ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಚಿನ್ನದ ಬೆಲೆ ಇಳಿಕೆಗೆ ತಮ್ಮ ಮನವಿಯೇ ಕಾರಣ ಎಂದ ಪ್ರಧಾನಿ ಮೋದಿಗೆ ಜನಸಾಮಾನ್ಯರ ಕೆಲವು ಪ್ರಶ್ನೆಗಳುಸುಪ್ರೀಂಕೋರ್ಟ್ ನ್ಯಾಯಮೂರ್ತಿಗೆ ನೀಡಬೇಕಿದ್ದ ಗೌರವ ವಂದನೆ ಓವೈಸಿಗೆ ಸಲ್ಲಿಕೆ; ಉತ್ತರ ಪ್ರದೇಶ ಪೊಲೀಸರಿಂದ ತನಿಖೆಗೆ ಆದೇಶಸರ್ಕಾರಕ್ಕೆ ಶಾಕ್: ಮೂವರು ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಎಚ್ಚರಿಕೆ!ಚರಿತ್ರೆಯ ಮೌನ ಸಾಕ್ಷಿಗಳು: ಭಾಷೆಗಳ ಗಡಿ ದಾಟಿದ ರೂಮಿ; ಪರ್ಷಿಯನ್‌ನಿಂದ ವಿಶ್ವದ ಹೃದಯಗಳವರೆಗೆ ಒಂದು ಪ್ರೇಮಯಾನಕಾರ್ಯದರ್ಶಿ ಹುದ್ದೆ | ಸಿಎಂ ಕಚೇರಿಯಿಂದ ಕರೆ ಬಂದ ನಂತರ ನಿರ್ಧರಿಸುವೆ: ತನ್ವೀರ್‌ ಸೇಠ್ದೀಪಾವಳಿ ವೇಳೆ ಪಟಾಕಿ ಸಿಡಿಸಿದ ಪ್ರಕರಣ: ಪೊಲೀಸರ ವಿರುದ್ಧ MIT ವಿದ್ಯಾರ್ಥಿಗಳಿಂದ ಸಿಎಂಗೆ ದೂರುರವಿ ಹಂಜ್ ಬಂಧನ ಸ್ವಾಗತಾರ್ಹ; ಆತನ ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಎ. ನಾರಾಯಣ ಗೌಡ ಆಗ್ರಹಡಾರ್ಕ್ ವೆಬ್‌ನಲ್ಲಿ ಅಗ್ನಿವೀರ್ ದತ್ತಾಂಶ ಮಾರಾಟಕ್ಕೆ ಯತ್ನ: 14 ವರ್ಷದ ಬಾಲಕನನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರುಬಸವ ಮಂಟಪ ಕೃತಿ ವಿವಾದ: ಲೇಖಕ ರವಿ ಹಂಜ್ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆಲಕ್ಷ ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಆರ್‌ಎಫ್ ಅಧಿಕಾರಿ –  ಅರಣ್ಯಾಧಿಕಾರಿ ವಿಶ್ವನಾಥ್ ಲೋಕಾ ಬಲೆಗೆಕಿವೀಸ್‌ ವಿರುದ್ಧ ಕನ್ನಡಿಗ ಕೆ.ಎಲ್‌ ರಾಹುಲ್‌ ಅಬ್ಬರ, ಅಮೋಘ ಶತಕ – ಐತಿಹಾಸಿಕ ದಾಖಲೆಇ-ಕೆವೈಸಿ ಯಶಸ್ವಿಯಾದರೂ ‘ನಿಧನ’ ಎಂದು ತೋರಿಸಿದ ತಂತ್ರಾಂಶ – ಗೃಹಲಕ್ಷ್ಮಿ ಯೋಜನೆಯ ಮಹಾಲೋಪಡಿ.1ರೊಳಗೆ ರೈತರ ಖಾತೆಗೆ 5,000 ರೂ. ಬರ ಪರಿಹಾರ – ಡಾ. ಜಿ. ಪರಮೇಶ್ವರ್ಹೈದರಾಬಾದ್‌ ಕಾಂಗ್ರೆಸ್ ಖಾತೆ ನಿರ್ಬಂಧ ಮೆಟಾ ಕಚೇರಿ – ಧ್ವಂಸಗೊಳಿಸಿದ ಕಾರ್ಯಕರ್ತರುಹೊಸ ಪಾಸ್‌ಪೋರ್ಟ್‌ಗಾಗಿ ಶೇಖ್‌ ಹಸೀನಾ ಮತ್ತೊಮ್ಮೆ ಮನವಿ; ಬಾಂಗ್ಲಾದೇಶ ಸರ್ಕಾರಕ್ಕೆ ತುರ್ತು ಪತ್ರಐದನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: 15 ಸಾವಿರ ರೂ. ಗೌರವಧನಕ್ಕೆ ಲಿಖಿತ ಆದೇಶಕ್ಕೆ ಪಟ್ಟುಬಿಜೆಪಿ ಶಾಸಕರ ನಡೆಗೆ ವಿಜಯೇಂದ್ರ ಗರಂ: ಸಿಎಂ ಔತಣಕೂಟದಲ್ಲಿ ಭಾಗವಹಿಸಿದ್ದಕ್ಕೆ ಆಕ್ಷೇಪಕ್ಷೇತ್ರ ಪುನರ್ವಿಂಗಡಣೆಗೆ ಕಾಂಗ್ರೆಸ್ ನಾಲ್ಕು ಅಂಶಗಳ ಸೂತ್ರ; 543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿ, 25 ವರ್ಷ ಬದಲಾವಣೆಗೆ ವಿರಾಮ!ನನಗೂ ಮೊಹಮ್ಮದ್‌ ಸಿರಾಜ್‌ ಆಟ ಇಷ್ಟ, ಆದರೆ ನಮ್ಮ ಇಷ್ಟಕಷ್ಟಗಳಿಗೆ ಇಲ್ಲಿ ಬೆಲೆಯಿಲ್ಲ: ಕಪಿಲ್‌ ದೇವ್ಮಣಿಪುರದಲ್ಲಿ ಕಳ್ಳಭಟ್ಟಿ ದುರಂತ: 15 ಮಂದಿ ಸಾವು, 150ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು; ಸಾವಿನ ಸಂಖ್ಯೆ ಏರಿಕೆಯಾಗುವ ಆತಂಕ

ಸರ್ಕಾರಕ್ಕೆ ಶಾಕ್: ಮೂವರು ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಎಚ್ಚರಿಕೆ!

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಸರ್ಕಾರಕ್ಕೆ ಶಾಕ್: ಮೂವರು ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಎಚ್ಚರಿಕೆ!

ಚಿಕ್ಕಮಗಳೂರು ಜನರ ಜೀವದ ಜೊತೆ ಚೆಲ್ಲಾಟ ಬೇಡ; ಅರಣ್ಯ ಇಲಾಖೆ ಕಾರ್ಯಾಚರಣೆಗೆ ಶಾಸಕರ ತೀವ್ರ ಆಕ್ಷೇಪ

ಚಿಕ್ಕಮಗಳೂರು: ಮಲೆನಾಡಿನ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷದ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ, ಹಾಸನ ಜಿಲ್ಲೆಯಿಂದ ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಪ್ರಯತ್ನ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಈ ಕಾರ್ಯಾಚರಣೆಯಿಂದ ಚಿಕ್ಕಮಗಳೂರು ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಮತ್ತಷ್ಟು ಅಪಾಯ ಸೃಷ್ಟಿಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿರುವ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು, ಅರಣ್ಯ ಇಲಾಖೆಯ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳಾಂತರ ಪ್ರಕ್ರಿಯೆ ಮುಂದುವರಿದರೆ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸುವುದಾಗಿಯೂ ಎಚ್ಚರಿಸಿದ್ದಾರೆ.

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಹಾಗೂ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಜಂಟಿ ಸುದ್ದಿಗೋಷ್ಠಿ ನಡೆಸಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅಲ್ಲಿಂದ ಆನೆಗಳನ್ನು ಭದ್ರಾ ಅಭಯಾರಣ್ಯದತ್ತ ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಆದರೆ, ಈ ನಿರ್ಧಾರದಿಂದ ನೇರ ಪರಿಣಾಮ ಎದುರಿಸಬೇಕಾದ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಯಾವುದೇ ಪೂರ್ವ ಸಮಾಲೋಚನೆ ನಡೆಸಿಲ್ಲ ಎಂಬುದು ಶಾಸಕರ ಪ್ರಮುಖ ಆಕ್ಷೇಪವಾಗಿದೆ.

ನವೆಂಬರ್ 25ರಂದು ಅರಣ್ಯ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಿಗದಿಯಾಗಿತ್ತು. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಚರ್ಚೆ ನಡೆಸಬೇಕಿತ್ತು. ಆದರೆ, ಸಭೆಗೂ ಮುನ್ನವೇ ಎಸಿಸಿಎಫ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿರುವುದು ಸರಿಯಲ್ಲ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಯನಾ ಮೋಟಮ್ಮ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಂದೇಶ ಕಳುಹಿಸಿ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ. ತಮ್ಮ ಕ್ಷೇತ್ರದ ಜನರ ಸುರಕ್ಷತೆಯನ್ನು ಕಡೆಗಣಿಸಿ ಯಾವುದೇ ನಿರ್ಧಾರ ಕೈಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನೇ ಸುದ್ದಿಗೋಷ್ಠಿಯಲ್ಲಿ ಪ್ರದರ್ಶಿಸಿದ ನಯನಾ ಮೋಟಮ್ಮ, ಅಧಿಕಾರಕ್ಕಿಂತ ಜನರ ಹಿತವೇ ಮುಖ್ಯ ಎಂಬ ಸಂದೇಶ ನೀಡಿದ್ದಾರೆ. ಕಾಡಾನೆಗಳನ್ನು ಅವು ಬಂದಿರುವ ಪ್ರದೇಶಕ್ಕೆ ಹಿಂದಿರುಗಿಸಬೇಕು. ಇಲ್ಲದಿದ್ದರೆ ರಾಜೀನಾಮೆ ಸಲ್ಲಿಸುವುದಾಗಿ ಎಚ್ಚರಿಸಿದ್ದಾರೆ.

ಮಲೆನಾಡಿನಲ್ಲಿ ಈಗಾಗಲೇ ಸಾವಿನ ಸರಣಿ: ರಾಜೇಗೌಡ ಕಳವಳ
ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ತಮ್ಮ ಕ್ಷೇತ್ರ ಸೇರಿದಂತೆ ಮೂಡಿಗೆರೆ ಮತ್ತು ಚಿಕ್ಕಮಗಳೂರು ಭಾಗಗಳಲ್ಲಿ ವನ್ಯಜೀವಿಗಳ ಹಾವಳಿಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ತಿಳಿಸಿದರು.

ಶೃಂಗೇರಿ ಕ್ಷೇತ್ರದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದಂತೆ 13 ಮಂದಿ ಮೃತಪಟ್ಟಿದ್ದರೆ, ಮೂಡಿಗೆರೆ ಭಾಗದಲ್ಲಿ ಮೂವರು ಜೀವ ಕಳೆದುಕೊಂಡಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಹಾಸನದಿಂದ ಸುಮಾರು 54 ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಂಡಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.

ಮೂಡಿಗೆರೆ ತಾಲೂಕಿನಲ್ಲಿ ಈಗಾಗಲೇ 50ಕ್ಕೂ ಅಧಿಕ ಕಾಡಾನೆಗಳ ಸಂಚಾರವಿದೆ. ಇಂತಹ ಸಂದರ್ಭದಲ್ಲಿ ಹೆಚ್ಚುವರಿ ಆನೆಗಳನ್ನು ಈ ಭಾಗದತ್ತ ಓಡಿಸುವುದರಿಂದ ಸ್ಥಳೀಯರ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳಬಹುದು. ಸುಮಾರು 492 ಚದರ ಕಿಲೋಮೀಟರ್ ವಿಸ್ತೀರ್ಣ ಹೊಂದಿರುವ ಭದ್ರಾ ಅಭಯಾರಣ್ಯದಲ್ಲಿ ಈಗಾಗಲೇ ಸಾಕಷ್ಟು ವನ್ಯಜೀವಿಗಳಿವೆ. ರಾಜ್ಯದಲ್ಲಿ ವಿಶಾಲವಾದ ಇತರೆ ಅರಣ್ಯ ಪ್ರದೇಶಗಳಿದ್ದರೂ ಭದ್ರಾ ಅಭಯಾರಣ್ಯವನ್ನೇ ಏಕೆ ಆಯ್ಕೆ ಮಾಡಲಾಗಿದೆ ಎಂಬುದಕ್ಕೆ ಅರಣ್ಯ ಇಲಾಖೆ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಅರಣ್ಯ ಸಚಿವರು ಕಾರ್ಯಾಚರಣೆ ನಿಲ್ಲಿಸುವ ಭರವಸೆ ನೀಡಿದ್ದಾರೆ. ಆದರೂ ಸ್ಥಳಾಂತರ ಮುಂದುವರಿದರೆ ಅದನ್ನು ಸಹಿಸುವುದಿಲ್ಲ. ಜನರ ಹಿತಕ್ಕಾಗಿ ಅಗತ್ಯವಿರುವ ಎಲ್ಲ ಹೋರಾಟಕ್ಕೂ ಸಿದ್ಧ ಎಂದು ರಾಜೇಗೌಡ ಎಚ್ಚರಿಕೆ ನೀಡಿದರು.

ಸರ್ಕಾರಕ್ಕಿಂತ ಜನರೇ ಮುಖ್ಯ: ಮೂವರ ಒಕ್ಕೊರಲ ನಿರ್ಧಾರ
ಮೂವರು ಶಾಸಕರು ಕಾಡಾನೆಗಳ ಸ್ಥಳಾಂತರ ವಿಚಾರದಲ್ಲಿ ಒಗ್ಗಟ್ಟಿನ ನಿಲುವು ಪ್ರಕಟಿಸಿದ್ದು, ಸ್ಥಳೀಯ ಜನರ ಒಪ್ಪಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚೆ ಇಲ್ಲದೆ ಇಂತಹ ನಿರ್ಧಾರಗಳನ್ನು ಜಾರಿಗೊಳಿಸಬಾರದು ಎಂದು ಆಗ್ರಹಿಸಿದ್ದಾರೆ.

ಕಾಡಾನೆಗಳನ್ನು ಬೇಲೂರು ಭಾಗಕ್ಕೆ ಹಿಂದಿರುಗಿಸಬೇಕು. ಇಲ್ಲದಿದ್ದರೆ ಮರುದಿನವೇ ಮೂವರು ಶಾಸಕರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ಮಲೆನಾಡಿನಲ್ಲಿ ಈಗಾಗಲೇ ಜೀವ ಮತ್ತು ಆಸ್ತಿಪಾಸ್ತಿ ನಷ್ಟದಿಂದ ಕಂಗಾಲಾಗಿರುವ ಜನರಿಗೆ ಮತ್ತೊಂದು ಸಂಕಷ್ಟ ಎದುರಾಗಬಾರದು ಎಂಬುದು ಶಾಸಕರ ವಾದ. ಆದರೆ, ಹಾಸನ ಭಾಗದಲ್ಲಿನ ಮಾನವ-ಕಾಡಾನೆ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ಪ್ರಯತ್ನದ ನಡುವೆಯೇ ಎರಡು ಜಿಲ್ಲೆಗಳ ನಡುವೆ ಹೊಸ ಬಿಕ್ಕಟ್ಟು ಸೃಷ್ಟಿಯಾಗುವ ಲಕ್ಷಣಗಳು ಗೋಚರಿಸಿವೆ.

ಒಟ್ಟಿನಲ್ಲಿ ಕಾಡಾನೆಗಳ ಸ್ಥಳಾಂತರದ ನಿರ್ಧಾರ ಇದೀಗ ಅರಣ್ಯ ಇಲಾಖೆಯ ಕಾರ್ಯಾಚರಣೆಯನ್ನಷ್ಟೇ ಅಲ್ಲದೆ, ಆಡಳಿತಾರೂಢ ಪಕ್ಷದೊಳಗಿನ ಜನಪ್ರತಿನಿಧಿಗಳ ನಡುವಿನ ಅಸಮಾಧಾನವನ್ನೂ ಬಹಿರಂಗಪಡಿಸಿದೆ. ಮೂವರು ಶಾಸಕರ ರಾಜೀನಾಮೆ ಎಚ್ಚರಿಕೆಗೆ ಸರ್ಕಾರ ಯಾವ ರೀತಿ ಸ್ಪಂದಿಸಲಿದೆ ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ನಿರ್ಧಾರವಾಗಲಿವೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು