಬಂಗಾರಪ್ಪಸಾತನೂರು: ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆ; ಬೋನಿಗೆ.ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯಗೆ ಐದನೇ ಸಾಲಿನ ಆಸನ! ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ತಲೆ ಮೇಲೆ ತಾನೇ ಕಲ್ಲು ಎಳೆದುಕೊಂಡಿದೆ ಎಂಬ ಚರ್ಚೆಧರ್ಮಸ್ಥಳದ ಪ್ರತಿಭಟನೆಗೆ ಪ್ರಚಾರ, ಸೌಜನ್ಯಳ ನ್ಯಾಯದ ಪ್ರಶ್ನೆಗಳಿಗೆ ಇಲ್ಲ ಉಪಚಾರ!ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್ನಮ್ಮ ಕುಟುಂಬದ ಬಗ್ಗೆ ಹರಡಿರುವ ಬಹುತೇಕ ಕಥೆಗಳು ಸತ್ಯಕ್ಕೆ ದೂರ: ಆತ್ಮಕಥೆ ಬರೆಯಲು ಕಾರಣ ತಿಳಿಸಿದ ಸೋನಿಯಾ ಗಾಂಧಿಸ್ಥಳೀಯ ಸಂಸ್ಥೆಗಳ ಚುನಾವಣಾ ಮೀಸಲಾತಿ ಹಂಚಿಕೆ ಹಕ್ಕು ಸರ್ಕಾರದ್ದು, ಜನರದ್ದಲ್ಲ: ಸುಪ್ರೀಂಕೋರ್ಟ್ಮತದಾರರ ಪಟ್ಟಿಯಿಂದ ಹೆಸರು ತೆಗೆದರೆ ದೇಶದಿಂದಲೇ ಗಡಿಪಾರು ಭೀತಿ: ಮುಸ್ಲಿಂ ಕುಟುಂಬಗಳಲ್ಲಿ ಹೆಚ್ಚಿದ ಪೌರತ್ವ ಕಳೆದುಕೊಳ್ಳುವ ಆತಂಕಶಿವಮೊಗ್ಗ ವಿಮಾನ ನಿಲ್ದಾಣ: ಮಲೆನಾಡಿಗೆ ಕಿರೀಟವಾಗಬೇಕಿದ್ದದ್ದು, “ಕಪ್ಪುಚುಕ್ಕೆ” ಆದ ಬಗೆತಿಂಗಳಿಗೆ ₹15 ಸಾವಿರ ಸಂಬಳ ಪಡೆಯುವ ಯುವಕನ ಹೆಸರಿನಲ್ಲಿ ₹350 ಕೋಟಿ ಜಿಎಸ್‌ಟಿ ವಹಿವಾಟು!ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಅಮಾನತುಗೊಂಡ ಅಧ್ಯಕ್ಷರಿಂದ ₹4.17 ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ

ಹಾಸನದ ಬೇಲೂರಿನಲ್ಲಿ ಕಾಡಾನೆ ಸೆರೆ – ಸ್ಥಳಾಂತರ ಕಾರ್ಯಾಚರಣೆಗೆ ಚಾಲನೆ

ಹಾಸನದ ಬೇಲೂರಿನಲ್ಲಿ ಕಾಡಾನೆ ಸೆರೆ – ಸ್ಥಳಾಂತರ ಕಾರ್ಯಾಚರಣೆಗೆ ಚಾಲನೆ

ಹಾಸನ: ಜಿಲ್ಲೆಯಲ್ಲಿ ತೀವ್ರಗೊಂಡಿರುವ ಮಾನವ–ಕಾಡಾನೆ ಸಂಘರ್ಷಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾಡಾನೆಗಳನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ. 50ಕ್ಕೂ ಹೆಚ್ಚು ಕಾಡಾನೆಗಳ ಚಲನವಲನ ಪತ್ತೆ; 6 ತಂಡಗಳ ರಚನೆ, 300ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ, ಬೇಲೂರು ತಾಲ್ಲೂಕಿನ ಬಿಕ್ಕೋಡು ಸಾಕಾನೆ ಶಿಬಿರದಲ್ಲಿ ಸಹಾಯಕ ಪ್ರಧಾನ ವನ್ಯಜೀವಿ ಸಂರಕ್ಷಣಾಧಿಕಾರಿ ಮನೋಜ್ ರಾಜನ್ ಅವರು ಸಾಕಾನೆಗಳಿಗೆ ಪೂಜೆ ಸಲ್ಲಿಸಿ, ಈಡುಗಾಯಿ ಒಡೆಯುವ ಮೂಲಕ ಕಾರ್ಯಾಚರಣೆಗೆ ಚಾಲನೆ ನೀಡಿದರು. ಕ್ಯಾಪ್ಟನ್ ಪ್ರಶಾಂತ್ ನೇತೃತ್ವದಲ್ಲಿ ಏಕಲವ್ಯ, ರೋಹಿತ್, ಅಯ್ಯಪ್ಪ, ಶ್ರೀಕಂಠ, ಮಾಣಿಕ್ಯ ಸೇರಿದಂತೆ ಏಳು ಸಾಕಾನೆಗಳೊಂದಿಗೆ ಕಾರ್ಯಾಚರಣೆ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಏಳರಿಂದ ಎಂಟು ಸಾಕಾನೆಗಳು ಕಾರ್ಯಾಚರಣೆಗೆ ಸೇರ್ಪಡೆಯಾಗಲಿವೆ. ಬಿಕ್ಕೋಡಿನ ತಾತ್ಕಾಲಿಕ ಶಿಬಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ಮನೋಜ್ ರಾಜನ್, ಇದು ಅತ್ಯಂತ ಕ್ಲಿಷ್ಟಕರ ಕಾರ್ಯಾಚರಣೆಯಾಗಿದ್ದು, ವೈಜ್ಞಾನಿಕವಾಗಿ ಹಾಗೂ ಎಚ್ಚರಿಕೆಯಿಂದ ನಡೆಸಬೇಕಿದೆ ಎಂದು ತಿಳಿಸಿದರು.

ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಈ ಭಾಗದಲ್ಲಿ ಆರು ಗುಂಪುಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಕಾಡಾನೆಗಳಿವೆ. ರೇಡಿಯೋ ಕಾಲರ್ ಅಳವಡಿಸಿರುವ ಆನೆಗಳು ಹಾಗೂ ಅವುಗಳ ಸಂಚಾರದ ಮಾರ್ಗಗಳನ್ನು ಗುರುತಿಸಲಾಗಿದೆ. ಆನೆಗಳ ಚಲನವಲನ ಮತ್ತು ವರ್ತನೆಯನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡು ಅವುಗಳನ್ನು ಸಹಜವಾಗಿ ಬೇರೆಡೆಗೆ ಸ್ಥಳಾಂತರಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಈಗಾಗಲೇ ಚಿಕ್ಕಮಗಳೂರು ಹಾಗೂ ಹಾಸನ ಡಿಸಿಎಫ್‌ಗಳ ನೇತೃತ್ವದಲ್ಲಿ ಜಂಟಿ ಸಭೆ ನಡೆಸಲಾಗಿದೆ. ಪೊಲೀಸ್, ಕಂದಾಯ, ವಿದ್ಯುತ್, ಆರೋಗ್ಯ, ಆರ್‌ಡಿಪಿಆರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಇಲಾಖೆಗಳ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಯಲಿದೆ. ಒಬ್ಬ ಡಿವೈಎಸ್‌ಪಿ ಮತ್ತು ಒಬ್ಬ ಸಹಾಯಕ ಆಯುಕ್ತರನ್ನು ಒಳಗೊಂಡ ತಂಡವನ್ನೂ ರಚಿಸಲಾಗಿದೆ.

ಕಾರ್ಯಾಚರಣೆಗಾಗಿ ಆರು ತಂಡಗಳನ್ನು ರಚಿಸಲಾಗಿದ್ದು, ಎಸಿಎಫ್ ಮತ್ತು ಆರ್‌ಎಫ್‌ಒಗಳು ತಂಡಗಳ ನೇತೃತ್ವ ವಹಿಸಲಿದ್ದಾರೆ. ಪ್ರತಿ ತಂಡದಲ್ಲೂ ಥರ್ಮಲ್ ಡ್ರೋನ್, ಪಶುವೈದ್ಯಾಧಿಕಾರಿಗಳು ಹಾಗೂ ಕುಮ್ಕಿ ಆನೆಗಳು ಇರಲಿವೆ. ಸುಮಾರು 300ರಿಂದ 350 ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಜನರಿಗೆ ಮುನ್ನೆಚ್ಚರಿಕೆ ಮಾಹಿತಿ

ಆನೆಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಅವುಗಳ ಸಂಚಾರದ ಬಗ್ಗೆ ಗ್ರಾಮಸ್ಥರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುವುದು. ಆನೆಗಳು ಚದುರಿದರೆ ಮತ್ತಷ್ಟು ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಕಾರ್ಯಾಚರಣೆಯನ್ನು ಸಮನ್ವಯದಿಂದ ನಡೆಸಲಾಗುತ್ತದೆ. ಈ ರೀತಿಯ ದೊಡ್ಡ ಕಾರ್ಯಾಚರಣೆ ಈ ಹಿಂದೆ ನಡೆದಿಲ್ಲ. ಹೀಗಾಗಿ ಮಾಧ್ಯಮಗಳು ಕೂಡ ಜನರಿಗೆ ಸೂಕ್ತ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನೋಜ್ ರಾಜನ್ ಮನವಿ ಮಾಡಿದರು. ಈಗಾಗಲೇ ಇಬ್ಬರ ಪ್ರಾಣ ಬಲಿ ಪಡೆದಿರುವ ಕಾಡಾನೆಗಳನ್ನು ಸೆರೆಹಿಡಿಯಲು ಮೊದಲ ಆದ್ಯತೆ ನೀಡಲಾಗಿದ್ದು, ಮತ್ತೊಂದು ಜೀವಹಾನಿ ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಕಾರ್ಯಾಚರಣೆ ರೂಪಿಸಲಾಗಿದೆ ಎಂದು ತಿಳಿಸಿದರು.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು