Tuesday, June 25, 2024

ಸತ್ಯ | ನ್ಯಾಯ |ಧರ್ಮ

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾತ್ರೋರಾತ್ರಿ ವಿಚಾರಣೆ ನಡೆಸಿದ ನಂತರ ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ಭಟ್ಟಾಚಾರ್ಯ ಅವರನ್ನು ಇಂದು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದ ಪ್ರಕರಣವನ್ನು ಇಡಿ ತನಿಖೆ ನಡೆಸುತ್ತಿದ್ದು, ಈ ಹಿಂದೆ ಭಟ್ಟಾಚಾರ್ಯರಿಗೆ ಸಮನ್ಸ್ ನೀಡಿತ್ತು. ಪ್ರಮುಖವಾಗಿ, ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಭಟ್ಟಾಚಾರ್ಯ ಅವರಿಗೆ ನೀಡಲಾಗಿದ್ದ ಮಧ್ಯಂತರ ರಕ್ಷಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 30 ರಂದು ಮುಂದಿನ ಆದೇಶದವರೆಗೆ ವಿಸ್ತರಿಸಿತ್ತು.

ಈ ಹಿನ್ನಲೆಯಲ್ಲಿ ಮಾಣಿಕ್ ಭಟ್ಟಾಚಾರ್ಯ ಅವರಿಗೆ ನೀಡಲಾಗಿರುವ ಮಧ್ಯಂತರ ರಕ್ಷಣೆ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದು ನ್ಯಾಯಾಲಯ ತಿಳಿಸಿತ್ತು ಹಾಗೂ ತನಿಖಾ ಸಂಸ್ಥೆಯೊಂದಿಗೆ ಸಹಕರಿಸುವಂತೆ ನ್ಯಾಯಾಲಯ ಅವರಿಗೆ ಸೂಚಿಸಿತ್ತು.

ಈ ಹಿಂದೆ ಎಸ್‌ಎಸ್‌ಸಿ (ಶಾಲಾ ಸೇವಾ ಆಯೋಗ) ಹಗರಣದಲ್ಲಿ ಆಗಿನ ಪಶ್ಚಿಮ ಬಂಗಾಳದ ಕೈಗಾರಿಕಾ ಸಚಿವ ಮತ್ತು ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು ಇಡಿ ಬಂಧಿಸಿದೆ. ಈ ಮೂಲಕ ಹಗರಣದಲ್ಲಿ ಮಾಣಿಕ್ ಭಟ್ಟಾಚಾರ್ಯ ಅವರು ಬಂಧಿತರಾದ ಎರಡನೇ ತೃಣಮೂಲ ನಾಯಕರಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು