ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಕಾರ್ಯದರ್ಶಿ ಹುದ್ದೆ | ಸಿಎಂ ಕಚೇರಿಯಿಂದ ಕರೆ ಬಂದ ನಂತರ ನಿರ್ಧರಿಸುವೆ: ತನ್ವೀರ್‌ ಸೇಠ್ದೀಪಾವಳಿ ವೇಳೆ ಪಟಾಕಿ ಸಿಡಿಸಿದ ಪ್ರಕರಣ: ಪೊಲೀಸರ ವಿರುದ್ಧ MIT ವಿದ್ಯಾರ್ಥಿಗಳಿಂದ ಸಿಎಂಗೆ ದೂರುರವಿ ಹಂಜ್ ಬಂಧನ ಸ್ವಾಗತಾರ್ಹ; ಆತನ ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಎ. ನಾರಾಯಣ ಗೌಡ ಆಗ್ರಹಡಾರ್ಕ್ ವೆಬ್‌ನಲ್ಲಿ ಅಗ್ನಿವೀರ್ ದತ್ತಾಂಶ ಮಾರಾಟಕ್ಕೆ ಯತ್ನ: 14 ವರ್ಷದ ಬಾಲಕನನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರುಬಸವ ಮಂಟಪ ಕೃತಿ ವಿವಾದ: ಲೇಖಕ ರವಿ ಹಂಜ್ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆಲಕ್ಷ ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಆರ್‌ಎಫ್ ಅಧಿಕಾರಿ –  ಅರಣ್ಯಾಧಿಕಾರಿ ವಿಶ್ವನಾಥ್ ಲೋಕಾ ಬಲೆಗೆಕಿವೀಸ್‌ ವಿರುದ್ಧ ಕನ್ನಡಿಗ ಕೆ.ಎಲ್‌ ರಾಹುಲ್‌ ಅಬ್ಬರ, ಅಮೋಘ ಶತಕ – ಐತಿಹಾಸಿಕ ದಾಖಲೆಇ-ಕೆವೈಸಿ ಯಶಸ್ವಿಯಾದರೂ ‘ನಿಧನ’ ಎಂದು ತೋರಿಸಿದ ತಂತ್ರಾಂಶ – ಗೃಹಲಕ್ಷ್ಮಿ ಯೋಜನೆಯ ಮಹಾಲೋಪಡಿ.1ರೊಳಗೆ ರೈತರ ಖಾತೆಗೆ 5,000 ರೂ. ಬರ ಪರಿಹಾರ – ಡಾ. ಜಿ. ಪರಮೇಶ್ವರ್ಹೈದರಾಬಾದ್‌ ಕಾಂಗ್ರೆಸ್ ಖಾತೆ ನಿರ್ಬಂಧ ಮೆಟಾ ಕಚೇರಿ – ಧ್ವಂಸಗೊಳಿಸಿದ ಕಾರ್ಯಕರ್ತರುಹೊಸ ಪಾಸ್‌ಪೋರ್ಟ್‌ಗಾಗಿ ಶೇಖ್‌ ಹಸೀನಾ ಮತ್ತೊಮ್ಮೆ ಮನವಿ; ಬಾಂಗ್ಲಾದೇಶ ಸರ್ಕಾರಕ್ಕೆ ತುರ್ತು ಪತ್ರಐದನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: 15 ಸಾವಿರ ರೂ. ಗೌರವಧನಕ್ಕೆ ಲಿಖಿತ ಆದೇಶಕ್ಕೆ ಪಟ್ಟುಬಿಜೆಪಿ ಶಾಸಕರ ನಡೆಗೆ ವಿಜಯೇಂದ್ರ ಗರಂ: ಸಿಎಂ ಔತಣಕೂಟದಲ್ಲಿ ಭಾಗವಹಿಸಿದ್ದಕ್ಕೆ ಆಕ್ಷೇಪಕ್ಷೇತ್ರ ಪುನರ್ವಿಂಗಡಣೆಗೆ ಕಾಂಗ್ರೆಸ್ ನಾಲ್ಕು ಅಂಶಗಳ ಸೂತ್ರ; 543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿ, 25 ವರ್ಷ ಬದಲಾವಣೆಗೆ ವಿರಾಮ!ನನಗೂ ಮೊಹಮ್ಮದ್‌ ಸಿರಾಜ್‌ ಆಟ ಇಷ್ಟ, ಆದರೆ ನಮ್ಮ ಇಷ್ಟಕಷ್ಟಗಳಿಗೆ ಇಲ್ಲಿ ಬೆಲೆಯಿಲ್ಲ: ಕಪಿಲ್‌ ದೇವ್ಮಣಿಪುರದಲ್ಲಿ ಕಳ್ಳಭಟ್ಟಿ ದುರಂತ: 15 ಮಂದಿ ಸಾವು, 150ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು; ಸಾವಿನ ಸಂಖ್ಯೆ ಏರಿಕೆಯಾಗುವ ಆತಂಕವಿವಾದಾತ್ಮಕ ಭಾಷಣ : ಪ್ರತಾಪ್ ಸಿಂಹಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಕ್ರಿಮಿನಲ್ ಪ್ರಕರಣ ರದ್ದತಿಗೆ ಅರ್ಜಿ ತಿರಸ್ಕಾರಕಾವೇರಿ ವಿವಾದ: ತಮಿಳುನಾಡಿನ ಹೆಚ್ಚುವರಿ ನೀರಿನ ಬೇಡಿಕೆಗೆ ಸುಪ್ರೀಂ ಕೋರ್ಟ್ ತಡೆAPEC ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯ ವಾಗ್ದಾಳಿ; ಭಾರತದ ಸದಸ್ಯತ್ವದ ಕಥೆ ಏನಾಯ್ತು?ಬಸವಣ್ಣನವರಿಗೆ ಅವಮಾನ ಮಾಡಿದರೇನಂತೆ; ಸೂರ್ಯನತ್ತ ಮುಖಮಾಡಿ ಉಗಿದಂತೆ

ಕಿವೀಸ್‌ ವಿರುದ್ಧ ಕನ್ನಡಿಗ ಕೆ.ಎಲ್‌ ರಾಹುಲ್‌ ಅಬ್ಬರ, ಅಮೋಘ ಶತಕ – ಐತಿಹಾಸಿಕ ದಾಖಲೆ

ಕಿವೀಸ್‌ ವಿರುದ್ಧ ಕನ್ನಡಿಗ ಕೆ.ಎಲ್‌ ರಾಹುಲ್‌ ಅಬ್ಬರ, ಅಮೋಘ ಶತಕ – ಐತಿಹಾಸಿಕ ದಾಖಲೆ

ವೆಲ್ಲಿಂಗ್ಟನ್‌: ನ್ಯೂಜಿಲೆಂಡ್‌ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ ಕನ್ನಡಿಗ ಕೆ.ಎಲ್‌ ರಾಹುಲ್‌ ಐತಿಹಾಸಿ ದಾಖಲೆ ಬರೆದಿದ್ದಾರೆ. ʻಸೇನಾʼ ದೇಶಗಳಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಭಾರತೀಯ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ರಾಹುಲ್‌ ಪಾತ್ರವಾಗಿದ್ದಾರೆ. ಜೊತೆಗೆ ʻಸೇನಾʼ ದೇಶಗಳಲ್ಲಿ ಆರಂಭಿಕನಾಗಿ ಅತಿಹೆಚ್ಚು ಶತಕ ಗಳಿಸಿದ ಭಾರತೀಯರ ಪಟ್ಟಿಯಲ್ಲಿ 2ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಹೌದು. 3ನೇ ದಿನದಾಟದಲ್ಲಿ ಅಮೋಘ ಪ್ರದರ್ಶನ ನೀಡಿದ ಕನ್ನಡಿಗ ರಾಹುಲ್‌, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದ ನಾಲ್ಕು ದೇಶಗಳಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಭಾರತೀಯ ಆರಂಭಿಕ ಆಟಗಾರ ಎನಿಸಿಕೊಂಡರು. ಬೇಸಿನ್ ರಿಸರ್ವ್‌ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ 13ನೇ ಟೆಸ್ಟ್ ಶತಕ ದಾಖಲಿಸಿದ ಬಳಿಕ ಈ ಸಾಧನೆಗೆ ಪಾತ್ರರಾದರು. ಈ ಇನ್ನಿಂಗ್ಸ್‌ನಲ್ಲಿ ಒಟ್ಟು 290 ಎಸೆತಗಳನ್ನು ಎದುರಿಸಿದ ರಾಹುಲ್‌ 136 ರನ್‌ (2 ಸಿಕ್ಸರ್‌, 9 ಬೌಂಡರಿ) ಚಚ್ಚಿ ಔಟಾದರು.

ದಿಗ್ಗಜರ ಎಲೈಟ್‌ ಲಿಸ್ಟ್‌ ಸೇರಿಕೊಂಡ ರಾಹುಲ್‌
ಅಷ್ಟೇ ಅಲ್ಲದೇ ಈ ಶತಕದೊಂದಿಗೆ ʻಸೇನಾʼ ದೇಶಗಳಲ್ಲಿ ಟೆಸ್ಟ್‌ ಶತಕ ಬಾರಿಸಿದ ಏಷ್ಯನ್‌ ಬ್ಯಾಟರ್‌ಗಳ ಎಲೈಟ್‌ ಪಟ್ಟಿಗೂ ರಾಹುಲ್‌ ಸೇರಿಕೊಂಡರು. 34 ವರ್ಷದ ಕೆ.ಎಲ್‌ ರಾಹುಲ್‌ ಅವರು, ಮೊಹಮ್ಮದ್ ಅಜರುದ್ದೀನ್, ಸಚಿನ್ ತೆಂಡೂಲ್ಕರ್, ಸಯೀದ್ ಅನ್ವರ್, ರಾಹುಲ್ ದ್ರಾವಿಡ್, ಯೂನಿಸ್ ಖಾನ್, ಕುಮಾರ್ ಸಂಗಕ್ಕಾರ ಮತ್ತು ವಿರಾಟ್ ಕೊಹ್ಲಿ ನಂತರ ಈ ಸಾಧನೆ ಮಾಡಿದ 8ನೇ ಏಷ್ಯನ್ ಬ್ಯಾಟ್ಸ್‌ಮನ್ ಆದರು. ಒಟ್ಟಾರೆಯಾಗಿ ಈ ಮೈಲಿಗಲ್ಲು ತಲುಪಿದ 5ನೇ ಬ್ಯಾಟರ್‌ ಎಂಬ ಹೆಗ್ಗಳಿಗೂ ಪಾತ್ರರಾದರು.

ಸೇನಾ ದೇಶಗಳಲ್ಲಿ ಆರಂಭಿಕನಾಗಿ ಅತಿಹೆಚ್ಚು ಶತಕ ಗಳಿಸಿದ ಭಾರತೀಯರ ಪಟ್ಟಿ
* ಸುನೀಲ್‌ ಗವಾಸ್ಕರ್‌ – 8
* ಕೆ.ಎಲ್‌ ರಾಹುಲ್‌ – 7
* ವಿನೋದ್‌ ಮಂಕಡ್‌ – 3
* ರವಿಶಾಸ್ತ್ರಿ – 3
* ವೀರೇಂದ್ರ ಸೆಹ್ವಾಗ್‌ – 3
* ಯಶಸ್ವಿ ಜೈಸ್ವಾಲ್‌ – 3

ʻಸೇನಾʼ ಕ್ರೀಡಾಂಗಣದಲ್ಲಿ ಕನ್ನಡಿಗನ ಸಾಮರ್ಥ್ಯಕ್ಕೆ ಸಾಕ್ಷಿಯಾದ ಶತಕಗಳ ಪಟ್ಟಿ

ಸಿಡ್ನಿಯಲ್ಲಿ – 110 ರನ್‌
ಕೊಲಂಬೊದಲ್ಲಿ – 108 ರನ್‌
ಕಿಂಗ್ಸ್ಟನ್‌ನಲ್ಲಿ – 158 ರನ್‌
ದಿ ಓವಲ್‌ನಲ್ಲಿ – 149 ರನ್‌
ಲಾರ್ಡ್ಸ್‌ನಲ್ಲಿ – 129 ರನ್‌
ಸೆಂಚುರಿಯನ್‌ನಲ್ಲಿ – 123 ರನ್‌
ಸೆಂಚುರಿಯನ್‌ನಲ್ಲಿ – 101 ರನ್‌
ಲೀಡ್ಸ್‌ನಲ್ಲಿ – 137 ರನ್‌
ಲಾರ್ಡ್ಸ್‌ನಲ್ಲಿ – 100 ರನ್‌
ವೆಲ್ಲಿಂಗ್ಟನ್‌ನಲ್ಲಿ – 136 ರನ್‌

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು