ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಆಸ್ತಿಗಾಗಿ ಅಕ್ಕನನ್ನೇ ಕೊಂದ ವಕೀಲ; ಬೆಂಗಳೂರಿನಲ್ಲಿ ಮಕ್ಕಳ ಎದುರೇ ಮಹಿಳೆಯ ಹತ್ಯೆ, ಆರೋಪಿ ಪರಾರಿನಂದಿನಿ ಮೊಸರಿನ ಬೆಲೆ ಕೆ.ಜಿಗೆ ₹2 ಇಳಿಕೆ; ನವೆಂಬರ್ 29ರಿಂದ ಹೊಸ ದರ ಜಾರಿಬಸವ ಸಂಸ್ಕೃತಿಯ ಮೇಲಿನ ದಾಳಿಗೆ ಖಂಡನೆ; ಮುಂದುವರಿದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದ ಮಠಾಧಿಪತಿಗಳುಸಾಕಾಣಿಕೆ ದರ ಕೆ.ಜಿಗೆ ₹20ಕ್ಕೆ ಹೆಚ್ಚಿಸಿ; ಕಂಪನಿಗಳ ಶೋಷಣೆ ತಡೆಯಿರಿ: ಕೋಳಿ ಸಾಕಾಣಿಕೆದಾರರಿಂದ ಮುಖ್ಯಮಂತ್ರಿಗೆ ಮನವಿಮಂಗಳೂರಿನಲ್ಲಿ ಡೆಲಾಯ್ಟ್ ಕಚೇರಿ ಆರಂಭ: 1,000ಕ್ಕೂ ಹೆಚ್ಚು ಉದ್ಯೋಗಿಗಳ ನೇಮಕಕ್ಕೆ ಯೋಜನೆ; ‘ಬಿಯಾಂಡ್ ಬೆಂಗಳೂರು’ ಅಭಿಯಾನಕ್ಕೆ ಬಲಇಸ್ರೇಲ್‌ನಲ್ಲಿ ನಿಗೂಢವಾಗಿ ಮೃತಪಟ್ಟ ಮಂಗಳೂರಿನ ವ್ಯಕ್ತಿ: ಒಂದು ತಿಂಗಳ ಬಳಿಕ ಸ್ವಗ್ರಾಮಕ್ಕೆ ಮೃತದೇಹ ರವಾನೆ2016ರ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣ: ಮೂವರು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆಎಸ್‌ಐಆರ್‌ ವಿವಾದ: ತಂದೆಯ ಹೆಸರು ಮತದಾರರ ಪಟ್ಟಿಯಿಂದ ತೆಗೆದಿದ್ದಕ್ಕೆ ಎರಡೂವರೆ ತಿಂಗಳ ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ ಭಾರತಕ್ಕೆ ಶೇ.17ರಷ್ಟು ಸುಂಕ! ಒಪ್ಪಂದ ವಿಫಲವಾದರೆ ಶೇ.25ಕ್ಕೆ ಏರಿಕೆ: ಅಮೆರಿಕದ ಪ್ರಸ್ತಾವನೆಜಾರ್ಖಂಡ್‌ | ಎಸ್‌ಐಆರ್‌ ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸಲು ವಿಧಾನಸಭೆ ನಿರ್ಣಯವಾಲ್ಮೀಕಿ ನಿಗಮ ಪ್ರಕರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್; ಆರೋಪಿಗಳ ಪಟ್ಟಿಯಿಂದ ಹೆಸರು ಕೈಬಿಟ್ಟು ಸಾಕ್ಷಿಯಾಗಿ ಸೇರ್ಪಡೆ!ರಾಹುಲ್ ಗಾಂಧಿ ವಿರುದ್ಧದ ತನಿಖೆ ಆದೇಶಕ್ಕೆ ಸುಪ್ರೀಂಕೋರ್ಟ್ ಬ್ರೇಕ್; ಮರು ವಿಚಾರಣೆಗೆ ಹೈಕೋರ್ಟ್‌ಗೆ ಸೂಚನೆಪುಣೆ ನ್ಯಾಯಾಲಯದ ಹೊರಗೆ ಕೊಲೆ ಆರೋಪಿ ಮೇಲೆ ದಾಳಿ: ಕುಡುಗೋಲುಗಳಿಂದ ಹಲ್ಲೆ, ಗುಂಡಿನ ದಾಳಿಬೆಂಗಳೂರು: ₹5.72 ಕೋಟಿ ಮೌಲ್ಯದ 5.72 ಕೆ.ಜಿ. ಎಂಡಿಎಂಎ ವಶ; ಅಂತಾರಾಜ್ಯ ಮಾದಕವಸ್ತು ಜಾಲ ಭೇದಿಸಿದ ಪೊಲೀಸರುನಾಲ್ಕು ತಿಂಗಳಿಂದ ಸಂಬಳವಿಲ್ಲದೆ ಪರದಾಟ: ನಮ್ಮ ಕ್ಲಿನಿಕ್ ವೈದ್ಯರು, ಸಿಬ್ಬಂದಿಯ ಗೋಳು ಕೇಳುವವರ್ಯಾರು?ಕೇರಳ ಮತ್ತು ಮಲಯಾಳಿಗಳ ವಿರುದ್ಧ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಕೊಡಗಿನಲ್ಲಿ ಪ್ರತಿಭಟನೆಯ ಎಚ್ಚರಿಕೆಅಕ್ಕಾ ಕೇಳವ್ವ: ಶರಣೆ ಲಿಂಗಮ್ಮನ ಸಂಸಾರವನರಿವ ಬೋಧೆಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್; ಜಾಮೀನು ರದ್ದು, ಎರಡು ವಾರಗಳಲ್ಲಿ ಶರಣಾಗತಿಗೆ ಸೂಚನೆಒಂದೇ ದಿನದಲ್ಲಿ 4.16 ಲಕ್ಷ ಮತದಾರರ ಅರ್ಜಿ; ಒಂದೇ ವಿಳಾಸದಿಂದ 44 ಅರ್ಜಿಗಳು: ಉತ್ತರ ಪ್ರದೇಶದಲ್ಲಿ ಮತದಾರರ ನೋಂದಣಿಯಲ್ಲಿ ಅಸಾಮಾನ್ಯ ಏರಿಕೆ ಪತ್ತೆಸ್ವತಂತ್ರ ಭಾರದ್ವಾಜ್ ವಿರುದ್ಧ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಪೋಸ್ಟ್‌ ಹಾಕಿದ ಆರೋಪ: ದೆಹಲಿ ಪೊಲೀಸರಿಂದ ವರದಿ ಕೇಳಿದ ನ್ಯಾಯಾಲಯ

ಎಸ್‌ಐಆರ್‌ ವಿವಾದ: ತಂದೆಯ ಹೆಸರು ಮತದಾರರ ಪಟ್ಟಿಯಿಂದ ತೆಗೆದಿದ್ದಕ್ಕೆ ಎರಡೂವರೆ ತಿಂಗಳ ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!

PPeepal Media

Peepal Media ದೇಶ

• 2 ನಿಮಿಷದ ಓದು

ಎಸ್‌ಐಆರ್‌ ವಿವಾದ: ತಂದೆಯ ಹೆಸರು ಮತದಾರರ ಪಟ್ಟಿಯಿಂದ ತೆಗೆದಿದ್ದಕ್ಕೆ ಎರಡೂವರೆ ತಿಂಗಳ ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!

ಕೂಚ್‌ಬೆಹಾರ್: ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ತಂದೆಯ ಹೆಸರು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ಕಾರಣಕ್ಕೆ ಎರಡೂವರೆ ತಿಂಗಳ ಮಗುವಿಗೆ ಜನನ ಪ್ರಮಾಣಪತ್ರ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪಶ್ಚಿಮ ಬಂಗಾಳದ ಕೂಚ್‌ಬೆಹಾರ್ ಜಿಲ್ಲೆಯ ಖಟಮಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿ ಅಮೀನಾ ಖಾತೂನ್ ಅವರು ಸೆಪ್ಟೆಂಬರ್ 9ರಂದು ದಿನ್‌ಹಟಾ ಉಪವಿಭಾಗೀಯ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಮಗುವಿನ ಜನನ ಪ್ರಮಾಣಪತ್ರ ಪಡೆಯಲು ಪತಿ ಅಬ್ದುಲ್ ಹಬೀಬ್ ಅವರೊಂದಿಗೆ ಆಸ್ಪತ್ರೆ ಹಾಗೂ ಸಂಬಂಧಪಟ್ಟ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಿದ್ದರು.

ಈ ವೇಳೆ ಪಂಚಾಯಿತಿ ಅಧ್ಯಕ್ಷರು ಅಥವಾ ಸ್ಥಳೀಯ ಶಾಸಕರಿಂದ ನಿವಾಸ ದೃಢೀಕರಣ ಪತ್ರ ತರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ದಂಪತಿ ತಿಳಿಸಿದ್ದಾರೆ. ಅದರಂತೆ ದಿನ್‌ಹಟಾ ಕ್ಷೇತ್ರದ ಶಾಸಕ ಅಜಯ್ ರಾಯ್ ಅವರನ್ನು ಅಬ್ದುಲ್ ಹಬೀಬ್ ಸಂಪರ್ಕಿಸಿದಾಗ, ಅವರ ಮನವಿಯನ್ನು ಶಾಸಕರ ಕಚೇರಿ ತಿರಸ್ಕರಿಸಿದೆ ಎಂದು ಆರೋಪಿಸಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ತಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದುಹಾಕಿರುವುದರಿಂದ ನಿವಾಸ ದೃಢೀಕರಣ ಪತ್ರ ನೀಡಲು ಸಾಧ್ಯವಿಲ್ಲ ಎಂದು ಕಚೇರಿಯ ಸಿಬ್ಬಂದಿ ತಿಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ತಾವು ಬಾಂಗ್ಲಾದೇಶದ ಪ್ರಜೆಯಾಗಿದ್ದು, ಮೊದಲು ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಸೂಚಿಸಿರುವುದಾಗಿ ಹಬೀಬ್ ಆರೋಪಿಸಿದ್ದಾರೆ.

“ನಾನು ಹುಟ್ಟಿನಿಂದಲೂ ಭಾರತದಲ್ಲೇ ವಾಸಿಸುತ್ತಿದ್ದೇನೆ. ಖಟಮಾರಿಯಲ್ಲಿರುವ ನಮ್ಮ ಮನೆಯನ್ನು ನನ್ನ ತಾತ ನಿರ್ಮಿಸಿದ್ದಾರೆ. ಅಗತ್ಯ ದಾಖಲೆಗಳನ್ನು ತೋರಿಸಿದರೂ ಅವುಗಳನ್ನು ಪರಿಗಣಿಸಿಲ್ಲ” ಎಂದು ಹಬೀಬ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಹಬೀಬ್ ಮಾತ್ರವಲ್ಲದೆ ಅವರ ಮೂವರು ಸಹೋದರಿಯರ ಹೆಸರುಗಳನ್ನೂ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಸಂಬಂಧ ಅವರು ನ್ಯಾಯಮಂಡಳಿಯ ಮೊರೆ ಹೋಗಿದ್ದು, ಅರ್ಜಿಯ ವಿಚಾರಣೆ ಇನ್ನೂ ಬಾಕಿಯಿದೆ.

ಶಿಶುವಿನ ಹಕ್ಕುಗಳ ಉಲ್ಲಂಘನೆ: ಎಪಿಸಿಆರ್ ಆಕ್ಷೇಪ

ಈ ಪ್ರಕರಣದ ಕುರಿತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಜನನ ನೋಂದಣಿ ಕಾನೂನುಬದ್ಧ ಹೊಣೆಗಾರಿಕೆಯಾಗಿದ್ದು, ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಪ್ಪಂದದ ಏಳನೇ ವಿಧಿಯ ಪ್ರಕಾರ ಪ್ರತಿಯೊಂದು ಮಗುವಿಗೂ ಜನನದ ತಕ್ಷಣ ನೋಂದಣಿ ಮತ್ತು ಕಾನೂನುಬದ್ಧ ಗುರುತಿನ ಹಕ್ಕಿದೆ ಎಂದು ಸಂಘಟನೆ ಹೇಳಿದೆ.

ಮಗುವಿನ ಜನನ ಪ್ರಮಾಣಪತ್ರ ನೀಡುವುದನ್ನು ಪೋಷಕರ ಮತದಾರರ ಪಟ್ಟಿಯಲ್ಲಿನ ಸ್ಥಾನಮಾನದೊಂದಿಗೆ ತಳುಕು ಹಾಕಬಾರದು. ಎಸ್‌ಐಆರ್‌ಗೆ ಸಂಬಂಧಿಸಿದ ಆಡಳಿತಾತ್ಮಕ ವಿವಾದದಿಂದ ನವಜಾತ ಶಿಶುವಿನ ಮೂಲಭೂತ ಹಕ್ಕುಗಳಿಗೆ ಅಡ್ಡಿಯಾಗಬಾರದು ಎಂದು APCR ಆಗ್ರಹಿಸಿದೆ. ಮಗುವಿಗೆ ತಕ್ಷಣ ಜನನ ಪ್ರಮಾಣಪತ್ರ ನೀಡುವಂತೆಯೂ ಒತ್ತಾಯಿಸಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ವರದಿ ತಿಳಿಸಿದೆ.

ಇದೇ ಜಿಲ್ಲೆಯ ಉಮ್ಮೆ ಸಲ್ಮಾ ಅವರ ಹೆಸರನ್ನೂ ಜೂನ್‌ನಲ್ಲಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಇದರಿಂದ ಪಡಿತರ ಸೌಲಭ್ಯ ಸ್ಥಗಿತಗೊಳ್ಳುವ ಸಾಧ್ಯತೆಯಿದೆ ಎಂದು ಸ್ಥಳೀಯ ಪಡಿತರ ವಿತರಕರು ತಿಳಿಸಿದ ಹಿನ್ನೆಲೆಯಲ್ಲಿ ಅವರು ಕಲ್ಕತ್ತಾ ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯದ ಅನುಮತಿಯಿಲ್ಲದೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರಕ್ಕೆ ಸೂಚಿಸಿತ್ತು.

ಎಸ್‌ಐಆರ್ ವಿರುದ್ಧ ಪಿಣರಾಯಿ ವಿಜಯನ್ ಆಕ್ರೋಶ

ಈ ಘಟನೆಗೆ ಪ್ರತಿಕ್ರಿಯಿಸಿರುವ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಎಸ್‌ಐಆರ್ ಪ್ರಕ್ರಿಯೆಯನ್ನು ಸಂಘ ಪರಿವಾರವು ಪರೋಕ್ಷವಾಗಿ ಎನ್‌ಆರ್‌ಸಿ ಕಾರ್ಯಸೂಚಿ ಜಾರಿಗೆ ತರಲು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆಯನ್ನು ತಾರತಮ್ಯ ಮತ್ತು ಮೂಲಭೂತ ಹಕ್ಕುಗಳ ನಿರಾಕರಣೆಯ ಸಾಧನವನ್ನಾಗಿ ಮಾಡಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ. ಇಂತಹ ಘಟನೆಗಳು ಆಘಾತಕಾರಿಯಾಗಿದ್ದು, ಸಂವಿಧಾನಾತ್ಮಕ ಹಕ್ಕುಗಳ ಮೇಲಿನ ದಾಳಿಯನ್ನು ಪ್ರತಿರೋಧಿಸುವ ಮೂಲಕ ಜಾತ್ಯತೀತ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂದು ಕರೆ ನೀಡಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು