ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿ ಬೆದರಿಕೆ ಆರೋಪ: ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ಸರ್ಕಾರಿ ನೌಕರರಿಗೆ 15 ದಿನಗಳ ಪಿತೃತ್ವ ರಜೆ ಘೋಷಿಸಿದ ತಮಿಳುನಾಡು ಸಿಎಂ ವಿಜಯ್ಕೇರಳದ ಜನರು, ಮಲಯಾಳಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ದೂರುಭಾರತದ ಸಂವಿಧಾನ ; ಸಮಾನತೆಯ ಋತುಗಾನಅಮೆರಿಕದ ಸುಂಕ ಸಮರ: ಭಾರತದ ಮೇಲೆ ಶೇ.25 ಸುಂಕದ ಪ್ರಸ್ತಾಪ, ಮೋದಿ ರಾಜಿಯಾಗ್ತಾರಾ?ಕಾಂಗ್ರೆಸ್ ಒಬಿಸಿ ಮೀಸಲಾತಿ ಕಿತ್ತುಕೊಂಡು ಅದನ್ನು ಮುಸ್ಲಿಮರಿಗೆ ನೀಡಲು ಬಯಸುತ್ತಿದೆ: ನರೇಂದ್ರ ಮೋದಿಕರ್ನಾಟಕ ಹಿಜಾಬ್ ಪ್ರಕರಣದೊಂದಿಗೆ ಮತ್ತೊಂದು ಅರ್ಜಿ ವಿಚಾರಣೆಗೆ; ಅಲಹಾಬಾದ್ ಹೈಕೋರ್ಟ್ ತೀರ್ಪು ಪೂರ್ವನಿದರ್ಶನವಲ್ಲ ಎಂದ ಸುಪ್ರೀಂ ಕೋರ್ಟ್ಸಂವಿಧಾನ ದಿನ 2026: ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತೆ ಚರ್ಚೆಯಲ್ಲಿಶಾರುಖ್ ಖಾನ್ ವಿರುದ್ಧ ತಿರುಚಿದ ರೀಲ್ಸ್ ವೈರಲ್; ಸಂಘಪರಿವಾರದ ಹಿನ್ನೆಲೆಯ ಕಂಟೆಂಟ್ ಕ್ರಿಯೇಟರ್‌ಗೆ ಲೀಗಲ್ ನೋಟಿಸ್ಆಸ್ತಿಗಾಗಿ ಅಕ್ಕನನ್ನೇ ಕೊಂದ ವಕೀಲ; ಬೆಂಗಳೂರಿನಲ್ಲಿ ಮಕ್ಕಳ ಎದುರೇ ಮಹಿಳೆಯ ಹತ್ಯೆ, ಆರೋಪಿ ಪರಾರಿನಂದಿನಿ ಮೊಸರಿನ ಬೆಲೆ ಕೆ.ಜಿಗೆ ₹2 ಇಳಿಕೆ; ನವೆಂಬರ್ 29ರಿಂದ ಹೊಸ ದರ ಜಾರಿಬಸವ ಸಂಸ್ಕೃತಿಯ ಮೇಲಿನ ದಾಳಿಗೆ ಖಂಡನೆ; ಮುಂದುವರಿದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದ ಮಠಾಧಿಪತಿಗಳುಸಾಕಾಣಿಕೆ ದರ ಕೆ.ಜಿಗೆ ₹20ಕ್ಕೆ ಹೆಚ್ಚಿಸಿ; ಕಂಪನಿಗಳ ಶೋಷಣೆ ತಡೆಯಿರಿ: ಕೋಳಿ ಸಾಕಾಣಿಕೆದಾರರಿಂದ ಮುಖ್ಯಮಂತ್ರಿಗೆ ಮನವಿಮಂಗಳೂರಿನಲ್ಲಿ ಡೆಲಾಯ್ಟ್ ಕಚೇರಿ ಆರಂಭ: 1,000ಕ್ಕೂ ಹೆಚ್ಚು ಉದ್ಯೋಗಿಗಳ ನೇಮಕಕ್ಕೆ ಯೋಜನೆ; ‘ಬಿಯಾಂಡ್ ಬೆಂಗಳೂರು’ ಅಭಿಯಾನಕ್ಕೆ ಬಲಇಸ್ರೇಲ್‌ನಲ್ಲಿ ನಿಗೂಢವಾಗಿ ಮೃತಪಟ್ಟ ಮಂಗಳೂರಿನ ವ್ಯಕ್ತಿ: ಒಂದು ತಿಂಗಳ ಬಳಿಕ ಸ್ವಗ್ರಾಮಕ್ಕೆ ಮೃತದೇಹ ರವಾನೆ2016ರ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣ: ಮೂವರು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆಎಸ್‌ಐಆರ್‌ ವಿವಾದ: ತಂದೆಯ ಹೆಸರು ಮತದಾರರ ಪಟ್ಟಿಯಿಂದ ತೆಗೆದಿದ್ದಕ್ಕೆ ಎರಡೂವರೆ ತಿಂಗಳ ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ ಭಾರತಕ್ಕೆ ಶೇ.17ರಷ್ಟು ಸುಂಕ! ಒಪ್ಪಂದ ವಿಫಲವಾದರೆ ಶೇ.25ಕ್ಕೆ ಏರಿಕೆ: ಅಮೆರಿಕದ ಪ್ರಸ್ತಾವನೆಜಾರ್ಖಂಡ್‌ | ಎಸ್‌ಐಆರ್‌ ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸಲು ವಿಧಾನಸಭೆ ನಿರ್ಣಯವಾಲ್ಮೀಕಿ ನಿಗಮ ಪ್ರಕರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್; ಆರೋಪಿಗಳ ಪಟ್ಟಿಯಿಂದ ಹೆಸರು ಕೈಬಿಟ್ಟು ಸಾಕ್ಷಿಯಾಗಿ ಸೇರ್ಪಡೆ!

ಸರ್ಕಾರಿ ನೌಕರರಿಗೆ 15 ದಿನಗಳ ಪಿತೃತ್ವ ರಜೆ ಘೋಷಿಸಿದ ತಮಿಳುನಾಡು ಸಿಎಂ ವಿಜಯ್

PPeepal Media

Peepal Media ದೇಶ

• 1 ನಿಮಿಷದ ಓದು

ಸರ್ಕಾರಿ ನೌಕರರಿಗೆ 15 ದಿನಗಳ ಪಿತೃತ್ವ ರಜೆ ಘೋಷಿಸಿದ ತಮಿಳುನಾಡು ಸಿಎಂ ವಿಜಯ್

ತಮಿಳುನಾಡು ಸರ್ಕಾರಿ ನೌಕರರಿಗೆ ಮೊದಲ ಬಾರಿಗೆ ಪಿತೃತ್ವ ರಜೆ (Paternity Leave) ಪರಿಚಯಿಸುವುದಾಗಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಘೋಷಿಸಿದ್ದಾರೆ. ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುರುಷ ನೌಕರರಿಗೆ ಪತ್ನಿಯ ಹೆರಿಗೆ ಸಂದರ್ಭದಲ್ಲಿ 15 ದಿನಗಳ ವೇತನ ಸಹಿತ ಪಿತೃತ್ವ ರಜೆ ನೀಡಲು ಸರ್ಕಾರ ನಿರ್ಧರಿಸಿದೆ.

ತಮಿಳುನಾಡು ಸರ್ಕಾರದ ಮಹಿಳಾ ನೌಕರರಿಗೆ ಈಗಾಗಲೇ 365 ದಿನಗಳ ಹೆರಿಗೆ ರಜೆ (Maternity Leave) ನೀಡಲಾಗುತ್ತಿದೆ. ಇದೇ ರೀತಿಯಲ್ಲಿ ಪುರುಷ ಸರ್ಕಾರಿ ನೌಕರರಿಗೂ ಪಿತೃತ್ವ ರಜೆ ನೀಡಬೇಕೆಂದು ಹಲವು ಮನವಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದವು. ಈ ಬೇಡಿಕೆಯನ್ನು ಪರಿಗಣಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಗು ಜನಿಸುವ ಸಮಯ ತಾಯಿ ಮತ್ತು ಮಗುವಿನ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಈ ಸಂದರ್ಭದಲ್ಲಿ ತಾಯಿಗೆ ದೈಹಿಕ ಹಾಗೂ ಮಾನಸಿಕ ಬೆಂಬಲ ನೀಡುವುದರ ಜೊತೆಗೆ ನವಜಾತ ಶಿಶುವಿನ ಆರೈಕೆಯಲ್ಲಿಯೂ ತಂದೆಯ ಪಾತ್ರ ಮುಖ್ಯವಾಗಿರುತ್ತದೆ. ಹೀಗಾಗಿ, ಹೆರಿಗೆ ಸಂದರ್ಭದಲ್ಲಿ ಪತ್ನಿಯೊಂದಿಗೆ ಇರಲು ಪುರುಷ ಸರ್ಕಾರಿ ನೌಕರರಿಗೆ ಪಿತೃತ್ವ ರಜೆ ನೀಡುವುದು ಅಗತ್ಯವಾಗಿದೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ ಪುರುಷ ಸರ್ಕಾರಿ ನೌಕರರಿಗೆ 15 ದಿನಗಳ ಪಿತೃತ್ವ ರಜೆ ಮಂಜೂರು ಮಾಡಲಾಗಿದೆ. ಮಗುವಿನ ನಿರೀಕ್ಷಿತ ಜನನ ದಿನಾಂಕಕ್ಕಿಂತ 15 ದಿನಗಳ ಮೊದಲು ಅಥವಾ ಮಗು ಜನಿಸಿದ ನಂತರದ ಆರು ತಿಂಗಳ ಅವಧಿಯೊಳಗೆ ಈ ರಜೆಯನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಈ ನಿರ್ಧಾರದಿಂದ ತಾಯಿಯ ಹೆರಿಗೆ ಅವಧಿಯಲ್ಲಿ ಪತಿಯ ಬೆಂಬಲ ದೊರೆಯುವುದರ ಜೊತೆಗೆ ನವಜಾತ ಶಿಶುವಿನ ಆರೈಕೆಯಲ್ಲಿ ತಂದೆಯೂ ಸಕ್ರಿಯವಾಗಿ ಭಾಗವಹಿಸಲು ಅನುಕೂಲವಾಗಲಿದೆ ಎಂದು ಸರ್ಕಾರ ತಿಳಿಸಿದೆ.

ತಮಿಳುನಾಡು ಸರ್ಕಾರದ ಸಾರ್ವಜನಿಕ ಸಂಪರ್ಕ ಇಲಾಖೆಯು ನವೆಂಬರ್ 26, 2026ರಂದು ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಲಾಗಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು