ಜಮ್ಮು: ಆರು ತಿಂಗಳ ಹಸುಗೂಸನ್ನು ಅಪಹರಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.
ಘಟನೆ ಕುರಿತು ತನಿಖೆ ನಡೆದಿದ್ದು, ಬುರ್ಖಾ ತೊಟ್ಟ ಮಹಿಳೆಯೊಬ್ಬರು ಮಧ್ಯಾಹ್ನ 12.30ರ ಸುಮಾರಿಗೆ ಮಗುವನ್ನು ಆಸ್ಪತ್ರೆಯಿಂದ ಅಪಹರಿಸುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಹೀಗಾಗಿ ಆಕೆಯನ್ನು ಸೆರೆಹಿಡಿಯಲು ಮತ್ತು ಮಗುವನ್ನು ರಕ್ಷಿಸಲು ಹುಡುಕಾಟವನ್ನು ಪ್ರಾರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ಹಿನ್ನಲೆ ಮಗುವಿನ ಬಗ್ಗೆ ಮಾಹಿತಿ ನೀಡಿದವರಿಗೆ ₹ 10,000 ರೂ. ಬಹುಮಾನವನ್ನು ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.