Thursday, August 28, 2025

ಸತ್ಯ | ನ್ಯಾಯ |ಧರ್ಮ

ರಾಯಚೂರಿನಲ್ಲಿ ದಲಿತ ಮುಖಂಡನ ಹತ್ಯೆ

ರಾಯಚೂರು: ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಸೋಮವಾರ ದಲಿತ ಮುಖಂಡನನ್ನು ದುಷ್ಕರ್ಮಿಗಳ ತಂಡವೊಂದು ಕಡಿದು ಹತ್ಯೆ ಮಾಡಿದೆ.

ಮೃತರನ್ನು 40 ವರ್ಷದ ಪ್ರಸಾದ್ ಎಂದು ಗುರುತಿಸಲಾಗಿದ್ದು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ಲಾಪುರದಲ್ಲಿ ಕೊಲೆ ನಡೆದಿದೆ.

ಪೊಲೀಸರ ಪ್ರಕಾರ, ಕೊಲೆಗಾರರು ಸಂತ್ರಸ್ತ ವ್ಯಕ್ತಿಯನ್ನು ಬೈಕಿನಲ್ಲಿ ಹೋಗುತ್ತಿದ್ದಾಗ ದಾರಿ ತಪ್ಪಿಸಿ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಪ್ರಸಾದ ಅಂಗೈ ತುಂಡಾಗಿದ್ದು, ದೇಹದಾದ್ಯಂತ ಗಾಯದ ಗುರುತುಗಳಿವೆ.

ಘಟನೆ ಹಿನ್ನೆಲೆಯಲ್ಲಿ ರಾಯಚೂರು ಎಸ್ಪಿ ನಿಖಿಲ್ ಸ್ಥಳಕ್ಕೆ ಭೇಟಿ ನೀಡಿದ್ದರು. ಮಾನ್ವಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆ ಕುರಿತು ಪೊಲೀಸರು ಸುಳಿವು ಸಂಗ್ರಹಿಸುತ್ತಿದ್ದಾರೆ.

ಮೃತ ಪ್ರಸಾದ್‌ ಅವರನ್ನು ಕಾಂಗ್ರೆಸ್‌ ಕಾರ್ಯಕರ್ತ ಎಂದು ಗುರುತಿಸಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ದಲಿತ ಸಂಘಟನೆಗಳು ಘಟನೆಯನ್ನು ಖಂಡಿಸಿದ್ದು, ಹಂತಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿವೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page