ಶಿವಮೊಗ್ಗ | ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ 3 ಸಾವು ಮೂವರು ಗಂಭೀರ

ಶಿವಮೊಗ್ಗ : ಇಂದು ಶಿವಮೊಗ್ಗದ ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದ್ದು, ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದರೆ. ಮೂವರ ಸ್ಥಿತಿ ಗಂಭೀರವಾಗಿದೆ.

ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನಪ್ಪಿದ್ದು ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನೋವಾ ಮತ್ತು ಸ್ವಿಫ್ಟ್ ಕಾರಿನ ನಡುವೆ ಈ ಅಪ‍ಘಾತ ನಡೆದಿದ್ದು, ಸ್ಥಳಕ್ಕೆ ಶಿವಮೊಗ್ಗದ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು