ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಪ್ರೀತಿಯ ಅನುಭೂತಿ ಪಡೆಯದ ಗಂಡಸರು!ಬೆಂಗಳೂರಿನ ಮೊದಲ ಮುಖ್ಯ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಯಾರು?: 1996ರ ಬ್ಯಾಚ್‌ನ ಅಧಿಕಾರಿಗೆ ಹೊಸ ವ್ಯವಸ್ಥೆಯ ಹೊಣೆ!ರೈಲ್ವೆ ಕಾಮಗಾರಿ ಪ್ರಕ್ರಿಯೆ: ಹಲವು ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಟಿಕೆಟ್‌ ಇಲ್ಲದೆ ವಂದೇ ಭಾರತ್ ಪ್ರಯಾಣ – 36 ಸಾವಿರ ದಂಡ ನೆಟ್ಟಿಗರ ಆಕ್ರೋಶಅಮೆರಿಕ–ಚೀನಾ–ರಷ್ಯಾ ಮಹಾಶಕ್ತಿಗಳ ಮುಖಾಮುಖಿ: ಶೆನ್‌ಜೆನ್‌ನಲ್ಲಿ ಟ್ರಂಪ್, ಕ್ಸಿ ಮತ್ತು ಪುಟಿನ್ ಭೇಟಿ; ಭಾರತದ ಪಾಲಿಗೆ ಇದು ಎಚ್ಚರಿಕೆಯ ಸಮಯವೇ?ರೈತರ ಸಂಕಷ್ಟದ ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರದಿಂದ ಪರಿಹಾರ ಪಡೆಯಲು ಮೂರು ಬಾರಿ ಮನವಿ ಸಲ್ಲಿಸಿದ್ದೇವೆ – ಜಿ. ಪರಮೇಶ್ವರಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣದಲ್ಲಿ ವ್ಯತ್ಯಾಸ: ಕೇಂದ್ರಕ್ಕೆ ಕರ್ನಾಟಕ ಸರ್ಕಾರದಿಂದ ಪತ್ರ; ಐದು ಪ್ರಮುಖ ಬೇಡಿಕೆಗಳ ಮಂಡನೆಕಾಶ್ಮೀರದಲ್ಲಿ ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ: ಮಸೀದಿಯಲ್ಲಿ ಆಶ್ರಯ; ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾದ ಕಾರ್ಯಾಚರಣೆಭಾರತದ ಆರ್ಥಿಕತೆ ಸಂಕಷ್ಟದಲ್ಲಿದೆ, ಉತ್ಪಾದನಾ ವಲಯದ ಬೆನ್ನೆಲುಬು ಮುರಿದಿದೆ: ರಾಹುಲ್‌ ಗಾಂಧಿಮತದಾರರ ಪಟ್ಟಿಯಿಂದ ಹೆಸರು ಕಳೆದುಕೊಂಡವರಿಗೆ ಮತ್ತೊಂದು ಅವಕಾಶ: ಚುನಾವಣಾ ಆಯೋಗದ ಹೊಸ ಗಡುವುಆರ್‌ಎಫ್‌ಒ ಹೇಮಂತ್‌ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ – ಆದಾಯಕ್ಕಿಂತ ಅಧಿಕ ಆಸ್ತಿ ತೀವ್ರ ಶೋಧಆಗುಂಬೆ ಕಾಳಿಂಗ ಪ್ರಕರಣ: ನ್ಯಾಯಾಲಯದಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಪರಿಸರ ಸಂಘಟನೆಗಳ ತೀವ್ರ ಒತ್ತಾಯ5,000 ಮಾಸಿಕ ಗೌರವ ಧನಕ್ಕೆ ಆಗ್ರಹಿಸಿ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ‌ – ಬೃಹತ್ ಪ್ರತಿಭಟನೆಜಾವೇದ್ ಅಖ್ತರ್‌ಗೆ ಮೌಲ್ವಿ ಟಾಂಗ್: ‘ಹೆಸರು ಬದಲಿಸಿಕೊಂಡು ರಾಮ್ ಪಾಲ್ ಆಗಿ’ ಎಂದು ವ್ಯಂಗ್ಯಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ: ಎಂಬಿ ಪಾಟೀಲ್ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ – ಹೆಚ್​​​​​ಡಿಕೆ ಗರಂಮಸೀದಿಯೊಳಗೆ ಅಡಗಿದ್ದ ಉಗ್ರನ ವಿರುದ್ಧ ಕಾರ್ಯಾಚರಣೆ ; ಕುಲ್ಗಾಮ್‌ನಲ್ಲಿ ಲಷ್ಕರ್ ಉಗ್ರ ಲತೀಫ್ ಭಟ್ ಹತKPSC ನೇಮಕಾತಿ ಹಗರಣ: ಸರ್ಕಾರಿ ಉದ್ಯೋಗದ ಕನಸಿಗೂ ಬೆಲೆ ನಿಗದಿ! ಆಯೋಗದ ಸದಸ್ಯೆಯೇ ಎಸ್‌ಐಟಿ ಬಲೆಗೆಜಾತಿ ಮತ್ತು ಮರ್ಯಾದೆಯ ಸಂಕೋಲೆಯಲ್ಲಿ ಯುವಜನರ ಸ್ವಾತಂತ್ರ್ಯಬಂಗಾಳ ಕೊಲ್ಲಿಯಲ್ಲಿ ಅಕ್ವಾನ್ ಚಂಡಮಾರುತ: ಆಂಧ್ರ ಕರಾವಳಿಗೆ ಅಪ್ಪಳಿಸಲು ಸಿದ್ಧತೆ; ಕರ್ನಾಟಕದಲ್ಲೂ ಮಳೆಯ ಮುನ್ಸೂಚನೆ

ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ – ಹೆಚ್​​​​​ಡಿಕೆ ಗರಂ

ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ – ಹೆಚ್​​​​​ಡಿಕೆ ಗರಂ

ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದ್ದು, ಬೆಲೆ ಏರಿಕೆ ಹಾಗೂ ತೆರಿಗೆ ಹಣದ ಮೂಲಕ ಜನರನ್ನು ವಂಚಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy)  ಸರ್ಕಾರದ ಆಡಳಿತ ವೈಖರಿ ಹಾಗೂ ತಮ್ಮ ವಿರುದ್ಧ ಟೀಕೆ ಮಾಡುತ್ತಿರುವ ಸ್ಥಳೀಯ ಜನಪ್ರತಿನಿಧಿಗಳಿಗೆ ಖಡಕ್ ಉತ್ತರ ನೀಡಿದರು.

ನನ್ನಿಂದ ಬಡವರಿಗೆ ಒಳಿತಾಗಲಿ, ಜನರ ಸೇವೆ ಮಾಡಲು ಶಕ್ತಿ ಕೊಡು

ಮಳವಳ್ಳಿ ತಾಲೂಕಿನ ಗುಂಡಾಪುರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೆಲ ಜನಪ್ರತಿನಿಧಿಗಳು ನಿತ್ಯ ನನ್ನ ಬಗ್ಗೆಯೇ ಚರ್ಚೆ ಮಾಡುತ್ತಾರೆ. ಕುಮಾರಸ್ವಾಮಿ ಮಾತು ಸುಳ್ಳು, ಅವರ ಮನೆ ದೇವರು ಸುಳ್ಳು ಎಂದು ಹೀಯಾಳಿಸುತ್ತಾರೆ. ನಾನು ಕೊಲ್ಲೂರು ಮೂಕಾಂಬಿಕೆ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಎಲ್ಲೇ ಹೋದರೂ ನನ್ನಿಂದ ಬಡವರಿಗೆ ಒಳಿತಾಗಲಿ, ಜನರ ಸೇವೆ ಮಾಡಲು ಶಕ್ತಿ ಕೊಡು ಎಂದು ಬೇಡಿಕೊಳ್ಳುತ್ತೇನೆಯೇ ಹೊರತು ಸ್ವಾರ್ಥಕ್ಕಲ್ಲ.ಮಹಿಳೆಯರಿಗೆ ನೀಡುತ್ತಿರುವ 2 ಸಾವಿರ ರೂಪಾಯಿ ಅವರ ಸ್ವಂತ ಜೇಬಿನ ಹಣವಲ್ಲ, ಅದು ಸಾರ್ವಜನಿಕರ ತೆರಿಗೆ ಹಣ. ಖಜಾನೆ ಖಾಲಿಯಾಗಿರುವುದರಿಂದಲೇ ಕಳೆದ ಬಾರಿಯಂತೆ ಈ ಬಾರಿಯೂ ಬಸ್ ಪ್ರಯಾಣ ದರ ಸೇರಿದಂತೆ ಬೆಲೆ ಏರಿಕೆಯ ಬರೆ ಎಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮನೆ ಬಾಗಿಲಿಗೆ ಬಂದವರಿಗೆ ನಿರಾಸೆ ಮಾಡಬಾರದು!

ನನ್ನ ಬಳಿ ಒಂದು ಸಣ್ಣ ಮಗುವನ್ನು ಕರೆತಂದಿದ್ದರು. ಕಾಲಿನ ಚಿಕಿತ್ಸೆಗೆ ಇಂಡೋನೇಷ್ಯಾದಲ್ಲಿ 1 ಕೋಟಿ ಖರ್ಚಾದರೆ, ನಮ್ಮ ದೇಶದಲ್ಲಿ 14 ಕೋಟಿ ತಗಲುತ್ತದೆ. ಇಂತಹ ಸಂಕಷ್ಟದಲ್ಲಿರುವ ಕುಟುಂಬಗಳನ್ನು ಕೇವಲ ಗ್ಯಾರಂಟಿ ಹಣದಿಂದ ಬದುಕಿಸಲು ಸಾಧ್ಯವಿಲ್ಲ. ಜನರಿಗೆ ನಿಜವಾಗಿ ಆಸರೆಯಾಗುವ ಮತ್ತು ಅವರ ಬದುಕನ್ನು ಸರಿಪಡಿಸುವ ಯೋಜನೆಗಳು ಸರ್ಕಾರದಿಂದ ಬರಬೇಕು. ನನಗೆ ಅಧಿಕಾರ ಇರಲಿ, ಇಲ್ಲದಿರಲಿ ಜನರು ನನ್ನ ಬಳಿ ಸಹಾಯಕ್ಕಾಗಿ ಬರುತ್ತಾರೆ. ಮನೆ ಬಾಗಿಲಿಗೆ ಬಂದವರಿಗೆ ನಿರಾಸೆ ಮಾಡಬಾರದು ಎಂಬುದು ನನ್ನ ಆಶಯ. ಈ ಹಿಂದೆ ಪೂರ್ಣ ಬಹುಮತ ಇಲ್ಲದಿದ್ದರೂ, ಬಿಜೆಪಿ ಜೊತೆಗೂಡಿ ಸರ್ಕಾರ ನಡೆಸಿದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಸೇರಿದಂತೆ ಹಲವು ಐತಿಹಾಸಿಕ ಜನಪರ ಕೆಲಸಗಳನ್ನ ಮಾಡಿದ್ದೇನೆ. ಸರ್ಕಾರ ನಡೆಸುವುದೆಂದರೆ ಕೇವಲ ಯೋಜನೆಗಳನ್ನ ಘೋಷಣೆ ಮಾಡುವುದಲ್ಲ ಎಂದು ಸ್ಪಷ್ಟಪಡಿಸಿದರು.

ನನ್ನೊಂದಿಗೆ ಊಟ ಮಾಡಿ, ಬೆಳೆದ ಕೆಲ ಸ್ನೇಹಿತರೇ ಇಂದು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಅವರಿಂದ ಒಳ್ಳೆಯ ಮಾತನ್ನು ನಿರೀಕ್ಷಿಸುವುದಿಲ್ಲ. ಮೂರು ಬಾರಿ ಗಂಭೀರ ಅನಾರೋಗ್ಯದಿಂದ ಯಮನ ಸನ್ನಿಧಿವರೆಗೆ ಹೋಗಿ ಬಂದವನು ನಾನು. ಜನರ ಪ್ರೀತಿ ಮತ್ತು ದೇವರ ಆಶೀರ್ವಾದದಿಂದಲೇ ಇಂದು ಜೀವಂತವಾಗಿ ನಿಮ್ಮೆದುರು ನಿಂತಿದ್ದೇನೆ ಎಂದು ಭಾವುಕರಾಗಿ ನುಡಿದರು.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು