Thursday, January 8, 2026

ಸತ್ಯ | ನ್ಯಾಯ |ಧರ್ಮ

ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ: ಸಚಿವ ಸಂಪುಟ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡುವ ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದ ಲಕ್ಷಾಂತರ ಆಸ್ತಿ ಮಾಲೀಕರಿಗೆ ಸರ್ಕಾರ ದೊಡ್ಡ ಗುಡ್ ನ್ಯೂಸ್ ನೀಡಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ರಾಜ್ಯದ ಬಿ-ಖಾತಾ ನಿವೇಶನಗಳು, ಕಟ್ಟಡಗಳು ಹಾಗೂ ಫ್ಲ್ಯಾಟ್‌ಗಳಿಗೆ ಎ-ಖಾತಾ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಇದರಿಂದ ರಾಜ್ಯಾದ್ಯಂತ ಸುಮಾರು 10 ಲಕ್ಷ ಕಟ್ಟಡಗಳಿಗೆ ನೇರ ಲಾಭವಾಗಲಿದೆ ಎಂದರು.

ಇಲ್ಲಿವರೆಗೆ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದ್ದ ಎ-ಖಾತಾ ವ್ಯವಸ್ಥೆಯನ್ನು ಇದೀಗ ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಇತರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೂ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಇದರಿಂದ ಆಸ್ತಿ ದಾಖಲೆಗಳ ಸರಳೀಕರಣ, ಪಾರದರ್ಶಕತೆ ಮತ್ತು ಕಾನೂನು ಮಾನ್ಯತೆ ಮತ್ತಷ್ಟು ಬಲಗೊಳ್ಳಲಿದೆ ಎಂದು ಸಚಿವರು ಹೇಳಿದರು.

ಈ ನಿರ್ಧಾರದಿಂದ ಬಿ-ಖಾತಾ ಹೊಂದಿರುವ ಆಸ್ತಿ ಮಾಲೀಕರಿಗೆ ಸಾಲ ಸೌಲಭ್ಯ, ನೋಂದಣಿ ಹಾಗೂ ಸರ್ಕಾರಿ ಸೇವೆಗಳನ್ನು ಪಡೆಯುವುದು ಸುಲಭವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page