ಸಕಲೇಶಪುರ : ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಚೀವರ್ಸ್ ಪ್ರಜ್ಞಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಕ್ರಿಸ್ಟನ್ ಡಿ ಸಿಲ್ವಾ ಹಾಗೂ ಮೊಹಮ್ಮದ್ ಶಿಯಾನ್ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕ್ರಸ್ಟನ್ ಡಿ ಸಿಲ್ವಾ ಅವರು 110 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಹಾಗೂ ಮೊಹಮ್ಮದ್ ಶಿಯಾನ್ ಅವರು 100 ಮೀಟರ್ ಓಟ ಸ್ಪರ್ಧೆಯಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಇದಕ್ಕೂ ಮೊದಲು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದ ಈ ಇಬ್ಬರು ವಿದ್ಯಾರ್ಥಿಗಳು, ಇದೀಗ ಜಿಲ್ಲಾ ಮಟ್ಟದಲ್ಲಿಯೂ ಅಮೋಘ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ರಾಜ್ಯ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
