ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಚಳಿಗಾಲದ ನಡುವೆಯೇ ಮತ್ತೆ ಮಳೆ ಮುನ್ಸೂಚನೆ: ನವೆಂಬರ್ 28ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಕಾಂಗ್ರೆಸ್ ವಿರುದ್ಧ ಬಿಜೆಪಿ–ಜೆಡಿಎಸ್ ಜಂಟಿ ಸಮರಕ್ಕೆ ಸಿದ್ಧತೆ; ಚುನಾವಣಾ ಮೈತ್ರಿಗೆ ಸಮನ್ವಯ ಸಮಿತಿ ರಚನೆ25 ಲಕ್ಷ ಸರ್ಕಾರಿ ಉದ್ಯೋಗ, ರೈತರ ಸಾಲ ಮನ್ನಾ, ವೃದ್ಧೆಯರಿಗೆ ₹40 ಸಾವಿರ ಪಿಂಚಣಿ: ಅಖಿಲೇಶ್ ಯಾದವ್ ಭರ್ಜರಿ ಚುನಾವಣಾ ಘೋಷಣೆಅಮಾಯಕರನ್ನು ನಕ್ಸಲಿಸಂಗೆ ಸೆಳೆದವರಿಗೂ ಹೊಣೆಗಾರಿಕೆ ನಿಗದಿಯಾಗಬೇಕು: ರಾಷ್ಟ್ರಪತಿ ದ್ರೌಪದಿ ಮುರ್ಮುರಾಹುಲ್ ಗಾಂಧಿ ಹೆಸರಿನ ಪೋಸ್ಟ್‌ಗಳಿಗೆ ನಿರ್ಬಂಧ; ‘ಮೆಟಾ’ ವಿರುದ್ಧ ಕಾನೂನು ಸಮರಕ್ಕೆ ಇಳಿದ ಕಾಂಗ್ರೆಸ್ತುಂಗಾ ನದಿಯಲ್ಲಿ ಬೆಂಗಳೂರಿನ ನಾಲ್ವರು ಯುವಕರು ನೀರುಪಾಲು: ಈಶ್ವರ ಮಲ್ಪೆ ತಂಡದಿಂದ ಮೃತದೇಹಗಳ ಪತ್ತೆರಾಜ್ಯಾದ್ಯಂತ ಶಾಲೆಗಳಿಗೂ ರಜೆ ಇಂದು ರಜೆ -ಸತತ 3 ದಿನ ಲಾಂಗ್ ವೀಕೆಂಡ್ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮೆಟಾ ವಿರುದ್ಧ – ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ಕಾಡಾನೆ ‘ಭೀಮ’ ಮೂಡಿಗೆರೆ ಎಂಟ್ರಿ – ತಾಲೂಕಿನಲ್ಲಿ ಹೆಚ್ಚಿದ ಆತಂಕತತ್ವಲೋಕ – ವಿ.ಸೀ. ಕಾವ್ಯ : ಬಾಳಿನ ತತ್ವಶೋಧನೆಬೊಗಸೆಗೆ ದಕ್ಕಿದ್ದು-102 : ಸರ್ವಾಧಿಕಾರಿ ಅಪಾಯದ ಗಂಟೆ ಕೇಳದಿದ್ದರೆ ನಮ್ಮಲ್ಲೇ ಗಂಭೀರ ದೋಷವಿದೆ!ಬಿಜೆಪಿ, ಆರ್‌ಎಸ್‌ಎಸ್ ಸಂವಿಧಾನದ ಶತ್ರುಗಳು | ಈ ಬಾರಿ ಮೀಸೆ ಇರುವ ವ್ಯಕ್ತಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲಿದ್ದಾರೆ: ಅಸಾದುದ್ದೀನ್ ಓವೈಸಿಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿ ಬೆದರಿಕೆ ಆರೋಪ: ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ಸರ್ಕಾರಿ ನೌಕರರಿಗೆ 15 ದಿನಗಳ ಪಿತೃತ್ವ ರಜೆ ಘೋಷಿಸಿದ ತಮಿಳುನಾಡು ಸಿಎಂ ವಿಜಯ್ಕೇರಳದ ಜನರು, ಮಲಯಾಳಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ದೂರುಭಾರತದ ಸಂವಿಧಾನ ; ಸಮಾನತೆಯ ಋತುಗಾನಅಮೆರಿಕದ ಸುಂಕ ಸಮರ: ಭಾರತದ ಮೇಲೆ ಶೇ.25 ಸುಂಕದ ಪ್ರಸ್ತಾಪ, ಮೋದಿ ರಾಜಿಯಾಗ್ತಾರಾ?ಕಾಂಗ್ರೆಸ್ ಒಬಿಸಿ ಮೀಸಲಾತಿ ಕಿತ್ತುಕೊಂಡು ಅದನ್ನು ಮುಸ್ಲಿಮರಿಗೆ ನೀಡಲು ಬಯಸುತ್ತಿದೆ: ನರೇಂದ್ರ ಮೋದಿಕರ್ನಾಟಕ ಹಿಜಾಬ್ ಪ್ರಕರಣದೊಂದಿಗೆ ಮತ್ತೊಂದು ಅರ್ಜಿ ವಿಚಾರಣೆಗೆ; ಅಲಹಾಬಾದ್ ಹೈಕೋರ್ಟ್ ತೀರ್ಪು ಪೂರ್ವನಿದರ್ಶನವಲ್ಲ ಎಂದ ಸುಪ್ರೀಂ ಕೋರ್ಟ್ಸಂವಿಧಾನ ದಿನ 2026: ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತೆ ಚರ್ಚೆಯಲ್ಲಿ

ಕಾಂಗ್ರೆಸ್ ವಿರುದ್ಧ ಬಿಜೆಪಿ–ಜೆಡಿಎಸ್ ಜಂಟಿ ಸಮರಕ್ಕೆ ಸಿದ್ಧತೆ; ಚುನಾವಣಾ ಮೈತ್ರಿಗೆ ಸಮನ್ವಯ ಸಮಿತಿ ರಚನೆ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಕಾಂಗ್ರೆಸ್ ವಿರುದ್ಧ ಬಿಜೆಪಿ–ಜೆಡಿಎಸ್ ಜಂಟಿ ಸಮರಕ್ಕೆ ಸಿದ್ಧತೆ; ಚುನಾವಣಾ ಮೈತ್ರಿಗೆ ಸಮನ್ವಯ ಸಮಿತಿ ರಚನೆ

ಬೆಂಗಳೂರು: ಮುಂಬರುವ ವಿಧಾನಸಭಾ ಉಪಚುನಾವಣೆಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಸಿದ್ಧತೆ ನಡೆಸಿದೆ. ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲು ಎರಡೂ ಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ನಡೆದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಭೆಯಲ್ಲಿ ಈ ಕುರಿತು ಮಹತ್ವದ ಚರ್ಚೆ ನಡೆದಿದ್ದು, ಹಿರಿಯೂರು ಮತ್ತು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಉಪಚುನಾವಣೆಯಲ್ಲಿ ಗೆಲುವಿನ ಸಾಧ್ಯತೆ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲು ನಿರ್ಧರಿಸಲಾಗಿದ್ದು, ಕ್ಷೇತ್ರ ಹಂಚಿಕೆ ಮತ್ತು ಅಭ್ಯರ್ಥಿಗಳ ಆಯ್ಕೆಯನ್ನು ಉಭಯ ಪಕ್ಷಗಳ ವರಿಷ್ಠರು ಅಂತಿಮಗೊಳಿಸಲಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಪಕ್ಷಗಳ ನಡುವೆ ಉಂಟಾಗಬಹುದಾದ ಭಿನ್ನಾಭಿಪ್ರಾಯಗಳನ್ನು ನಿವಾರಿಸುವುದು ಹಾಗೂ ಸ್ಥಳೀಯ ಮಟ್ಟದಲ್ಲಿ ಸಮನ್ವಯ ಸಾಧಿಸುವುದು ಸಮಿತಿಗಳ ಪ್ರಮುಖ ಉದ್ದೇಶವಾಗಿದೆ.

ಇದೇ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಸುವ ಬಗ್ಗೆ ನಾಯಕರು ಒಮ್ಮತ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದ ಸಮನ್ವಯ ಸಮಿತಿಯನ್ನು ಮುಂದಿನ ಎರಡು-ಮೂರು ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆಯಿದ್ದು, ಬಳಿಕ ಜಿಲ್ಲಾ ಮಟ್ಟದಲ್ಲೂ ಸಮಿತಿಗಳನ್ನು ರಚಿಸುವ ಪ್ರಕ್ರಿಯೆ ನಡೆಯಲಿದೆ.

2028ರ ವಿಧಾನಸಭಾ ಚುನಾವಣೆಯವರೆಗೂ ಮೈತ್ರಿ ಮುಂದುವರಿಯಲಿದೆ ಎಂದು ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಈಗಲೇ ಚರ್ಚಿಸುವ ಅಗತ್ಯವಿಲ್ಲ. ಪ್ರಸ್ತುತ ಕಾಂಗ್ರೆಸ್ ಸರ್ಕಾರವನ್ನು ಎದುರಿಸುವುದು ಮತ್ತು ರಾಜ್ಯದಲ್ಲಿ ಎನ್‌ಡಿಎ ಅಧಿಕಾರಕ್ಕೆ ತರುವುದೇ ಉಭಯ ಪಕ್ಷಗಳ ಪ್ರಮುಖ ಗುರಿಯಾಗಿದೆ ಎಂಬ ನಿಲುವನ್ನು ಅವರು ಪ್ರಕಟಿಸಿದ್ದಾರೆ.

ಇನ್ನು ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೂ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿವೆ. ರೈತರ ಸಮಸ್ಯೆಗಳು, ಬೆಲೆ ಏರಿಕೆ, ಬರ ಪರಿಹಾರ, ಕುಡಿಯುವ ನೀರಿನ ಅಭಾವ ಹಾಗೂ ಸರ್ಕಾರದ ವಿರುದ್ಧದ ಆರೋಪಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲು ಸಿದ್ಧತೆ ನಡೆಸಿವೆ.

ವಿಧಾನ ಪರಿಷತ್‌ನ ಇತ್ತೀಚಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಮೈತ್ರಿಕೂಟ ಸಾಧಿಸಿದ ಫಲಿತಾಂಶವನ್ನು ಮುಂದಿನ ಚುನಾವಣೆಗಳಲ್ಲೂ ಪುನರಾವರ್ತಿಸುವುದು ಉಭಯ ಪಕ್ಷಗಳ ಉದ್ದೇಶವಾಗಿದೆ. ಆದರೆ ಕ್ಷೇತ್ರ ಹಂಚಿಕೆ, ಅಭ್ಯರ್ಥಿಗಳ ಆಯ್ಕೆ ಹಾಗೂ ಸ್ಥಳೀಯ ಮಟ್ಟದ ಕಾರ್ಯಕರ್ತರ ಹೊಂದಾಣಿಕೆ ಮೈತ್ರಿಯ ಮುಂದಿನ ಹಾದಿಯಲ್ಲಿ ಪ್ರಮುಖ ಸವಾಲುಗಳಾಗಿವೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು