ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಇನ್ಶೂರೆನ್ಸ್ ಇಲ್ಲದೆ ಟೋಲ್‌ ದಾಟುವ ವಾಹನಗಳಿಗೆ ಎಸ್‌ಎಮ್‌ಎಸ್‌ ಅಲರ್ಟ್:‌ ಪ್ರಾಯೋಗಿಕ ಯೋಜನೆ ಆರಂಭಿಸಿದ ಎನ್‌ಎಚ್‌ಎಐಎಸ್‌ಐಆರ್‌ ಕುರಿತು ಏಕಮತದ ತೀರ್ಮಾನ ಕೈಗೊಂಡಿರುವುದಕ್ಕೆ ಇಸಿಐ ದಾಖಲೆಗಳನ್ನು ಸಲ್ಲಿಸಿಲ್ಲ: ಸುಪ್ರೀಂಕೋರ್ಟಿನಲ್ಲಿ ವಾದ ಸಲ್ಲಿಸಿದ ಅರ್ಜಿದಾರರುಬೇಡಿಕೆ ಈಡೇರಿಸುವ ತನಕ ನಾವು ಇಲ್ಲಿಂದ ಹೋಗುವುದಿಲ್ಲ: ಆರೋಗ್ಯ ಸಚಿವರ ಮನವಿಯನ್ನು ತಿರಸ್ಕರಿಸಿದ ಆಶಾ ಕಾರ್ಯಕರ್ತೆಯರುದಕ್ಷಿಣ ಕನ್ನಡ | ಕೋಲ್ಡ್‌ ಪ್ರೆಸ್ಡ್‌ ಹೆಸರಿನಲ್ಲಿ ಕಚ್ಚಾ ಎಣ್ಣೆ ಮಾರಾಟ: 1,240 ಕೆ.ಜಿ. ಅಡುಗೆ ಎಣ್ಣೆ ವಶಕ್ಕೆ ಪಡೆದ ಆಹಾರ ಸುರಕ್ಷತಾ ಇಲಾಖೆಹೋಟೆಲ್‌ ಕೋಣೆಯಲ್ಲಿ ಗಾಂಜಾ ಇಟ್ಟು ಸುಳ್ಳು ಪ್ರಕರಣ ದಾಖಲಿಸಲು ಸಂಚು, ವಿಡಿಯೊ ವೈರಲ್‌; ಠಾಣಾಧಿಕಾರಿ ವರ್ಗಾವಣೆಭದ್ರಾ ಅರಣ್ಯಕ್ಕೆ 56 ಕಾಡಾನೆಗಳ ಸ್ಥಳಾಂತರಕ್ಕೆ ವಿರೋಧ: ಪ್ರಸ್ತಾವನೆ ಕೈಬಿಡುವಂತೆ ಅರಣ್ಯ ಸಚಿವರಿಗೆ ಶಾಸಕ ರಾಜೇಗೌಡ ಮನವಿಹಾಸನದ ಬೇಲೂರಿನಲ್ಲಿ ಕಾಡಾನೆ ಸೆರೆ – ಸ್ಥಳಾಂತರ ಕಾರ್ಯಾಚರಣೆಗೆ ಚಾಲನೆಅನುದಿನದ ಅಂತರಂಗ: ತುಳಿದಷ್ಟೂ ಬೆಳೆಯುತ್ತೇನೆ ತಿಳಿದಿರಲಿ ನಿಮಗೆಬೊಗಸೆಗೆ ದಕ್ಕಿದ್ದು-101 : ಮೇಲ್ವರ್ಗದ ರಕ್ಷಣೆ, ಕೆಳವರ್ಗದ ಗುಲಾಮಿಯೇ ಸರ್ವಾಧಿಕಾರದ ಗುರಿ!SIR ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ಸುಪ್ರೀಂ ಕೋರ್ಟ್ ಅಂಗಳಕ್ಕೆ!ಹಾಸನದಲ್ಲಿ ಕಾಡಾನೆ ಕಾರ್ಯಾಚರಣೆಗೆ ಸಿದ್ಧತೆ: 300ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆಕೇಂದ್ರದ ವಿರುದ್ಧ ಸುಪ್ರೀಂ ದೂರು – ರಾಜ್ಯ ಬರಬೇಕಾದ 2186 ಕೋಟಿ ರೂ. ಬಾಕಿಕೋಲಾರ : ಆಟೋಗೆ ಸ್ಕೊಡಾ ಕಾರಿನ ನಡುವೆ ಬೀಕರ ಅಪಘಾತ – ಇಬ್ಬರು ದುರ್ಮರಣಎಂಎಸ್ ಧೋನಿ ಐಪಿಎಲ್ ನಿವೃತ್ತಿ: 2027ರಿಂದ CSK ಮೆಂಟರ್ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ – ಮಧು ಬಂಗಾರಪ್ಪಸಾತನೂರು: ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆ; ಬೋನಿಗೆ.ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯಗೆ ಐದನೇ ಸಾಲಿನ ಆಸನ! ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ತಲೆ ಮೇಲೆ ತಾನೇ ಕಲ್ಲು ಎಳೆದುಕೊಂಡಿದೆ ಎಂಬ ಚರ್ಚೆಧರ್ಮಸ್ಥಳದ ಪ್ರತಿಭಟನೆಗೆ ಪ್ರಚಾರ, ಸೌಜನ್ಯಳ ನ್ಯಾಯದ ಪ್ರಶ್ನೆಗಳಿಗೆ ಇಲ್ಲ ಉಪಚಾರ!ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್ನಮ್ಮ ಕುಟುಂಬದ ಬಗ್ಗೆ ಹರಡಿರುವ ಬಹುತೇಕ ಕಥೆಗಳು ಸತ್ಯಕ್ಕೆ ದೂರ: ಆತ್ಮಕಥೆ ಬರೆಯಲು ಕಾರಣ ತಿಳಿಸಿದ ಸೋನಿಯಾ ಗಾಂಧಿ

ಎಸ್‌ಐಆರ್‌ ಕುರಿತು ಏಕಮತದ ತೀರ್ಮಾನ ಕೈಗೊಂಡಿರುವುದಕ್ಕೆ ಇಸಿಐ ದಾಖಲೆಗಳನ್ನು ಸಲ್ಲಿಸಿಲ್ಲ: ಸುಪ್ರೀಂಕೋರ್ಟಿನಲ್ಲಿ ವಾದ ಸಲ್ಲಿಸಿದ ಅರ್ಜಿದಾರರು

PPeepal Media

Peepal Media ದೇಶ

• 2 ನಿಮಿಷದ ಓದು

ಎಸ್‌ಐಆರ್‌ ಕುರಿತು ಏಕಮತದ ತೀರ್ಮಾನ ಕೈಗೊಂಡಿರುವುದಕ್ಕೆ ಇಸಿಐ ದಾಖಲೆಗಳನ್ನು ಸಲ್ಲಿಸಿಲ್ಲ: ಸುಪ್ರೀಂಕೋರ್ಟಿನಲ್ಲಿ ವಾದ ಸಲ್ಲಿಸಿದ ಅರ್ಜಿದಾರರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ನಿರ್ಧಾರಗಳನ್ನು ಮೂವರು ಚುನಾವಣಾ ಆಯುಕ್ತರು ಒಮ್ಮತದಿಂದ ಕೈಗೊಂಡಿದ್ದಾರೆ ಎಂಬುದನ್ನು ಸಾಬೀತುಪಡಿಸುವ ದಾಖಲೆಗಳನ್ನು ಸಲ್ಲಿಸುವಲ್ಲಿ ಭಾರತೀಯ ಚುನಾವಣಾ ಆಯೋಗ (ಇಸಿಐ) ವಿಫಲವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ಕಾರ್ಯವೈಖರಿಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ವಾದಿಸಿದ್ದಾರೆ.

ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಧಾರಗಳನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸಲ್ಲಿಸಿದ್ದ ಪ್ರತಿ ಅಫಿಡವಿಟ್‌ ಮತ್ತು ಹೆಚ್ಚುವರಿ ಅಫಿಡವಿಟ್‌ಗೆ ಅರ್ಜಿದಾರ ರಾಕೇಶ್‌ ಕುಮಾರ್‌ ಸಿಂಗ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರ ಪರ ವಕೀಲ ಮುದಿತ್‌ ಗುಪ್ತಾ ಪ್ರತಿಕ್ರಿಯಾತ್ಮಕ ಅಫಿಡವಿಟ್‌ ಸಲ್ಲಿಸಿದ್ದಾರೆ.

ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರಾವಧಿ) ಕಾಯ್ದೆ–2023ರ ಸೆಕ್ಷನ್‌ 18ರ ಪ್ರಕಾರ ನಿರ್ಧಾರಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಚುನಾವಣಾ ಆಯೋಗದ ಅಫಿಡವಿಟ್‌ಗಳು ಸ್ಪಷ್ಟಪಡಿಸಿಲ್ಲ ಎಂದು ಅರ್ಜಿದಾರರು ಹೇಳಿದ್ದಾರೆ. ನಿರ್ಧಾರಗಳು ಸಾಮೂಹಿಕವಾಗಿ ಮತ್ತು ಒಮ್ಮತದಿಂದ ಕೈಗೊಳ್ಳಲಾಗಿದೆ ಎಂಬ ಹೇಳಿಕೆಗಳಿಗೆ ಪೂರಕವಾಗಿ ಆಂತರಿಕ ಸಾಂಸ್ಥಿಕ ದಾಖಲೆಗಳನ್ನು ಸಲ್ಲಿಸದೆ ಇರುವುದನ್ನೂ ಅವರು ಪ್ರಶ್ನಿಸಿದ್ದಾರೆ.

ವಿವಾದಿತ ನಿರ್ಧಾರಗಳಿಗೆ ಸಂಬಂಧಿಸಿದ ಕಾರ್ಯಸೂಚಿ, ಸಭೆಯ ನಡಾವಳಿಗಳು, ಕಡತ ಟಿಪ್ಪಣಿಗಳು, ಸುತ್ತೋಲೆ ಹಾಳೆಗಳು, ನಿರ್ಣಯಗಳು, ವಿದ್ಯುನ್ಮಾನ ಅನುಮೋದನೆಗಳು ಮತ್ತು ಅಧಿಕೃತ ಸಂವಹನಗಳ ದಾಖಲೆಗಳನ್ನು ಸಲ್ಲಿಸುವಂತೆ ಅರ್ಜಿದಾರರು ಕೋರಿದ್ದಾರೆ. ಸೆಕ್ಷನ್‌ 18ರ ಅಡಿಯಲ್ಲಿ ನಿರ್ಧಾರಗಳನ್ನು ಸ್ವತಃ ಚುನಾವಣಾ ಆಯೋಗವೇ ಕೈಗೊಂಡಿತೇ ಅಥವಾ ಸೂಕ್ತ ಅನುಮೋದನೆ ಇಲ್ಲದೆ ಅಧಿಕಾರಿಗಳು ಮತ್ತು ಆಡಳಿತ ವಿಭಾಗಗಳು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಂಡಿವೆಯೇ ಎಂಬುದೂ ಸ್ಪಷ್ಟವಾಗಿಲ್ಲ ಎಂದು ಪ್ರತಿವಾದದಲ್ಲಿ ಉಲ್ಲೇಖಿಸಿದ್ದಾರೆ.

ಎಸ್‌ಐಆರ್‌ ಪ್ರಕ್ರಿಯೆಯ ಭಾಗವಾಗಿ ಆನ್‌ಲೈನ್‌ ಫಾರ್ಮ್‌–6 ಅರ್ಜಿಯಲ್ಲಿ ಸೇರಿಸಲಾಗಿದ್ದ ಹೆಚ್ಚುವರಿ ಘೋಷಣೆಯ ಬಗ್ಗೆಯೂ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 1960ರ ಮತದಾರರ ನೋಂದಣಿ ನಿಯಮಗಳ ಅಡಿಯಲ್ಲಿ ನಿಗದಿಪಡಿಸಲಾಗಿರುವ ಫಾರ್ಮ್‌–6ಕ್ಕೆ ಸಂಬಂಧಿಸಿದ ತಿದ್ದುಪಡಿ ಮಾಡದೆ, ಅರ್ಜಿದಾರರ ಪೋಷಕರು ಅಥವಾ ಅಜ್ಜ-ಅಜ್ಜಿಯರ ಮಾಹಿತಿಯೂ ಸೇರಿದಂತೆ ಹಿಂದಿನ ಮತದಾರರ ಪಟ್ಟಿಯೊಂದಿಗೆ ವಿವರಗಳನ್ನು ಹೊಂದಾಣಿಕೆ ಮಾಡುವ ಅಗತ್ಯವನ್ನು ಈ ಘೋಷಣೆಯ ಮೂಲಕ ಪರಿಚಯಿಸಲಾಗಿದೆ ಎಂದು ಅವರು ವಾದಿಸಿದ್ದಾರೆ.

ರಿಟ್‌ ಅರ್ಜಿ ಸಲ್ಲಿಸಿದ ಬಳಿಕ ಚುನಾವಣಾ ಆಯೋಗ ಕೈಗೊಂಡಿರುವ ತಿದ್ದುಪಡಿ ಕ್ರಮಗಳು, ಆರಂಭದಲ್ಲಿ ಈ ನಿರ್ಧಾರಗಳನ್ನು ಯಾವ ಅಧಿಕಾರದ ಅಡಿಯಲ್ಲಿ ತೆಗೆದುಕೊಳ್ಳಲಾಗಿದೆ ಎಂಬ ತಮ್ಮ ಆರೋಪಗಳಿಗೆ ಉತ್ತರ ನೀಡುವುದಿಲ್ಲ ಎಂದೂ ಅರ್ಜಿದಾರರು ಹೇಳಿದ್ದಾರೆ.

ಗೋವಾದ 97 ಮತದಾರರ ಪ್ರಕರಣವನ್ನೂ ಅವರು ತಮ್ಮ ಪ್ರತಿಕ್ರಿಯಾತ್ಮಕ ಅಫಿಡವಿಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ಪ್ರಕಾರ ಈ ಮತದಾರರು ಪಟ್ಟಿಗೆ ಸೇರ್ಪಡೆಯಾಗಲು ಅರ್ಹರಾಗಿದ್ದರೂ, ಈಸಿಐನೆಟ್‌ ಪೋರ್ಟಲ್‌ ಮೂಲಕ ಫಾರ್ಮ್‌–6 ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಅವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಚುನಾವಣಾ ಆಯೋಗ ವಿಫಲವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಡಿಸೆಂಬರ್‌ 9ಕ್ಕೆ ಎಸ್‌ಐಆರ್‌ ವಿಚಾರಣೆ ಮುಂದೂಡಿಕೆ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಮತ್ತು ಅಕ್ರಮಗಳು ನಡೆದಿವೆ ಎಂಬ ಆರೋಪಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಡಿಸೆಂಬರ್‌ 9ಕ್ಕೆ ಮುಂದೂಡಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿಗಳಾದ ಜೋಯ್‌ಮಾಲ್ಯ ಬಾಗ್ಚಿ ಮತ್ತು ಮೋಹನ ಅವರನ್ನೊಳಗೊಂಡ ಪೀಠ ಮಂಗಳವಾರ ಅರ್ಜಿಗಳ ವಿಚಾರಣೆ ನಡೆಸಬೇಕಿತ್ತು. ಆದರೆ, ಮಧ್ಯಾಹ್ನದ ಊಟದ ವಿರಾಮದ ಬಳಿಕ ಈಗಾಗಲೇ ಭಾಗಶಃ ವಿಚಾರಣೆ ನಡೆದಿದ್ದ ಮತ್ತೊಂದು ಪ್ರಕರಣವನ್ನು ಕೈಗೆತ್ತಿಕೊಳ್ಳಲು ಪೀಠ ನಿರ್ಧರಿಸಿದ್ದರಿಂದ ಎಸ್‌ಐಆರ್‌ ವಿಚಾರಣೆಯನ್ನು ಮುಂದೂಡಲಾಯಿತು.

ಎಸ್‌ಐಆರ್‌ ಕುರಿತು ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಅನುಮತಿ ನೀಡುವಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಅರ್ಜಿ ಸಲ್ಲಿಸಿದ್ದಾರೆ. “ಚುನಾವಣಾ ಆಯೋಗಕ್ಕೆ ಕೆಲವು ಪ್ರಶ್ನೆಗಳನ್ನು ಕೇಳಲು ನಾವು ಅನುಮತಿ ಕೋರುತ್ತಿದ್ದೇವೆ. ಈ ಮಧ್ಯೆ ಅವರು ಆ ಪ್ರಶ್ನೆಗಳಿಗೆ ಉತ್ತರ ನೀಡಬಹುದು” ಎಂದು ಅರ್ಜಿದಾರರ ಪರ ವಕೀಲ ಕಪಿಲ್‌ ಸಿಬಲ್‌ ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, “ಒಂದು ದಿನಾಂಕವನ್ನು ನಿಗದಿಪಡಿಸುತ್ತೇವೆ. ಲಿಖಿತ ಪ್ರಶ್ನೆಗಳಿಗೆ ಸಂಬಂಧಿಸಿದ ನಿಮ್ಮ ಅರ್ಜಿಯನ್ನೂ ವಿಚಾರಣೆ ನಡೆಸಿ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಉಪ ಚುನಾವಣಾ ಆಯುಕ್ತ ಭಾನು ಪ್ರಕಾಶ್‌ ಯೇತೂರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌, ಚುನಾವಣಾ ಆಯುಕ್ತರಾದ ಸುಖ್‌ಬೀರ್‌ ಸಿಂಗ್‌ ಸಂಧು ಮತ್ತು ವಿವೇಕ್‌ ಜೋಶಿ ಹಾಗೂ ಚುನಾವಣಾ ಆಯೋಗದ ಮಾಹಿತಿ ತಂತ್ರಜ್ಞಾನ ವಿಭಾಗದ ಮಹಾನಿರ್ದೇಶಕರಿಂದ ಪ್ರಮಾಣಪೂರ್ವಕ ಉತ್ತರಗಳನ್ನು ಪಡೆಯುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ:

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು