Home ಬೆಂಗಳೂರು ಎಲೆಕ್ಟ್ರಿಕ್ ಬೈಕ್‌ಗಳ ಗ್ಯಾರೇಜ್‌ಗೆ ಆಕಸ್ಮಿಕವಾಗಿ ಬೆಂಕಿ – ನೂರಾರು ಬೈಕ್ ಭಸ್ಮ

ಎಲೆಕ್ಟ್ರಿಕ್ ಬೈಕ್‌ಗಳ ಗ್ಯಾರೇಜ್‌ಗೆ ಆಕಸ್ಮಿಕವಾಗಿ ಬೆಂಕಿ – ನೂರಾರು ಬೈಕ್ ಭಸ್ಮ

ಬೆಂಗಳೂರು : ಎಲೆಕ್ಟ್ರಿಕ್ ಬೈಕ್‌ಗಳನ್ನು (EV Bike) ನಿಲ್ಲಿಸಿದ್ದ ಗ್ಯಾರೇಜ್‌ಗೆ ಆಕಸ್ಮಿಕವಾಗಿ ಬೆಂಕಿ (Fire Mishap) ಹೊತ್ತಿಕೊಂಡು ನೂರಾರು ಬೈಕ್‌ಗಳು ಸುಟ್ಟು ಕರಕಲಾದ ಘಟನೆ ಬೆಂಗಳೂರಿನ (Bengaluru) ಕೆಆರ್ ಪುರದ ಎನ್‌ಆರ್‌ಐ ಲೇಔಟ್‌ನಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ತೀವ್ರವಾಗಿ ಹರಡಿದ್ದು, ಗ್ಯಾರೇಜ್‌ನಲ್ಲಿದ್ದ ನೂರಾರು ಎಲೆಕ್ಟ್ರಿಕ್ ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆ ಎರಡು ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಸತತ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇನ್ನು ಬೆಂಕಿಯ ತೀವ್ರತೆಗೆ ಪಕ್ಕದಲ್ಲೇ ಇದ್ದ ಡಾ. ಸ್ಮಿತಾ ಕಿರಣ್ , ಸ್ಪೆಷಾಲಿಟಿ ಹೆಲ್ತ್ ಕೇರ್ ಹರಡಿದ್ದು ಈ ಆಸ್ಪತ್ರೆ ಕೂಡ ಸುಟ್ಟು ಭಸ್ಮವಾಗಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಅಗ್ನಿಶಾಮಕ ಇಲಾಖೆ ಹಾಗೂ ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

You cannot copy content of this page

Exit mobile version