Friday, December 12, 2025

ಸತ್ಯ | ನ್ಯಾಯ |ಧರ್ಮ

ಕೃಷಿ ಭೂಮಿ ಪರಿವರ್ತನೆ ಸರಳೀಕರಣಕ್ಕೆ ಕಾಯ್ದೆ ತಿದ್ದುಪಡಿ – ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ : ರಾಜ್ಯದಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಧಾನ ಪರಿಷತ್  ಪ್ರಶ್ನೋತ್ತರ ಕಾಲದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ಅಲ್ಲದೇ ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವೂ 2025ರ ಸೆ.17ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕರೆವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೂವ್ ಮಾಡಿಸಿಕೊಳ್ಳಬಹುದಾಗಿದೆ. ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪರಿವರ್ತನೆ ಅಗತ್ಯವಿಲ್ಲ. ಕಂದಾಯ ನ್ಯಾಯಾಲಯ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ. ಇನ್ನೊಂದು ತಿಂಗ

Related Articles

ಇತ್ತೀಚಿನ ಸುದ್ದಿಗಳು

You cannot copy content of this page