Home ದೇಶ ಗುಜರಾತ್: ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ಮೋದಿ ಫೋಟೋ ತೆಗೆಯುವಂತೆ ಎಎಪಿಯಿಂದ ಚುನಾವಣಾ ಆಯೋಗಕ್ಕೆ ಮನವಿ

ಗುಜರಾತ್: ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ಮೋದಿ ಫೋಟೋ ತೆಗೆಯುವಂತೆ ಎಎಪಿಯಿಂದ ಚುನಾವಣಾ ಆಯೋಗಕ್ಕೆ ಮನವಿ

0

ಅಹ್ಮದಾಬಾದ್: ಗುಜರಾತ್‌ನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಚೇರಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳನ್ನು ಪ್ರದರ್ಶಿಸಲು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಅವರ ಭಾವಚಿತ್ರಗಳನ್ನು ತೆಗೆದುಹಾಕಲು ಅಥವಾ ಮುಚ್ಚಲು ನಿರ್ದೇಶನ ನೀಡುವಂತೆ ಆಮ್ ಆದ್ಮಿ ಪಕ್ಷ ಸೋಮವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಮೋದಿಯವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸ್ಟಾರ್ ಪ್ರಚಾರಕ ಎಂದು ಘೋಷಿಸಲ್ಪಟ್ಟಿರುವುದರಿಂದ, ಸರ್ಕಾರಿ ಕಚೇರಿಗಳಲ್ಲಿ ಅವರ ಛಾಯಾಚಿತ್ರಗಳು ನೀತಿ ಸಂಹಿತೆಯ ಉಲ್ಲಂಘನೆಗೆ ಕಾರಣವಾಗಿವೆ ಎಂದು ಎಎಪಿಯ ಕಾನೂನು ಘಟಕದ ಗುಜರಾತ್ ಕಾರ್ಯದರ್ಶಿ ಪುನೀತ್ ಜುನೇಜಾ ಹೇಳಿದ್ದಾರೆ.

ಎಎಪಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮನವಿಯಲ್ಲಿ ,ಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ಪಕ್ಷದ ಸ್ಟಾರ್ ಪ್ರಚಾರಕನ ಛಾಯಾಚಿತ್ರಗಳು ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಲಾಗಿದೆ. ಆದ್ದರಿಂದ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಹಿತದೃಷ್ಟಿಯಿಂದ, ರಾಜ್ಯದಾದ್ಯಂತ ಎಲ್ಲಾ ಕಚೇರಿಗಳಲ್ಲಿ ಪ್ರಧಾನಿ ಮೋದಿ ಅವರ ಛಾಯಾಚಿತ್ರಗಳನ್ನು ತೆಗೆದುಹಾಕಲು ಅಥವಾ ಮುಚ್ಚಲು ನಿರ್ದೇಶನಗಳನ್ನು ನೀಡಬಹುದು ಎಂದು ತಿಳಿಸಲಾಗಿದೆ.

ʼಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ಪಕ್ಷದ ಸ್ಟಾರ್ ಪ್ರಚಾರಕರ ಛಾಯಾಚಿತ್ರಗಳ ಪರಿಣಾಮವು ಚುನಾವಣೆಯ ಮೇಲೆ ಪ್ರಭಾವ ಬೀರಬಹುದು, ಆದ್ದರಿಂದ, ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಹಿತದೃಷ್ಟಿಯಿಂದ ಸದರಿ ನಿರ್ದೇಶನಗಳನ್ನು ತಕ್ಷಣವೇ ಅಂಗೀಕರಿಸಬಹುದುʼ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಧಾನಿಯವರನ್ನು ಬಿಜೆಪಿಯ ಪ್ರಮುಖ ಪ್ರಚಾರಕ ಎಂದು ಘೋಷಿಸಲಾಗಿದೆ. ಆದ್ದರಿಂದ ಬಿಜೆಪಿಯ ಭವಿಷ್ಯವನ್ನು ಪ್ರಚಾರಮಾಡಿತ್ತಿದ್ದಾರೆ ದೂರಿನಲ್ಲಿ ಹೇಳಲಾಗಿದೆ.

ಸತತ ಏಳನೇ ಅವಧಿಗೆ ಸ್ಪರ್ಧಿಸುತ್ತಿರುವ ಆಡಳಿತಾರೂಢ ಬಿಜೆಪಿಗೆ ಎಎಪಿ ತನ್ನನ್ನು ತಾನು ಪ್ರಮುಖ ಪ್ರತಿಸ್ಪರ್ಧಿಯಾಗಿ ಇರಿಸಿಕೊಂಡಿದೆ.

You cannot copy content of this page

Exit mobile version