ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಪ್ರೀತಿಯ ಅನುಭೂತಿ ಪಡೆಯದ ಗಂಡಸರು!ಬೆಂಗಳೂರಿನ ಮೊದಲ ಮುಖ್ಯ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಯಾರು?: 1996ರ ಬ್ಯಾಚ್‌ನ ಅಧಿಕಾರಿಗೆ ಹೊಸ ವ್ಯವಸ್ಥೆಯ ಹೊಣೆ!ರೈಲ್ವೆ ಕಾಮಗಾರಿ ಪ್ರಕ್ರಿಯೆ: ಹಲವು ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಟಿಕೆಟ್‌ ಇಲ್ಲದೆ ವಂದೇ ಭಾರತ್ ಪ್ರಯಾಣ – 36 ಸಾವಿರ ದಂಡ ನೆಟ್ಟಿಗರ ಆಕ್ರೋಶಅಮೆರಿಕ–ಚೀನಾ–ರಷ್ಯಾ ಮಹಾಶಕ್ತಿಗಳ ಮುಖಾಮುಖಿ: ಶೆನ್‌ಜೆನ್‌ನಲ್ಲಿ ಟ್ರಂಪ್, ಕ್ಸಿ ಮತ್ತು ಪುಟಿನ್ ಭೇಟಿ; ಭಾರತದ ಪಾಲಿಗೆ ಇದು ಎಚ್ಚರಿಕೆಯ ಸಮಯವೇ?ರೈತರ ಸಂಕಷ್ಟದ ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರದಿಂದ ಪರಿಹಾರ ಪಡೆಯಲು ಮೂರು ಬಾರಿ ಮನವಿ ಸಲ್ಲಿಸಿದ್ದೇವೆ – ಜಿ. ಪರಮೇಶ್ವರಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣದಲ್ಲಿ ವ್ಯತ್ಯಾಸ: ಕೇಂದ್ರಕ್ಕೆ ಕರ್ನಾಟಕ ಸರ್ಕಾರದಿಂದ ಪತ್ರ; ಐದು ಪ್ರಮುಖ ಬೇಡಿಕೆಗಳ ಮಂಡನೆಕಾಶ್ಮೀರದಲ್ಲಿ ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ: ಮಸೀದಿಯಲ್ಲಿ ಆಶ್ರಯ; ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾದ ಕಾರ್ಯಾಚರಣೆಭಾರತದ ಆರ್ಥಿಕತೆ ಸಂಕಷ್ಟದಲ್ಲಿದೆ, ಉತ್ಪಾದನಾ ವಲಯದ ಬೆನ್ನೆಲುಬು ಮುರಿದಿದೆ: ರಾಹುಲ್‌ ಗಾಂಧಿಮತದಾರರ ಪಟ್ಟಿಯಿಂದ ಹೆಸರು ಕಳೆದುಕೊಂಡವರಿಗೆ ಮತ್ತೊಂದು ಅವಕಾಶ: ಚುನಾವಣಾ ಆಯೋಗದ ಹೊಸ ಗಡುವುಆರ್‌ಎಫ್‌ಒ ಹೇಮಂತ್‌ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ – ಆದಾಯಕ್ಕಿಂತ ಅಧಿಕ ಆಸ್ತಿ ತೀವ್ರ ಶೋಧಆಗುಂಬೆ ಕಾಳಿಂಗ ಪ್ರಕರಣ: ನ್ಯಾಯಾಲಯದಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಪರಿಸರ ಸಂಘಟನೆಗಳ ತೀವ್ರ ಒತ್ತಾಯ5,000 ಮಾಸಿಕ ಗೌರವ ಧನಕ್ಕೆ ಆಗ್ರಹಿಸಿ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ‌ – ಬೃಹತ್ ಪ್ರತಿಭಟನೆಜಾವೇದ್ ಅಖ್ತರ್‌ಗೆ ಮೌಲ್ವಿ ಟಾಂಗ್: ‘ಹೆಸರು ಬದಲಿಸಿಕೊಂಡು ರಾಮ್ ಪಾಲ್ ಆಗಿ’ ಎಂದು ವ್ಯಂಗ್ಯಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ: ಎಂಬಿ ಪಾಟೀಲ್ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ – ಹೆಚ್​​​​​ಡಿಕೆ ಗರಂಮಸೀದಿಯೊಳಗೆ ಅಡಗಿದ್ದ ಉಗ್ರನ ವಿರುದ್ಧ ಕಾರ್ಯಾಚರಣೆ ; ಕುಲ್ಗಾಮ್‌ನಲ್ಲಿ ಲಷ್ಕರ್ ಉಗ್ರ ಲತೀಫ್ ಭಟ್ ಹತKPSC ನೇಮಕಾತಿ ಹಗರಣ: ಸರ್ಕಾರಿ ಉದ್ಯೋಗದ ಕನಸಿಗೂ ಬೆಲೆ ನಿಗದಿ! ಆಯೋಗದ ಸದಸ್ಯೆಯೇ ಎಸ್‌ಐಟಿ ಬಲೆಗೆಜಾತಿ ಮತ್ತು ಮರ್ಯಾದೆಯ ಸಂಕೋಲೆಯಲ್ಲಿ ಯುವಜನರ ಸ್ವಾತಂತ್ರ್ಯಬಂಗಾಳ ಕೊಲ್ಲಿಯಲ್ಲಿ ಅಕ್ವಾನ್ ಚಂಡಮಾರುತ: ಆಂಧ್ರ ಕರಾವಳಿಗೆ ಅಪ್ಪಳಿಸಲು ಸಿದ್ಧತೆ; ಕರ್ನಾಟಕದಲ್ಲೂ ಮಳೆಯ ಮುನ್ಸೂಚನೆ

ಟಿಕೆಟ್‌ ಇಲ್ಲದೆ ವಂದೇ ಭಾರತ್ ಪ್ರಯಾಣ – 36 ಸಾವಿರ ದಂಡ ನೆಟ್ಟಿಗರ ಆಕ್ರೋಶ

ಟಿಕೆಟ್‌ ಇಲ್ಲದೆ ವಂದೇ ಭಾರತ್ ಪ್ರಯಾಣ – 36 ಸಾವಿರ ದಂಡ ನೆಟ್ಟಿಗರ ಆಕ್ರೋಶ

ಇಟಾವಾ: ರೈಲಿನಲ್ಲಿ ಪ್ರಯಾಣಿಸಲಿದ್ದ ಸಂಬಂಧಿಕರನ್ನು ಬೀಳ್ಕೊಡಲು ಹೋಗಿದ್ದ 12 ಮಂದಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನೊಳಗೆ ಸಿಲುಕಿಕೊಂಡು ಸುಮಾರು 140 ಕಿ.ಮೀ ಪ್ರಯಾಣಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನಿಯಮ ಉಲ್ಲಂಘಿಸಿ ಟಿಕೆಟ್ ಅಥವಾ ಅನುಮತಿಯಿಲ್ಲದೆ ರೈಲು ಹತ್ತಿದ ಆರೋಪದ ಮೇಲೆ ರೈಲ್ವೆ ಅಧಿಕಾರಿಗಳು 12 ಮಂದಿಗೂ ತಲಾ ₹3 ಸಾವಿರದಂತೆ ಒಟ್ಟು ₹36 ಸಾವಿರ ದಂಡ ವಿಧಿಸಿದ್ದಾರೆ.

ವಾರಾಣಸಿಯಿಂದ ನವದೆಹಲಿಗೆ ತೆರಳುತ್ತಿದ್ದ 22415 ಸಂಖ್ಯೆಯ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕಾನ್ಪುರ ಸೆಂಟ್ರಲ್ ನಿಲ್ದಾಣಕ್ಕೆ ಬಂದಾಗ ಈ ಘಟನೆ ನಡೆದಿದೆ. ಅಲ್ಲಿನ 12 ಮಂದಿ ತಮ್ಮ ಸಂಬಂಧಿಕರನ್ನು ಬೀಳ್ಕೊಡಲು ರೈಲು ಹತ್ತಿದ್ದು, ಪ್ರಯಾಣಿಕರು ಸೀಟಿನಲ್ಲಿ ಕುಳಿತುಕೊಳ್ಳಲು ಸಹಾಯ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ರೈಲಿನ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿಕೊಂಡಿವೆ. ರೈಲು ಹೊರಟಿದ್ದರಿಂದ ಅವರಿಗೆ ಕೆಳಗಿಳಿಯಲು ಸಾಧ್ಯವಾಗದೆ ಒಳಗೇ ಸಿಲುಕಿಕೊಳ್ಳುವಂತಾಗಿದೆ. ರೈಲು ಚಲಿಸಲು ಆರಂಭಿಸಿದ ಬಳಿಕ ತಾವು ರೈಲಿನೊಳಗೆ ಸಿಲುಕಿರುವುದನ್ನು ಅರಿತ ಅವರು ತಕ್ಷಣ ರೈಲ್ವೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆದರೆ ರೈಲು ಚಲಿಸುತ್ತಿದ್ದ ಕಾರಣ ಸುರಕ್ಷತಾ ನಿಯಮಗಳ ಹಿನ್ನೆಲೆಯಲ್ಲಿ ಬಾಗಿಲು ತೆರೆಯಲು ಸಾಧ್ಯವಾಗಿಲ್ಲ. ಗುಂಪಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಕೂಡ ಇದ್ದರು ಎನ್ನಲಾಗಿದೆ.

ವಿಷಯ ತಿಳಿದ ರೈಲು ಸಿಬ್ಬಂದಿ ತುಂಡ್ಲಾ ರೈಲ್ವೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಂದ ಬಂದ ಸೂಚನೆಯಂತೆ ಭಾನುವಾರ ಬೆಳಗ್ಗೆ 10.49ರ ಸುಮಾರಿಗೆ ರೈಲನ್ನು ಇಟಾವಾ ಜಂಕ್ಷನ್‌ನಲ್ಲಿ ನಿಲ್ಲಿಸಲಾಗಿದೆ. ಕಾನ್ಪುರದಿಂದ ಸುಮಾರು 140 ಕಿ.ಮೀ ದೂರದಲ್ಲಿರುವ ಇಟಾವಾದಲ್ಲಿ 12 ಮಂದಿಯನ್ನು ರೈಲಿನಿಂದ ಕೆಳಗಿಳಿಸಲಾಗಿದೆ.

ನಂತರ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಹಾಗೂ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಗಳು ಅವರನ್ನು ವಿಚಾರಣೆ ನಡೆಸಿ ಘಟನೆಯ ವಿವರ ದಾಖಲಿಸಿಕೊಂಡಿದ್ದಾರೆ. ಮಾನ್ಯ ಟಿಕೆಟ್ ಅಥವಾ ಅಧಿಕೃತ ಅನುಮತಿಯಿಲ್ಲದೆ ರೈಲು ಪ್ರವೇಶಿಸಿರುವುದು ನಿಯಮ ಉಲ್ಲಂಘನೆಯಾಗಿರುವುದರಿಂದ ಪ್ರತಿಯೊಬ್ಬರಿಗೂ ₹3 ಸಾವಿರ ದಂಡ ವಿಧಿಸಲಾಗಿದೆ. ಒಟ್ಟು ₹36 ಸಾವಿರ ದಂಡ ವಸೂಲಿ ಮಾಡಿದ ಬಳಿಕ ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.

ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳನ್ನು ಅಳವಡಿಸಲಾಗಿದೆ. ರೈಲು ನಿಲ್ದಾಣದಲ್ಲಿ ನಿಂತಾಗ ಮಾತ್ರ ಬಾಗಿಲು ತೆರೆಯಲಿದ್ದು, ರೈಲು ಚಲಿಸುವಾಗ ಅವು ಸ್ವಯಂಚಾಲಿತವಾಗಿ ಲಾಕ್ ಆಗುತ್ತವೆ. ಹೀಗಾಗಿ ಪ್ರಯಾಣಿಕರನ್ನು ಬೀಳ್ಕೊಡುವ ನೆಪದಲ್ಲಿ ಟಿಕೆಟ್ ಅಥವಾ ಅನುಮತಿಯಿಲ್ಲದೆ ರೈಲು ಹತ್ತುವುದು ಅನಗತ್ಯ ತೊಂದರೆಗೆ ಕಾರಣವಾಗಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು