ಪ್ರಜ್ವಲ್ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಜಾತಿ ನಿಂದನೆ ಹಾಗೂ ಲೈಂಗಿಕ ಕಿರುಕುಳ ಪ್ರಕರಣ ದಾಖಲು

ಹಾಸನ: ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋಗಳ ಕುರಿತು ಬಾಜಪ ನಾಯಕತ್ವಕ್ಕೆ ಪತ್ರ ಬರೆದಿದ್ದ ಹಾಸನದ ಬಾಜಪ ನಾಯಕ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಎಸ್ಸಿ ಮತ್ತು ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಕೇಸ್‌ ರಿಜಿಸ್ಟರ್‌ ಆಗಿದೆಯೆಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಬಾಜಪ ನಾಯಕ ದೇವರಾಜೇಗೌಡ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಕಲಾವಿದರೊಬ್ಬರು ಮಾರ್ಚ್ 31ರಂದು ಮೊದಲ ದೂರು ದಾಖಲಿಸಿದ್ದರು.

ನಂತರ ದೇವರಾಜೇಗೌಡ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಏಪ್ರಿಲ್ 1ರಂದು ಅದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಹಿಳೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಹತ್ತು ತಿಂಗಳ ಹಿಂದೆ ಪರಿಚಯವಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನುವ ಆರೋಪ ಅವರ ಮೇಲೆ ಕೇಳಿ ಬಂದಿದೆ.

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ವಾಟ್ಸ್​ಆ್ಯಪ್​ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ದೇವರಾಜ್ ವಿರುದ್ಧ ಕೇಳಿ ಬಂದಿದೆ. ಅದೇ ರೀತಿ ಬಳಿಕ ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪವೂ ಕೇಳಿ ಬಂದಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿ ದೇವರಾಜೇಗೌಡ ಸೋತಿದ್ದರು.

2024ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ NDA ಅಭ್ಯರ್ಥಿಯಾಗಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಕಣಕ್ಕಿಳಿಸುವುದನ್ನು ದೇವರಾಜೇಗೌಡ ವಿರೋಧಿಸಿದ್ದರು.

ಪಕ್ಷದ ನಾಯಕತ್ವಕ್ಕೆ ಬರೆದ ಪತ್ರದಲ್ಲಿ, ಪ್ರಜ್ವಲ್ ಭಾಗಿಯಾಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ವೀಡಿಯೊಗಳ ಬಗ್ಗೆ ಅವರು ಮಾಹಿತಿ ನೀಡಿದ್ದರು ಎನ್ನಲಾಗಿದೆ.

ಇತ್ತೀಚೆಗೆ, ಉಪ ಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವೀಡಿಯೊ ಸೋರಿಕೆಯ ಮಾಸ್ಟರ್ ಮೈಂಡ್ ಎಂದು ಅವರು ಆರೋಪಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪಕ್ಷಪಾತ ಎಸಗುತ್ತಿದೆ ಎಂದೂ ಅವರು ಆರೋಪಿಸಿದರು.

Related Articles

ಇತ್ತೀಚಿನ ಸುದ್ದಿಗಳು