ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
12 ದಿನಗಳ ಅಹೋರಾತ್ರಿ ಹೋರಾಟಕ್ಕೆ ಮಣಿದ ಸರ್ಕಾರ: ಆಶಾ ಕಾರ್ಯಕರ್ತೆಯರ ಗೌರವಧನ ₹2 ಸಾವಿರ ಹೆಚ್ಚಳಕನ್ನಡದ ಅಸ್ಮಿತೆ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಜನರು ಹೋರಾಟಕ್ಕೆ ಮುನ್ನುಗ್ಗಬೇಕಿದೆ – ರಮೇಶ್ ಬೆಲ್ಲಂಕೊಂಡಫ್ಯಾಸಿಸಂ ಯಾವತ್ತೂ ನಮ್ಮ ಆಯ್ಕೆ ಆಗಬಾರದು – ಶಿವಸುಂದರ್ಜೆನ್‌-ಝಿ ಯುವಜನರು ದಾರಿ ತಪ್ಪಿಲ್ಲ, ಅಸಮಾನತೆಯ ವಿರುದ್ಧ ಹೋರಾಡುತ್ತಿರುವ ತಲೆಮಾರು: ಅಶ್ಫಕ್ ಕೊಪ್ಪಳಸಾರ್ವಜನಿಕ ಶಿಕ್ಷಣ, ರಾಷ್ಟ್ರೀಕೃತ ಆರೋಗ್ಯ ಸೇವೆ ಮತ್ತು ಸಾರಿಗೆ ಬಲವಾಗಬೇಕಿದೆ – ಡಾ. ಸಬಿತಾ ಬನ್ನಾಡಿಪ್ರತಿರೋಧದ ಧ್ವನಿ ಇಂದಿಗೂ ಜೀವಂತವಾಗಿದೆ – ಪ್ರೊ. ನರೇಂದ್ರ ನಾಯಕ್ಚುನಾವಣೆಯೊಂದೇ ಬದಲಾವಣೆಯ ಮಾರ್ಗವಲ್ಲ, ಜನಪರ ಪರ್ಯಾಯ ರಾಜಕಾರಣ ರೂಪಿಸಬೇಕು: ನಂದಕುಮಾರ್ ಕುಂಬ್ರಿಉಬ್ಬುಫ್ಯಾಸಿಸಂ ವಿರೋಧವೆಂದರೆ ಕೇವಲ ಬಿಜೆಪಿ ವಿರೋಧವಲ್ಲ; ಬ್ರಾಹ್ಮಣವಾದ ಮತ್ತು ಬಂಡವಾಳಶಾಹಿ ವಿರುದ್ಧದ ಹೋರಾಟವೂ ಆಗಬೇಕು: ಚಿಂತಕ ಶಿವಸುಂದರ್ಪ್ರಜಾಪ್ರಭುತ್ವದ ಕೊನೆಯ ರಕ್ಷಣಾ ಶಕ್ತಿ ಜನರೇ; ಹಿಂದಿ ಹೇರಿಕೆ ವಿರುದ್ಧವೂ ಹೋರಾಟ ಅಗತ್ಯ: ಡಾ.ರಮೇಶ್ ಬೆಲ್ಲಂಕೊಂಡಕೈಗಾರಿಕೆ, ಮಾಧ್ಯಮದ ಬಳಿಕ ರಾಜಕೀಯ ವ್ಯವಸ್ಥೆಯ ಮೇಲೂ ಕಾರ್ಪೊರೇಟ್ ಹಿಡಿತದ ಆತಂಕ: ಎ.ಬಿ. ಇಬ್ರಾಹಿಂ, ನಿವೃತ್ತ ಐಎಎಸ್ ಅಧಿಕಾರಿಚಳಿ, ಮಳೆ ಎನ್ನದೆ ಕುಳಿತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಪರವಾಗಿ ನನ್ನ ಈ ಉದ್ಘಾಟನಾ ಭಾಷಣವನ್ನು ಅರ್ಪಿಸುತ್ತೇನೆ – ರಹಮತ್ ತರೀಕೆರೆಸಂವಾದ ಕಳೆದುಕೊಳ್ಳುತ್ತಿರುವ ಭಾರತಕ್ಕೆ Gen Z ಹೊಸ ರಾಜಕೀಯ ಭಾಷೆ ಕಲಿಸುತ್ತಿದೆ: ರಹಮತ್ ತರೀಕೆರೆಪುಸ್ತಕ ಸಂತೆ ಹೆಸರಿನಲ್ಲಿ ಬಂಡವಾಳ ಕೆಲಸ ಮಾಡುತ್ತಿದೆ, ಜನನುಡಿ ಪುಸ್ತಕ ಮೇಳದಲ್ಲಿ – ಲಡಾಯಿ ಬಸೂ ಬೇಸರಜಿಪಿಎಸ್ ಮೂಲಕ ಬಾಡಿಗೆ ಕಾರಿನ ಎಂಜಿನ್ ಸ್ಥಗಿತಗೊಳಿಸಿ ನಾಲ್ವರು ಅಪಹರಣಕಾರರನ್ನು ಬಂಧಿಸಿದ ಪೊಲೀಸರುಹಳೆಯ ತಪ್ಪುಗಳನ್ನು ಮತ್ತೆ ಮಾಡಬೇಡಿ: ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಬೆಂಬಲ ನೀಡುವಂತೆ ಚಂದ್ರಬಾಬು ನಾಯ್ಡು ಮನವಿಚಮತ್ಕಾರ ತೋರಿಸದಿದ್ದರೆ ನಮಸ್ಕಾರ ಮಾಡಬೇಕಿಲ್ಲ ಎನ್ನುವ ಧೋರಣೆ ಜನರಲ್ಲಿದೆ: ಮೋಹನ್ ಭಾಗವತ್ಡಿಲಿಮಿಟೇಶನ್‌ ವಿಚಾರದಲ್ಲಿ ರಾಜಿ ಇಲ್ಲ: ಕೇಂದ್ರದ ಪ್ರಸ್ತಾವನೆಗೆ ವಿರೋಧ ಪಕ್ಷಗಳ ಆಕ್ಷೇಪ, ವಿಶೇಷ ಅಧಿವೇಶನಕ್ಕೂ ಮುನ್ನ ರಾಜಕೀಯ ಚರ್ಚೆ ತೀವ್ರಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಸ್ಥಾನಗಳನ್ನು ಶೇ.50ರಷ್ಟು ಹೆಚ್ಚಿಸಲು ಕೇಂದ್ರ ಸಂಪುಟ ಅಸ್ತು: 2029ರ ಚುನಾವಣೆಗೆ ಮಹಿಳಾ ಮೀಸಲಾತಿ ಜಾರಿ ಗುರಿಛತ್ತೀಸ್‌ಗಢದ ನಾರಾಯಣಪುರದಲ್ಲಿ ಮದರ್ ಮೇರಿ ಪ್ರತಿಮೆಗೆ ಬೆಂಕಿ ಹಚ್ಚಲು ಯತ್ನ: ಕ್ರಿಸ್‌ಮಸ್‌ಗೂ ಮುನ್ನ ಚರ್ಚ್‌ಗಳಿಗೆ ಭದ್ರತೆ ಕೋರಿದ ಕ್ರೈಸ್ತ ಸಮುದಾಯಬಿಹಾರ | ಕಬ್ಬು ಕಿತ್ತ ಆರೋಪ: ಹಲ್ಲೆಗೊಳಗಾದ ಇಬ್ಬರು ಮದರಸಾ ವಿದ್ಯಾರ್ಥಿಗಳು ಕೆರೆಯಲ್ಲಿ ಶವವಾಗಿ ಪತ್ತೆ

ಪ್ರಜಾಪ್ರಭುತ್ವದ ಕೊನೆಯ ರಕ್ಷಣಾ ಶಕ್ತಿ ಜನರೇ; ಹಿಂದಿ ಹೇರಿಕೆ ವಿರುದ್ಧವೂ ಹೋರಾಟ ಅಗತ್ಯ: ಡಾ.ರಮೇಶ್ ಬೆಲ್ಲಂಕೊಂಡ

PPeepal Media Desk

Peepal Media Desk ರಾಜಕೀಯ, ರಾಜ್ಯ, ವಿಶೇಷ

• 2 ನಿಮಿಷದ ಓದು

ಪ್ರಜಾಪ್ರಭುತ್ವದ ಕೊನೆಯ ರಕ್ಷಣಾ ಶಕ್ತಿ ಜನರೇ; ಹಿಂದಿ ಹೇರಿಕೆ ವಿರುದ್ಧವೂ ಹೋರಾಟ ಅಗತ್ಯ: ಡಾ.ರಮೇಶ್ ಬೆಲ್ಲಂಕೊಂಡ

ಚುನಾವಣಾ ಆಯೋಗದ ಕಾರ್ಯವೈಖರಿ, ಎಸ್‌ಐಆರ್ ಪ್ರಕ್ರಿಯೆ, ಕೇಂದ್ರ ಸರ್ಕಾರದ ನೀತಿಗಳು ಹಾಗೂ ಕನ್ನಡದ ಉದ್ಯೋಗಾವಕಾಶಗಳ ನಿರ್ಲಕ್ಷ್ಯದ ವಿರುದ್ಧ ತೀಕ್ಷ್ಣ ಟೀಕೆ

ಮಂಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದು, ಅದನ್ನು ರಕ್ಷಿಸುವ ಕೊನೆಯ ಶಕ್ತಿ ಭಾರತದ ಜನರೇ ಆಗಿದ್ದಾರೆ ಎಂದು ‘ಕನ್ನಡ ಇಂಡಿಯನ್ಸ್ ಫಾರ್ ಜಸ್ಟಿಸ್ ಫಾರ್ ಆಲ್ ಇಂಡಿಯನ್ಸ್’ ಸಂಘಟನೆಯ ಸಂಚಾಲಕ ರಮೇಶ್ ಬೆಲ್ಲಂಕೊಂಡ ಅಭಿಪ್ರಾಯಪಟ್ಟರು.

ನಗರದಲ್ಲಿ ನಡೆದ ಜನನುಡಿ–2026 ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಪ್ರಜಾಪ್ರಭುತ್ವದ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಿವೆ. ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯೂ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಎದುರಾಗಿರುವ ಗಂಭೀರ ಸವಾಲುಗಳಲ್ಲಿ ಒಂದಾಗಿದೆ ಎಂದು ಟೀಕಿಸಿದರು.

ಚುನಾವಣೆಗಳಲ್ಲಿ ಜನರು ಮತ ಚಲಾಯಿಸುತ್ತಿದ್ದರೂ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳು ಮೂಡುತ್ತಿವೆ. “ಜನರು ಬಿಜೆಪಿಗೆ ಮತ ಹಾಕುತ್ತಿಲ್ಲ; ಚುನಾವಣಾ ಆಯೋಗವೇ ಬಿಜೆಪಿಗೆ ಮತ ಹಾಕುತ್ತಿದೆ ಎಂಬ ಭಾವನೆ ಕಳೆದ ಒಂದು-ಎರಡು ವರ್ಷಗಳಲ್ಲಿ ನನಗೆ ಮೂಡಿದೆ” ಎಂದು ಹೇಳುವ ಮೂಲಕ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಅವರು ಕಟುವಾಗಿ ಪ್ರಶ್ನಿಸಿದರು.

ಪ್ರಜಾಪ್ರಭುತ್ವವನ್ನು ಸಂರಕ್ಷಿಸಬೇಕಾದ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಮೇಲೆಯೇ ಅದರ ದುರ್ಬಲತೆಗೆ ಕಾರಣವಾಗುತ್ತಿರುವ ಆರೋಪಗಳಿವೆ ಎಂದು ಅವರು ಹೇಳಿದರು. ನ್ಯಾಯಾಂಗ ಮತ್ತು ಚುನಾವಣಾ ವ್ಯವಸ್ಥೆಗಳು ಪ್ರಜಾಪ್ರಭುತ್ವದ ರಕ್ಷಣೆಗೆ ನಿಲ್ಲಬೇಕಾದ ಸಂದರ್ಭದಲ್ಲಿ ಆ ಹೊಣೆಗಾರಿಕೆ ಸಮರ್ಪಕವಾಗಿ ನಿಭಾಯಿಸಲಾಗುತ್ತಿಲ್ಲ ಎಂಬ ಆತಂಕವನ್ನೂ ವ್ಯಕ್ತಪಡಿಸಿದರು.

“ಪ್ರಜಾಪ್ರಭುತ್ವದ ಕೊನೆಯ ರಕ್ಷಣಾ ಗೋಡೆ ಭಾರತದ 147 ಕೋಟಿ ಜನರು. ನಮ್ಮ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಜನರೇ ಮುಂಚೂಣಿಗೆ ಬರಬೇಕಿದೆ” ಎಂದು ಕರೆ ನೀಡಿದರು.

ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯದ ಆತಂಕ

ಭಾಷಾ ಸಮಾನತೆಯ ಪ್ರಶ್ನೆಯನ್ನು ಪ್ರಸ್ತಾಪಿಸಿದ ಬೆಲ್ಲಂಕೊಂಡ, ದೇಶದಲ್ಲಿ ಹಿಂದಿ ಹೇರಿಕೆಯ ಪ್ರವೃತ್ತಿ ವ್ಯಾಪಕವಾಗುತ್ತಿದೆ. ಕನ್ನಡ ಭಾಷೆ ಮತ್ತು ಕನ್ನಡಿಗರನ್ನು ಹಿಂದಿ ಭಾಷೆ ಹಾಗೂ ಹಿಂದಿ ಭಾಷಿಕರಿಗೆ ಸಮಾನವಾಗಿ ಪರಿಗಣಿಸಲಾಗುತ್ತಿಲ್ಲ ಎಂದು ಆರೋಪಿಸಿದರು.

ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪ್ರಕ್ರಿಯೆ, ಬೆಂಗಳೂರು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ನೇಮಕಾತಿ ಸೇರಿದಂತೆ ವಿವಿಧ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಸಮರ್ಪಕ ಅವಕಾಶಗಳು ದೊರೆಯುತ್ತಿವೆಯೇ ಎಂಬ ಪ್ರಶ್ನೆ ಎತ್ತಿದರು.

ಯುಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೆ, ಬ್ಯಾಂಕಿಂಗ್ ಮತ್ತು ಕೇಂದ್ರ ವಿಶ್ವವಿದ್ಯಾಲಯಗಳ ಪ್ರವೇಶ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ದೊರೆಯುತ್ತಿರುವ ಅವಕಾಶಗಳ ಕುರಿತು ಮರುಪರಿಶೀಲನೆ ಅಗತ್ಯವಿದೆ ಎಂದರು.

ಕಲಬುರಗಿಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕಟಣೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಿಗೆ ಮಾತ್ರ ಅವಕಾಶ ನೀಡಿರುವುದನ್ನು ಉದಾಹರಿಸಿದ ಅವರು, ಕನ್ನಡಿಗರು ತಮ್ಮದೇ ರಾಜ್ಯದಲ್ಲಿ ಉದ್ಯೋಗ ಮತ್ತು ಶಿಕ್ಷಣದ ಅವಕಾಶಗಳಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು.

ಕಾಂಗ್ರೆಸ್–ಬಿಜೆಪಿ ನೀತಿಗಳ ವಿರುದ್ಧ ಟೀಕೆ

ಕನ್ನಡದ ಹಿತಾಸಕ್ತಿಯ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ನೀತಿಗಳನ್ನು ಅವರು ಟೀಕಿಸಿದರು. ಕಾಂಗ್ರೆಸ್ ಹಲವು ದಶಕಗಳಿಂದ ಮುಂದುವರಿಸಿಕೊಂಡು ಬಂದಿರುವ ಭಾಷಾ ನೀತಿಗಳನ್ನೇ ಬಿಜೆಪಿ ಇನ್ನಷ್ಟು ವೇಗವಾಗಿ ಅನುಸರಿಸುತ್ತಿದೆ ಎಂಬುದು ಅವರ ಆರೋಪವಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಪರ ನಿಲುವುಗಳನ್ನು ಪ್ರತಿಪಾದಿಸುತ್ತಿದ್ದರೂ ಶಿಕ್ಷಣ ಕ್ಷೇತ್ರದಲ್ಲಿ ಹಿಂದಿ ಕಡ್ಡಾಯದ ಪ್ರಶ್ನೆ ಮತ್ತು ರಾಜ್ಯ ಶಿಕ್ಷಣ ನೀತಿಯ ಅನುಷ್ಠಾನದಲ್ಲಿ ನಿರೀಕ್ಷಿತ ಬದಲಾವಣೆಗಳು ಕಂಡುಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸುವ ಉದ್ದೇಶದಿಂದ ರಚಿಸಲಾದ ಸಮಿತಿ ತನ್ನ ವರದಿ ಸಲ್ಲಿಸಿದ್ದರೂ ಅದನ್ನು ಸಾರ್ವಜನಿಕಗೊಳಿಸಿಲ್ಲ ಮತ್ತು ಜಾರಿಗೂ ತಂದಿಲ್ಲ ಎಂದು ಪ್ರಶ್ನಿಸಿದರು. ಸಮಿತಿ ರಚನೆಯ ಉದ್ದೇಶವೇನು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನದ ಕೊರತೆ

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಶೋಧನೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಮರ್ಪಕ ಅನುದಾನ ನೀಡಲಾಗುತ್ತಿಲ್ಲ ಎಂದು ಬೆಲ್ಲಂಕೊಂಡ ಕಳವಳ ವ್ಯಕ್ತಪಡಿಸಿದರು.

ವಿದ್ಯುತ್ ಬಿಲ್ ಪಾವತಿಸಲೂ ಕಷ್ಟವಾಗುವಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ವಿಶ್ವವಿದ್ಯಾಲಯವನ್ನು ಉಳಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಅವೈಜ್ಞಾನಿಕ ವಿಚಾರಗಳನ್ನು ಪ್ರಚಾರ ಮಾಡುತ್ತಿವೆ ಎಂದು ಟೀಕಿಸಿದ ಅವರು, ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕ ಚಿಂತನೆಗಳನ್ನು ಬಲಪಡಿಸುವ ಅಗತ್ಯವನ್ನು ಪ್ರತಿಪಾದಿಸಿದರು.

ಪ್ರತಿಯೊಂದು ಮಗು, ಮಹಿಳೆ ಮತ್ತು ಪುರುಷರು ಬಡತನದ ಹೊರೆ ಹಾಗೂ ಸಾಮಾಜಿಕ ದಬ್ಬಾಳಿಕೆಯಿಲ್ಲದೆ ತಮ್ಮ ಸಾಮರ್ಥ್ಯವನ್ನು ಸಂಪೂರ್ಣವಾಗಿ ಅರಳಿಸಿಕೊಳ್ಳುವ ಕರ್ನಾಟಕ ಮತ್ತು ಭಾರತವನ್ನು ನಿರ್ಮಿಸುವುದೇ ತಮ್ಮ ಸಂಘಟನೆಯ ಆಶಯ ಎಂದು ತಿಳಿಸಿದರು.

ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಮತ್ತು ಸಮಾನ ಉದ್ಯೋಗಾವಕಾಶಗಳು ದೊರೆಯುವ ಸಮಾಜ ನಿರ್ಮಾಣವಾಗಬೇಕು. ಪ್ರಜಾಪ್ರಭುತ್ವ, ಭಾಷಾ ಸಮಾನತೆ ಮತ್ತು ವೈಜ್ಞಾನಿಕ ಮನೋಭಾವದ ರಕ್ಷಣೆ ಕೇವಲ ಸರ್ಕಾರಗಳ ಜವಾಬ್ದಾರಿಯಲ್ಲ; ಪ್ರತಿಯೊಬ್ಬ ನಾಗರಿಕನ ಹೊಣೆಗಾರಿಕೆಯೂ ಆಗಿದೆ ಎಂಬ ಸಂದೇಶವನ್ನು ಅವರು ನೀಡಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು