Home ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿಗೆ ಆದೇಶಿಸಿದ ಕೋರ್ಟ್

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿಗೆ ಆದೇಶಿಸಿದ ಕೋರ್ಟ್

0

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರನ್ನು 5 ದಿನ ಪೊಲೀಸ್ ಕಸ್ಟಡಿಗೆ ಮುಂದುವರೆಸುವಂತೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಕೊಲೆ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಪೊಲೀಸ್ ತನಿಖೆಯ ಅಗತ್ಯವಿರುವ ಕಾರಣ ಆರೋಪಿಗಳನ್ನು ಇನ್ನಷ್ಟು ದಿನ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ಕೋರ್ಟ್ ಆದೇಶಿಸಿದೆ.

ಇಂದು ಎಲ್ಲಾ ಆರೋಪಿಗಳನ್ನು ಮೆಡಿಕಲ್ ಟೆಸ್ಟ್ ಗೆ ಒಳಪಡಿಸಿರುವ ಪೊಲೀಸರು ನಂತರ ಪೊಲೀಸ್ ವಾಹನದಲ್ಲಿ ಕರೆದುಕೊ೦ಡು ಕೋರ್ಟ್ ಗೆ ಹಾಜರುಪಡಿಸಿದರು.

ಪ್ರಕರಣ ಸಂಬಂಧ ಆರೋಪಿಗಳಿಂದ 10 ಮೊಬೈಲ್ ಸೀಜ್ ಮಾಡಲಾಗಿದೆ. 30 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಮೈಸೂರು, ಬೆಂಗಳೂರಿನ ಸ್ಥಳಗಳಲ್ಲಿ ಮಹಜರು ನಡೆಸಲಾಗಿದೆ ಎಂದು ಸರ್ಕಾರದ ಎಸ್ ಪಿ ಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಡಿಆರ್, ಟವರ್ ಡಂಪ್, ಮೊಬೈಲ್ ಸೇರಿ ಸಾಕ್ಷ್ಯಗಳ ಕಲೆ ಹಾಕಿರುವ ಪೊಲೀಸರು ಮಾಹಿತಿ ಆಧರಿಸಿ ಕೊಲೆ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಅನೇಕ ಮಾಹಿತಿಗಳನ್ನು ಕಲೆ ಹಾಕಲಾಗಿದ್ದು, ತನಿಖೆ ಚುರುಕುಗೊಂಡಿದೆ.

You cannot copy content of this page

Exit mobile version