Thursday, September 11, 2025

ಸತ್ಯ | ನ್ಯಾಯ |ಧರ್ಮ

ಉತ್ತರ ಪ್ರದೇಶದಲ್ಲೊಂದು ಹೇಯ ಕ್ರೌರ್ಯ… ಮುಸ್ಲಿಂ ವಿದ್ಯಾರ್ಥಿಗೆ ತರಗತಿಯ ವಿದ್ಯಾರ್ಥಿಗಳಿಂದ ಹೊಡೆಸಿದ ಶಿಕ್ಷಕಿ

ಲಕ್ನೋ: ಯುಪಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಮುಸ್ಲಿಂ ವಿದ್ಯಾರ್ಥಿಗೆ ಸಹ ವಿದ್ಯಾರ್ಥಿಗಳ ಬಳಿ ಹೊಡೆಸಿದ ಘಟನೆ ಸಂಚಲನ ಮೂಡಿಸಿದೆ. ವಿದ್ಯಾರ್ಥಿಯನ್ನು ಥಳಿಸಿದ್ದಲ್ಲದೆ, ಆಕೆಯ ದ್ವೇಷದ ಮಾತುಗಳನ್ನು ಆಡಿರುವುದು ಈಗ ವಿವಾದವನ್ನು ಇನ್ನಷ್ಟು ದೊಡ್ಡದಾಗಿಸಿದೆ.

ಈ ವೀಡಿಯೋ ಸಮಾಜಿಕ ಜಾಲತಾಣಗಳಲ್ಲಿ ಹೊರಬಿದ್ದಿದ್ದು ರಾಜಕೀಯ ವಲಯದಲ್ಲಿ ಕಿಚ್ಚು ಹೊತ್ತಿಸಿದೆ.

ಉತ್ತರ ಪ್ರದೇಶದ ಮುಜಾಫರ್‌ನಗರದ ಖಾಸಗಿ ಶಾಲೆಯೊಂದರಲ್ಲಿ ಪಾಠ ಹೇಳಬೇಕಿದ್ದ ಶಿಕ್ಷಕಿ ಅಮಾನವೀಯವಾಗಿ ವರ್ತಿಸಿ ಮಕ್ಕಳ ಮನಸ್ಸಿನಲ್ಲಿ ಧಾರ್ಮಿಕ ದ್ವೇಷ ತುಂಬಲು ಯತ್ನಿಸಿದ್ದಾಳೆ ಎಂದು ಯುಪಿ ಪೊಲೀಸರು ತಿಳಿಸಿದ್ದಾರೆ. ವೀಡಿಯೋ ಆಧರಿಸಿ ಯುಪಿ ಪೊಲೀಸರು ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ.

ಪೊಲೀಸರ ಪ್ರಕಾರ ಶಿಕ್ಷಕರಿಂದ ಥಳಿಸಿದ ಬಾಲಕ ಮುಸ್ಲಿಂ. ಶಿಕ್ಷಕಿ ಧರ್ಮ ದೂಷಣೆ ಎಸಗಿರುವುದು ವೀಡಿಯೋದಲ್ಲಿ ಸ್ಪಷ್ಟವಾಗಿದ್ದು, ಆಕೆಯ ಧರ್ಮ ಯಾವುದು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಗಣಿತ ಟೇಬಲ್ ಕಲಿಯದಿದ್ದಕ್ಕೆ ಧಾರ್ಮಿಕ ನಿಂದನೆ ಮಾಡುವದರ ಜೊತೆಗೆ ಮುಸ್ಲಿಂ ವಿದ್ಯಾರ್ಥಿಯ ಮೇಲೆ ತನ್ನ ಸಹವರ್ತಿ ವಿದ್ಯಾರ್ಥಿಗಳನ್ನು ಬಾಲಕನ ಮೇಲೆ ಹಲ್ಲೆಗೆ ಪ್ರೇರೇಪಿಸಿದ್ದಾಳೆ ಎನ್ನಲಾಗಿದೆ. ಮಕ್ಕಳ ಹಕ್ಕುಗಳ ಸಂಘಟನೆಯೂ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.

ಶಾಲಾ ಆಡಳಿತ ಮಂಡಳಿ ರಾಜಿ ಸಂಧಾನಕ್ಕೆ ಬಂದಿದ್ದು, ತಾವು ಕಟ್ಟಿಸಿಕೊಂಡಿದ್ದ ಶುಲ್ಕವನ್ನೂ ವಾಪಸ್ ನೀಡಿದ್ದು, ಇನ್ನು ಮುಂದೆ ತಮ್ಮ ಮಗುವನ್ನು ಆ ಶಾಲೆಗೆ ಕಳುಹಿಸುವುದಿಲ್ಲ ಎಂದು ನಿರ್ಧರಿಸಿರುವುದಾಗಿ ಬಾಲಕನ ತಂದೆ ತಿಳಿಸಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸುವ ಮನಸ್ಸಿಲ್ಲದ ಕಾರಣ ವಿಷಯವನ್ನು ಇಲ್ಲಿಗೆ ಬಿಡುವಂತೆ ಅವರು ಕೋರಿದರು.

ಈ ವಿಚಾರವಾಗಿ ಕಾಂಗ್ರೆಸ್ ಸಂಸದ ರಾಜೀವ್ ಗಾಂಧಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.. ಪವಿತ್ರ ಶಾಲೆಯಲ್ಲಿ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುವುದಕ್ಕಿಂತ ದೇಶದ್ರೋಹ ಮತ್ತೊಂದಿಲ್ಲ. ಇದು ಬಿಜೆಪಿ ಸರಕಾರವೇ ಪೋಷಿಸಿದ ದ್ವೇಷದ ಪರಿಣಾಮವಾಗಿದೆ. ಚಿಕ್ಕ ಮಕ್ಕಳು ದೇಶದ ಭವಿಷ್ಯ. ಅವರನ್ನು ದ್ವೇಷಿಸುವ ಬದಲು ಪ್ರೀತಿಸುವುದನ್ನು ಕಲಿಸಬೇಕು ಎಂದರು.

ಮತ್ತೋರ್ವ ಸಂಸದ ಜಯಂತ್ ಸಿಂಗ್ ಪ್ರತಿಕ್ರಿಯಿಸಿದ್ದು, ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಅಲ್ಪಸಂಖ್ಯಾತರ ವಿರುದ್ಧ ಕೋಮುದ್ವೇಷ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಸ್ಥಳೀಯ ಶಾಸಕರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಯ ಭವಿಷ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.ಪೊಲೀಸರು ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಳ್ಳಬೇಕು ಎಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page