ಬೀದರ್‌ನಲ್ಲಿ ಗುರುವಾರ ಬೆಳಗ್ಗೆ ಸಿನಿಮೀಯ ರೀತಿಯಲ್ಲಿ ಎಟಿಎಂ ಕಳ್ಳತನ ನಡೆದಿದ್ದು, ಎಸ್‌ಬಿಐ ಬ್ಯಾಂಕಿನ ಎಟಿಎಂಗೆ ಹಣ ತುಂಬಿಸುವ ಸಂದರ್ಭದಲ್ಲಿ ಈ ದರೋಡೆ ನಡೆದಿದೆ.
ಬ್ಯಾಂಕ್ ಗೆ ಹಣ ಹಾಕಲು ಬಂದ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ ಹಣವನ್ನು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಷ್ಟೇ ಅಲ್ಲದೇ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.
ದರೋಡೆ ವೇಳೆ ಐದು ಸುತ್ತಿನ ಗುಂಡಿನ ದಾಳಿ ನಡೆದ ಬಳಿಕ ಹಣ ತೆಗೆದುಕೊಂಡು ಖದೀಮರು ಪರಾರಿಯಾಗಿದ್ದಾರೆ. ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ ಮುಂದೆ ಗುಂಡಿನ ದಾಳಿ ನಡೆದಿದ್ದು, ಬ್ಯಾಂಕ್ ಕಚೇರಿಯ ಮುಂದೆ ಗುಂಡಿನ ದಾಳಿ ಸಂದರ್ಭದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.