ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಪ್ರೀತಿಯ ಅನುಭೂತಿ ಪಡೆಯದ ಗಂಡಸರು!ಬೆಂಗಳೂರಿನ ಮೊದಲ ಮುಖ್ಯ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಯಾರು?: 1996ರ ಬ್ಯಾಚ್‌ನ ಅಧಿಕಾರಿಗೆ ಹೊಸ ವ್ಯವಸ್ಥೆಯ ಹೊಣೆ!ರೈಲ್ವೆ ಕಾಮಗಾರಿ ಪ್ರಕ್ರಿಯೆ: ಹಲವು ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಟಿಕೆಟ್‌ ಇಲ್ಲದೆ ವಂದೇ ಭಾರತ್ ಪ್ರಯಾಣ – 36 ಸಾವಿರ ದಂಡ ನೆಟ್ಟಿಗರ ಆಕ್ರೋಶಅಮೆರಿಕ–ಚೀನಾ–ರಷ್ಯಾ ಮಹಾಶಕ್ತಿಗಳ ಮುಖಾಮುಖಿ: ಶೆನ್‌ಜೆನ್‌ನಲ್ಲಿ ಟ್ರಂಪ್, ಕ್ಸಿ ಮತ್ತು ಪುಟಿನ್ ಭೇಟಿ; ಭಾರತದ ಪಾಲಿಗೆ ಇದು ಎಚ್ಚರಿಕೆಯ ಸಮಯವೇ?ರೈತರ ಸಂಕಷ್ಟದ ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರದಿಂದ ಪರಿಹಾರ ಪಡೆಯಲು ಮೂರು ಬಾರಿ ಮನವಿ ಸಲ್ಲಿಸಿದ್ದೇವೆ – ಜಿ. ಪರಮೇಶ್ವರಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣದಲ್ಲಿ ವ್ಯತ್ಯಾಸ: ಕೇಂದ್ರಕ್ಕೆ ಕರ್ನಾಟಕ ಸರ್ಕಾರದಿಂದ ಪತ್ರ; ಐದು ಪ್ರಮುಖ ಬೇಡಿಕೆಗಳ ಮಂಡನೆಕಾಶ್ಮೀರದಲ್ಲಿ ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ: ಮಸೀದಿಯಲ್ಲಿ ಆಶ್ರಯ; ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾದ ಕಾರ್ಯಾಚರಣೆಭಾರತದ ಆರ್ಥಿಕತೆ ಸಂಕಷ್ಟದಲ್ಲಿದೆ, ಉತ್ಪಾದನಾ ವಲಯದ ಬೆನ್ನೆಲುಬು ಮುರಿದಿದೆ: ರಾಹುಲ್‌ ಗಾಂಧಿಮತದಾರರ ಪಟ್ಟಿಯಿಂದ ಹೆಸರು ಕಳೆದುಕೊಂಡವರಿಗೆ ಮತ್ತೊಂದು ಅವಕಾಶ: ಚುನಾವಣಾ ಆಯೋಗದ ಹೊಸ ಗಡುವುಆರ್‌ಎಫ್‌ಒ ಹೇಮಂತ್‌ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ – ಆದಾಯಕ್ಕಿಂತ ಅಧಿಕ ಆಸ್ತಿ ತೀವ್ರ ಶೋಧಆಗುಂಬೆ ಕಾಳಿಂಗ ಪ್ರಕರಣ: ನ್ಯಾಯಾಲಯದಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಪರಿಸರ ಸಂಘಟನೆಗಳ ತೀವ್ರ ಒತ್ತಾಯ5,000 ಮಾಸಿಕ ಗೌರವ ಧನಕ್ಕೆ ಆಗ್ರಹಿಸಿ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ‌ – ಬೃಹತ್ ಪ್ರತಿಭಟನೆಜಾವೇದ್ ಅಖ್ತರ್‌ಗೆ ಮೌಲ್ವಿ ಟಾಂಗ್: ‘ಹೆಸರು ಬದಲಿಸಿಕೊಂಡು ರಾಮ್ ಪಾಲ್ ಆಗಿ’ ಎಂದು ವ್ಯಂಗ್ಯಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ: ಎಂಬಿ ಪಾಟೀಲ್ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ – ಹೆಚ್​​​​​ಡಿಕೆ ಗರಂಮಸೀದಿಯೊಳಗೆ ಅಡಗಿದ್ದ ಉಗ್ರನ ವಿರುದ್ಧ ಕಾರ್ಯಾಚರಣೆ ; ಕುಲ್ಗಾಮ್‌ನಲ್ಲಿ ಲಷ್ಕರ್ ಉಗ್ರ ಲತೀಫ್ ಭಟ್ ಹತKPSC ನೇಮಕಾತಿ ಹಗರಣ: ಸರ್ಕಾರಿ ಉದ್ಯೋಗದ ಕನಸಿಗೂ ಬೆಲೆ ನಿಗದಿ! ಆಯೋಗದ ಸದಸ್ಯೆಯೇ ಎಸ್‌ಐಟಿ ಬಲೆಗೆಜಾತಿ ಮತ್ತು ಮರ್ಯಾದೆಯ ಸಂಕೋಲೆಯಲ್ಲಿ ಯುವಜನರ ಸ್ವಾತಂತ್ರ್ಯಬಂಗಾಳ ಕೊಲ್ಲಿಯಲ್ಲಿ ಅಕ್ವಾನ್ ಚಂಡಮಾರುತ: ಆಂಧ್ರ ಕರಾವಳಿಗೆ ಅಪ್ಪಳಿಸಲು ಸಿದ್ಧತೆ; ಕರ್ನಾಟಕದಲ್ಲೂ ಮಳೆಯ ಮುನ್ಸೂಚನೆ

ಆರ್‌ಎಫ್‌ಒ ಹೇಮಂತ್‌ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ – ಆದಾಯಕ್ಕಿಂತ ಅಧಿಕ ಆಸ್ತಿ ತೀವ್ರ ಶೋಧ

ಆರ್‌ಎಫ್‌ಒ ಹೇಮಂತ್‌ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ – ಆದಾಯಕ್ಕಿಂತ ಅಧಿಕ ಆಸ್ತಿ ತೀವ್ರ ಶೋಧ

ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಹಾಸನ ನಗರದ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಹೇಮಂತ್‌ಕುಮಾರ್ ಅವರ ನಿವಾಸ, ಸಕಲೇಶಪುರದಲ್ಲಿರುವ ಬಾಡಿಗೆ ಮನೆ ಹಾಗೂ ಅವರ ಕಚೇರಿ, ಆಲೂರು ತಾಲ್ಲೂಕಿನ ದೊಡ್ಡಗುತ್ತಿಗೆದಾರ ಹರೀಶ್ ಅವರು ಹೇಮಂತ್‌ಕುಮಾರ್ ಅವರ ಆಪ್ತರಾಗಿದ್ದಾರೆ ಎನ್ನಲಾಗಿದೆ. ಐದು ಸ್ಥಳಗಳಲ್ಲಿ ಏಕಕಾಲಕ್ಕೆ ಪರಿಶೀಲನೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಆಸ್ತಿ ಹಾಗೂ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ನಂದಿನಿ, ಡಿವೈಎಸ್ಪಿ ಸುರೇಶ್ ಹಾಗೂ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪ, ಗವಿರಾಜು ಮತ್ತು ಚಂದ್ರಶೇಖರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಡೆದಿರುವ ಈ ದಾಳಿಯ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.ಮಗ್ಗೆ ಗ್ರಾಮದಲ್ಲಿರುವ ಅವರ ಮಾವನ ಮನೆ ಮತ್ತು ಹಾಸನದ ಕುವೆಂಪುನಗರದಲ್ಲಿರುವ ಗುತ್ತಿಗೆದಾರ ಹರೀಶ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು