Home ರಾಜಕೀಯ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಪಕ್ಷ ಬೆಂಬಲ ಘೋಷಿಸಿದ ಆಮ್‌ ಆದ್ಮಿ

ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಪಕ್ಷ ಬೆಂಬಲ ಘೋಷಿಸಿದ ಆಮ್‌ ಆದ್ಮಿ

0

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಶಾಸಕ ಸ್ಥಾನವನ್ನು ಗೆದ್ದಿರುವ ಆಮ್ ಆದ್ಮಿ ಪಕ್ಷ (ಎಎಪಿ) ಶುಕ್ರವಾರ ಮಧ್ಯಾಹ್ನ ಪ್ರಮುಖ ಘೋಷಣೆ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರ ಹಿಡಿಯಲಿರುವ ನ್ಯಾಶನಲ್ ಕಾನ್ಫರೆನ್ಸ್ ಪಕ್ಷವನ್ನು (ಜೆಕೆಎನ್‌ಸಿ) ಬೆಂಬಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅದೇ ರೀತಿ ನ್ಯಾಷನಲ್ ಕಾನ್ಫರೆನ್ಸ್ ಗೆ ಬೆಂಬಲ ಸೂಚಿಸಿ ಲೆಫ್ಟಿನೆಂಟ್ ಗವರ್ನರ್ ಗೆ ಪತ್ರ ಸಲ್ಲಿಸಲಾಯಿತು.

ಇತ್ತೀಚಿನ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ, ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು 90 ಸ್ಥಾನಗಳಲ್ಲಿ 42 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 29 ಸ್ಥಾನಗಳನ್ನು ಗೆದ್ದಿದೆ. ಆರು ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ಆರು ಸ್ಥಾನಗಳನ್ನು ಪಕ್ಷೇತರರು ಗೆದ್ದಿದ್ದಾರೆ. ಎಎಪಿ ಒಂದು ಸ್ಥಾನ ಗಳಿಸಿದೆ.

ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಪಕ್ಷಗಳು ಒಟ್ಟಾಗಿ ಸರ್ಕಾರ ರಚಿಸಲಿವೆ. ಆ ನಿಟ್ಟಿನಲ್ಲಿ ಈಗಾಗಲೇ ಕಸರತ್ತು ಶುರುವಾಗಿದೆ. ಈ ನಡುವೆ ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ಘೋಷಿಸುತ್ತಿರುವುದಾಗಿ ಎಎಪಿ ಹೇಳಿದೆ.

You cannot copy content of this page

Exit mobile version