ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಜಿಲ್ಲಾಧಿಕಾರಿ ವಿರುದ್ಧದ ಆರೋಪ – ಪೊಲೀಸ್ ನೋಟಿಸ್‌ಗೆ ಡೋಂಟ್‌ ಕೇರ್ ಎಂದ ಕುಮಾರಸ್ವಾಮಿಬಾಂಗ್ಲಾದೇಶಕ್ಕೆ ಶೇಖ್ ಹಸೀನಾ: ಭಾರತದಿಂದ ವಾಪಸ್; ರಾಷ್ಟ್ರೀಯ ವಿಮಾನವೇ ಬೇಕೆಂಬ ಬೇಡಿಕೆ; ಬಂಧನಕ್ಕೆ ಸಿದ್ಧವಾಗಿರುವ ಸರ್ಕಾರ!ರಾಜಧಾನಿಯಲ್ಲಿ ಕುಡಿದು ವಾಹನ ಚಾಲನೆ – ಒಂದೇ ವಾರದಲ್ಲಿ 744 ಕೇಸ್‌28 ಎಸೆತಗಳಲ್ಲಿ ಶತಕ, 15ನೇ ವಯಸ್ಸಿನಲ್ಲೇ ವಿಶ್ವದಾಖಲೆ: ವೈಭವ್ ಸೂರ್ಯವಂಶಿ ಎಂಬ ಕ್ರಿಕೆಟ್ ವಿಸ್ಮಯ!ಆಶಾ ಕಾರ್ಯಕರ್ತೆಯರ ಬೇಡಿಕೆ ಇಡೇರಿಸಿ ಇಲ್ಲವಾದರೆ ಕರ್ನಾಟಕ ಬಂದ್​​​ – ವಾಟಾಳ್‌ ನಾಗರಾಜ್‌ನ.26ರಂದು ಸಂಯುಕ್ತ ಕಿಸಾನ್ ಮೋರ್ಚಾದಿಂದ ದೇಶವ್ಯಾಪಿ ಪ್ರತಿಭಟನೆ; ಮುಕ್ತ ವ್ಯಾಪಾರ ಒಪ್ಪಂದ ರದ್ದತಿಗೆ ಆಗ್ರಹಇಸ್ರೇಲ್ ದೇಶದಿಂದ ಶಸ್ತ್ರಾಸ್ತ್ರ ಖರೀದಿಗೆ ರಾಹುಲ್ ಗಾಂಧಿ ಬೆಂಬಲ: ಎಡಪಕ್ಷಗಳ ನಾಯಕರಿಂದ ಟೀಕೆಅಪ್ಪನನ್ನು ಕೊಲ್ಲಲೆಂದೇ ಸೆಕ್ಯುರಿಟಿ ತೆಗೆದುಹಾಕಲಾಗಿತ್ತು: ಅಂದಿನ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರೋಪಪಾಲಕ್ಕಾಡ್ ಶಾಲೆಯಲ್ಲಿ ಸಹಪಾಠಿಯಿಂದ ಗುಂಡಿನ ದಾಳಿ: 9ನೇ ತರಗತಿ ವಿದ್ಯಾರ್ಥಿಗೆ ಗಾಯ; ವಿದ್ಯಾರ್ಥಿ ವಶಕ್ಕೆಎರಡು ಮಕ್ಕಳಿರುವ ಹೆಂಗಸನ್ನು ಮದುವೆಯಾಗುವುದಾಗಿ ಹಟ ಹಿಡಿದ ಮಗನನ್ನು ಕೊಂದು ಮುಗಿಸಿದ ತಾಯಿಬೆಂಗಳೂರಿನ ಇತಿಹಾಸ, ಕಲೆ, ಸಾಹಿತ್ಯಕ್ಕೆ ಹೊಸ ವೇದಿಕೆ: ಡಿಸೆಂಬರ್ 4ರಿಂದ 10 ದಿನಗಳ ಬೆಂಗಳೂರು ಜಾತ್ರೆಕೆಪಿಎಸ್‌ಸಿ ನೇಮಕಾತಿ ಹಗರಣ: 384 ಕೆಎಎಸ್ ಅಧಿಕಾರಿಗಳ ಆಯ್ಕೆಯ ಮೇಲೂ ಅನುಮಾನದ ನೆರಳು; ತನಿಖೆಗೆ ಹೈಕೋರ್ಟ್ ಆದೇಶಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್ ಭರವಸೆಹಿಜಾಬ್ ನಿಯಮಕ್ಕೆ ಸೆಡ್ಡು ಹೊಡೆದ ಗಾಯಕಿಗೆ 74 ಚಡಿಯೇಟು; ಇರಾನ್‌ನಲ್ಲಿ ಕಠಿಣ ಶಿಕ್ಷೆಲಾಭ ಹೆಚ್ಚುತ್ತಿದೆ, ಉದ್ಯೋಗ ಮತ್ತು ವೇತನ ಏಕೆ ಹೆಚ್ಚುತ್ತಿಲ್ಲ? ಉದ್ಯಮ ವಲಯಕ್ಕೆ ಪ್ರಧಾನಿ ಮೋದಿ ನೇರ ಪ್ರಶ್ನೆಸಮತಾವಾದಿ ಬಸವ ಸಿದ್ದಾಂತದ ಮೇಲೆ ಸನಾತನಿಗಳ ದಾಳಿಯೆಮನ್‌ನಲ್ಲಿ ಸೌದಿ ಅರೇಬಿಯಾದ ವೈಮಾನಿಕ ದಾಳಿ: 25 ಮಂದಿ ಸಾವು ಅಥವಾ ನಾಪತ್ತೆ; ಆರು ಜನರಿಗೆ ಗಾಯಕರ್ನಾಟಕದ ಹಲವೆಡೆ ಮೋಡ ಕವಿದ ವಾತಾವರಣ, ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ಮುಂದಿನ 4 ದಿನಗಳ ಹವಾಮಾನ ಹೇಗಿರಲಿದೆ?ಪುಣೆಯ ಟೆಕ್ಕಿಯಿಂದ ಲಿವ್‌-ಇನ್‌ ಸಂಗಾತಿಯ ಹತ್ಯೆ; ಇಡೀ ರಾತ್ರಿ ಮೃತದೇಹದ ಪಕ್ಕದಲ್ಲೇ ಕುಳಿತಿದ್ದ ಆರೋಪಿ, ಬೆಳಗ್ಗೆ ಪೊಲೀಸರಿಗೆ ಕರೆಆನೆಗಳನ್ನು ಸ್ಥಳಾಂತರಿಸುವುದರಿಂದ ಸಮಸ್ಯೆ ಬಗೆಹರಿಯದು; ಅವು ನಡೆದಾಡುವ ದಾರಿಗಳ ಒತ್ತುವರಿ ತೆರವುಗೊಳಿಸಿ: ರಮ್ಯಾ ದಿವ್ಯ ಸ್ಪಂದನ

ರಾಜಧಾನಿಯಲ್ಲಿ ಕುಡಿದು ವಾಹನ ಚಾಲನೆ – ಒಂದೇ ವಾರದಲ್ಲಿ 744 ಕೇಸ್‌

ರಾಜಧಾನಿಯಲ್ಲಿ ಕುಡಿದು ವಾಹನ ಚಾಲನೆ – ಒಂದೇ ವಾರದಲ್ಲಿ 744 ಕೇಸ್‌

ಬೆಂಗಳೂರು: ನಗರದಲ್ಲಿ (Bengaluru) ರಸ್ತೆ ಅಪಘಾತಗಳನ್ನು ತಪ್ಪಿಸಲು ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಗೆ ಬ್ರೇಕ್ ಹಾಕಲು ಬೆಂಗಳೂರು ಸಂಚಾರ ಪೊಲೀಸರು (Traffic Police) ವಿಶೇಷ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಕಳೆದ ಒಂದು ವಾರದ ಅವಧಿಯಲ್ಲಿ ನಡೆಸಿದ ತಪಾಸಣೆಯಲ್ಲಿ ಕುಡಿದು ವಾಹನ ಚಲಾಯಿಸುತ್ತಿದ್ದ ಬರೋಬ್ಬರಿ 744 ಸವಾರರ ವಿರುದ್ಧ ‘ಡ್ರಿಂಕ್‌ ಆ್ಯಂಡ್ ಡ್ರೈವ್’ (Drunk and Drive) ಪ್ರಕರಣ ದಾಖಲಾಗಿದೆ.

ನವೆಂಬರ್ 16ರಿಂದ 22ರವರೆಗೆ ನಗರದ ಎಲ್ಲಾ ಸಂಚಾರಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈ ವಿಶೇಷ ತಪಾಸಣಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ಏಳು ದಿನಗಳಲ್ಲಿ ಪೊಲೀಸರು ಒಟ್ಟು 42,068 ವಾಹನ ಚಾಲಕರನ್ನು ತಪಾಸಣೆಗೆ ಒಳಪಡಿಸಿದ್ದು, ಇದರಲ್ಲಿ 744 ಮಂದಿ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ತಮ್ಮ ಜೀವದ ಜೊತೆಗೆ ಇತರ ಸವಾರರು ಮತ್ತು ಪಾದಚಾರಿಗಳ ಪ್ರಾಣಕ್ಕೂ ಕುತ್ತು ತರುವ ರೀತಿಯಲ್ಲಿ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅತಿವೇಗದ ಸವಾರರಿಗೂ ಬಿಸಿ
ಮದ್ಯಪಾನ ಚಾಲನೆ ಮಾತ್ರವಲ್ಲದೆ, ನಗರದ ರಸ್ತೆಗಳಲ್ಲಿ ಅತಿವೇಗವಾಗಿ (Over-speeding) ವಾಹನ ಚಲಾಯಿಸುವವರ ವಿರುದ್ಧವೂ ಸಂಚಾರ ಪೊಲೀಸರು ಚಾಟಿ ಬೀಸಿದ್ದಾರೆ. ಒಂದು ವಾರದ ಈ ಕಾರ್ಯಾಚರಣೆಯಲ್ಲಿ ಅತಿವೇಗದ ಚಾಲನೆಗಾಗಿ ಒಟ್ಟು 239 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಅಪಘಾತಗಳನ್ನು ನಿಯಂತ್ರಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆಯನ್ನು ಮುಂದೆಯೂ ಮುಂದುವರಿಸಲಾಗುವುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಮತ್ತು ಮದ್ಯ ಸೇವಿಸಿದಾಗ ಯಾವುದೇ ಕಾರಣಕ್ಕೂ ವಾಹನದ ಸ್ಟೇರಿಂಗ್ ಅಥವಾ ಹ್ಯಾಂಡಲ್ ಹಿಡಿಯಬಾರದು ಎಂದು ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು