ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆಸಿಡ್ ಎರಚಿದ್ದಾನೆ. ಸಂತ್ರಸ್ತರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಮುಖಕ್ಕೆ ಗಂಭೀರ ಗಾಯಗಳಾಗಿವೆ.
ವಿದ್ಯಾರ್ಥಿಗಳು ಶಾಲೆಯ ವರಾಂಡದಲ್ಲಿ ಓದಿನಲ್ಲಿ ಮಗ್ನರಾಗಿದ್ದ ವೇಳೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ತನ್ನ ಗುರುತನ್ನು ಮರೆಮಾಚಲು ಮಾಸ್ಕ್ ಮತ್ತು ಟೋಪಿ ಧರಿಸಿದ್ದ ದುಷ್ಕರ್ಮಿ ವಿದ್ಯಾರ್ಥಿಗಳ ಮೇಲೆ ಆಸಿಡ್ ಎರಚಿದ್ದಾನೆ.
ಗಾಯಗೊಂಡವರನ್ನು ತಕ್ಷಣ ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಗಾಯಗಳಾಗಿರುವ ಕಾರಣ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.
ದುಷ್ಕರ್ಮಿಯು ಕೇರಳ ಮೂಲದ ವ್ಯಕ್ತಿ ಎಂದು ಎನ್ನಲಾಗಿದೆ. ಅಧಿಕಾರಿಗಳು ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಲು ಮುಂದಾಗಿದ್ದಾರೆ.