Home ರಾಜ್ಯ ಶಿವಮೊಗ್ಗ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಎಂಬುದು ಕೇವಲ ಹೇಳಿಕೆಗಳು : ಬೊಮ್ಮಾಯಿ ಸ್ಪಷ್ಟನೆ

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಎಂಬುದು ಕೇವಲ ಹೇಳಿಕೆಗಳು : ಬೊಮ್ಮಾಯಿ ಸ್ಪಷ್ಟನೆ

0

ಶಿವಮೊಗ್ಗ: ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗುರುವಾರದಂದು ಭದ್ರಾವತಿ ಹೆಲಿಪ್ಯಾಡ್ ಬೊಮ್ಮನಕಟ್ಟೆ ಹತ್ತಿರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿಯವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಹಿಜಾಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಯಿಸಿ, ಇದು ಸತ್ಯಕ್ಕೆ ದೂರವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ  ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದ್ದಾರೆ.

You cannot copy content of this page

Exit mobile version